ಉಡುಪಿ : ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲು
Recommended Video

ಉಡುಪಿ : ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲು | Oneindia Kannada
ಉಡುಪಿ, ಅಕ್ಟೋಬರ್ 26 : ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ದಿನಗಳ ಕಾಲ ಶ್ರೀಗಳಿಗೆ ಚಿಕಿತ್ಸೆ ನೀಡುವ ಸಾಧ್ಯತೆ ಇದೆ.
86 ವರ್ಷದ ವಿಶ್ವೇಶತೀರ್ಥ ಶ್ರೀಗಳಿಗೆ ತಿಂಗಳ ಹಿಂದೆ ಹರ್ನಿಯಾ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಬುಧವಾರ ರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಕ್ಯಾನಿಂಗ್ ನಡೆಸಬೇಕು ಹಾಗೂ ಚಿಕಿತ್ಸೆ ನೀಡಬೇಕು ಎಂದು ವೈದ್ಯರು ಹೇಳಿದ್ದಾರೆ.

ಬುಧವಾರ ರಾತ್ರಿಯ ಪೂಜೆ ಮುಗಿಸಿದ ಬಳಿಕ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ವಾಮೀಜಿ ಆರೋಗ್ಯವಾಗಿದ್ದಾರೆ ಭಕ್ತರು ಆತಂಕಪಡುವ ಅಗತ್ಯವಿಲ್ಲ ಎಂದು ಮಠದ ಅಧಿಕಾರಿಗಳು ಹೇಳಿದ್ದಾರೆ. ಶ್ರೀಗಳಿಗೆ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಸಾಧ್ಯತೆ ಇದೆ.












Click it and Unblock the Notifications