ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಪತ್ತೆಯಾದ ಮೀನುಗಾರರು ಸುರಕ್ಷಿತವಾಗಿ ಬರುತ್ತಾರೆ ಎಂಬ ನಂಬಿಕೆಯಿದೆ: ಜಯಮಾಲ

|
Google Oneindia Kannada News

ಉಡುಪಿ, ಜನವರಿ 07: ಕಡಲಿನೊಂದಿಗೆ ಸಂಘರ್ಷಕ್ಕೆ ಇಳಿದು ಬದುಕನ್ನು ಕಟ್ಟಿಕೊಳ್ಳುವ ಮೀನುಗಾರರನ್ನು ಯಾರೂ ಕೂಡ ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ. 7 ಮಂದಿ ಮೀನುಗಾರರು ನಾಪತ್ತೆಯಾದ ಪ್ರಕರಣ ದಾಖಲಾದ ಮರುದಿನದಿಂದಲೇ ರಾಜ್ಯ ಸರಕಾರ ಶೋಧ ಕಾರ್ಯಾಚರಣೆ ಆರಂಭಿಸಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ ಹೇಳಿದ್ದಾರೆ.

ನಾಪತ್ತೆಯಾದ 7 ಮೀನುಗಾರರ ಪತ್ತೆಗೆ ಒತ್ತಾಯಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆನಾಪತ್ತೆಯಾದ 7 ಮೀನುಗಾರರ ಪತ್ತೆಗೆ ಒತ್ತಾಯಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ

ಮಲ್ಪೆ ಮೀನುಗಾರರ ಸಂಘದಿಂದ ಜ.06 ಭಾನುವಾರದಂದು ಮನವಿ ಸ್ವೀಕರಿಸಿ ಮಾತನಾಡಿದ ಅವರು, ನಿಮ್ಮ ನೋವು ನಮಗೆ ಅರ್ಥ ಆಗುತ್ತದೆ. ಏಳು ಕುಟುಂಬದ ಜೊತೆ ಇಡೀ ಕರ್ನಾಟಕವೇ ಇದೆ.

 ದೋಣಿ, ಮೀನುಗಾರರ ಪತ್ತೆಗೆ ಕೇಂದ್ರ ಗೃಹ ಸಚಿವರನ್ನು ಭೇಟಿಯಾದ ಮುಖಂಡರು ದೋಣಿ, ಮೀನುಗಾರರ ಪತ್ತೆಗೆ ಕೇಂದ್ರ ಗೃಹ ಸಚಿವರನ್ನು ಭೇಟಿಯಾದ ಮುಖಂಡರು

ಮಹಾರಾಷ್ಟ್ರ, ಗೋವಾ, ಕೇರಳ ಎಲ್ಲಾ ಸರಕಾರಗಳ ಜೊತೆ ಸೇರಿ ಶೋಧ ಕಾರ್ಯ ಮಾಡುತ್ತಲೇ ಇದ್ದೇವೆ. ದಿನಕ್ಕೆ ನಾಲ್ಕು ಗಂಟೆಗಳ ಕಾಲ ಹೆಲಿಕಾಪ್ಟರ್ ನಲ್ಲಿ ಕುರುಹುಗಳಿಗಾಗಿ ಹುಡುಕಾಟ ಮಾಡುತ್ತಿದ್ದೇವೆ. ಏಳು ಜೀವಗಳು ಸುರಕ್ಷಿತವಾಗಿ ಬರುತ್ತದೆ ಎಂಬ ನಂಬಿಕೆಯಲ್ಲಿ ನಾನು ಕೂಡ ಇದ್ದೇನೆ. ಅವರನ್ನು ಹುಡುಕಿ ತರುವುದು ನಮ್ಮ ಜವಾಬ್ದಾರಿ. ಇದಕ್ಕೆ ಸರಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.

We will trace missing 7 fisherman: Jayamala

ಈ ನಿಟ್ಟಿನಲ್ಲಿ ನೌಕಪಡೆ ಕೂಡ ಕೆಲಸ ಮಾಡುತ್ತಿದ್ದು, ಮುಖ್ಯಮಂತ್ರಿ ಮತ್ತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಕೇಂದ್ರ ಸರಕಾರದ ನೆರವು ಪಡೆದುಕೊಂಡು ರಾಜ್ಯ ಸರಕಾರ ಎಲ್ಲ ರೀತಿಯ ಕೆಲಸ ಮಾಡುತ್ತದೆ ಎಂದು ಜಯಮಾಲ ತಿಳಿಸಿದರು.

English summary
Minister Jayamala said that state and central government will trace missing 7 fishermen very soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X