ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕದಲ್ಲಿ ಲವ್ ಜಿಹಾದ್ ಕಾನೂನು ಕುರಿತು ಗೃಹ ಸಚಿವರ ಮಹತ್ವದ ಹೇಳಿಕೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಡಿಸೆಂಬರ್ 3: ಕರ್ನಾಟಕದಲ್ಲೂ ಲವ್ ಜಿಹಾದ್ ವಿರುದ್ಧ ಕಾನೂನು ತಂದೇ ತರುತ್ತೇವೆ, ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಉಡುಪಿಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ವಿಚಾರದಲ್ಲಿ ಯಾವುದೇ ಗೊಂದಲಗಳು ಇಲ್ಲ. ಕರ್ನಾಟಕದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಬಂದೇ ಬರುತ್ತದೆ ಎಂದು ಸ್ಪಷ್ಟಪಡಿಸಿದರು.

ಉಡುಪಿಯ ಕೃಷ್ಣ ಮಠದಲ್ಲಿ ಕನ್ನಡ ಮಾಯ! ಏಕಾಏಕಿ ಬದಲಾಯಿತೇಕೆ ಫಲಕ?ಉಡುಪಿಯ ಕೃಷ್ಣ ಮಠದಲ್ಲಿ ಕನ್ನಡ ಮಾಯ! ಏಕಾಏಕಿ ಬದಲಾಯಿತೇಕೆ ಫಲಕ?

ಅಲಹಾಬಾದ್ ಹೈಕೋರ್ಟ್ ಲವ್ ಜಿಹಾದ್ ವಿಚಾರದಲ್ಲಿ ಆದೇಶ ಕೊಟ್ಟಿದೆ. ಉತ್ತರ ಪ್ರದೇಶ , ಹರಿಯಾಣ, ಮಧ್ಯಪ್ರದೇಶದಲ್ಲಿ ಈ ಕಾನೂನು ಜಾರಿಗೆ ತರುವ ಅಲ್ಲಿನ ಸರ್ಕಾರಗಳು ಚಿಂತನೆ ಮಾಡಿವೆ. ಕರ್ನಾಟಕ ಸರ್ಕಾರ ಕೂಡ ಈ ಬಗ್ಗೆ ಚಿಂತನೆಯನ್ನು ನಡೆಸಿದೆ ಎಂದರು.

We Will Implement Law To Ban Love Jihad In Karnataka: Home Minister Basavaraj Bommai

ಉತ್ತರಪ್ರದೇಶ ಸರಕಾರ ಈಗಾಗಲೇ ಅಧಿಸೂಚನೆಯನ್ನು ಹೊರಡಿಸಿದ್ದು, ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ಹೇಗೆ ಜಾರಿಗೆ ತರಬೇಕು, ಯಾವ ಅಂಶಗಳನ್ನು ಸೇರಿಸಬೇಕು ಎಂದು ಉತ್ತರ ಪ್ರದೇಶ ಸರ್ಕಾರ ಹೊರಡಿಸಿರುವ ಅಧಿಸೂಚನೆಯ ಪ್ರತಿಗಳನ್ನು ಪಡೆದುಕೊಳ್ಳಲು ಅಧಿಕಾರಿಗಳಿಗೆ ಹೇಳಿದ್ದೇನೆ ಎಂದು ಗೃಹ ಸಚಿವ ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕೂಡ ಇದನ್ನು ಒಪ್ಪಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾರ್ಯಕಾರಿಣಿಯಲ್ಲಿ ಕೂಡ ಇದನ್ನು ಘೋಷಣೆ ಮಾಡಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

Recommended Video

ODI ಪಾಯಿಂಟ್ಸ್ ಟೇಬಲ್ ಅಲ್ಲಿ Pakistan ಟಾಪ್! | Oneindia Kannada

ಲವ್ ಜಿಹಾದ್ ಕುರಿತು ಮುನ್ನೂರು ವರ್ಷದಿಂದ ಲವ್ ಜಿಹಾದ್ ಇದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯ್ಯನವರು ಇನ್ನೂ ಮೊಘಲ್ ಶಕೆಯಲ್ಲಿ ಬದುಕುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

English summary
In Karnataka, we are bringing a law against Love Jihad in which there is no confusion, Home Minister Basavaraj Bommai said in Udupi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X