ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ; ವಾರಾಂತ್ಯದ ಕರ್ಫ್ಯೂ ತೆರವು, ಮಾರ್ಗಸೂಚಿ ಪಾಲನೆ ಕಡ್ಡಾಯ

|
Google Oneindia Kannada News

ಉಡುಪಿ, ಸೆಪ್ಟೆಂಬರ್ 10; ಉಡುಪಿ ಜಿಲ್ಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ವಾರಾಂತ್ಯದ ಕರ್ಫ್ಯೂ ರದ್ದುಪಡಿಸಲಾಗಿದೆ. ಪ್ರಸ್ತುತ ಜಾರಿಯಲ್ಲಿರುವ ಕೋವಿಡ್ ಮಾರ್ಗಸೂಚಿಗಳನ್ನು ದಿನಾಂಕ 27/9/2021ರವರೆಗೆ ಮುಂದುವರಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರ ಗುರುವಾರ ಉಡುಪಿ, ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲೆಯಲ್ಲಿ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಲು ಆದೇಶ ನೀಡಿತ್ತು. ಉಡುಪಿ ಜಿಲ್ಲಾಡಳಿತ ವಾರಾಂತ್ಯ ಕರ್ಫ್ಯೂ ತೆರವುಗೊಳಿಸುವ ಕುರಿತು ಶುಕ್ರವಾರ ತೀರ್ಮಾನ ಕೈಗೊಂಡಿದೆ.

ಉಡುಪಿ ಜಿಲ್ಲಾ ಕೋರ್ಟ್‌ನಲ್ಲಿ ವಿವಿಧ ಹುದ್ದೆ ಖಾಲಿ ಇದೆ ಉಡುಪಿ ಜಿಲ್ಲಾ ಕೋರ್ಟ್‌ನಲ್ಲಿ ವಿವಿಧ ಹುದ್ದೆ ಖಾಲಿ ಇದೆ

ಸರ್ಕಾರದ ಪತ್ರದಂತೆ ಅಗತ್ಯ ಸೂಚನೆಗಳನ್ನು ಮೌಲ್ಯಮಾಪನದ ಪ್ರಕಾರ ವಾರಾಂತ್ಯದ ಕರ್ಫ್ಯೂಗೆ ಸಂಬಂಧಿಸಿದಂತೆ ನಿರ್ಧರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಯವರಿಗೆ ನೀಡಲಾಗಿದೆ. 30/8/2021ರ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

ಉಡುಪಿ; ವಾರಂತ್ಯದ ಕರ್ಫ್ಯೂಗೆ ವಿರೋಧ, ತಿರುಗಿಬಿದ್ದ ಶಾಸಕರು! ಉಡುಪಿ; ವಾರಂತ್ಯದ ಕರ್ಫ್ಯೂಗೆ ವಿರೋಧ, ತಿರುಗಿಬಿದ್ದ ಶಾಸಕರು!

ಈ ಹಿಂದೆ ಉಡುಪಿ ಜಿಲ್ಲಾಧಿಕಾರಿ ಎಂ. ಕೂರ್ಮರಾವ್ ಸೆಪ್ಟೆಂಬರ್ 3 ರಿಂದ 13ರ ತನಕ ವಾರಾಂತ್ಯದ ಕರ್ಫ್ಯೂ ಜಿಲ್ಲೆಯಲ್ಲಿ ಜಾರಿಯಲ್ಲಿರುತ್ತದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯ ತನಕ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ರದ್ದುಪಡಿಸಲಾಗಿದೆ.

Breaking news; ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಿ ಆದೇಶ Breaking news; ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಿ ಆದೇಶ

ವಾರಾಂತ್ಯದ ಕರ್ಫ್ಯೂ ತೆರವು

ವಾರಾಂತ್ಯದ ಕರ್ಫ್ಯೂ ತೆರವು

ಗುರುವಾರ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಉಡುಪಿ ಜಿಲ್ಲೆಯಲ್ಲಿ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಲು ಆದೇಶ ನೀಡಿದ್ದರು. ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಮತ್ತೆ ಕರ್ಫ್ಯೂ ಜಾರಿಗೊಳಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ಉಡುಪಿಯಲ್ಲಿ ಗುರುವಾರದ ಹೆಲ್ತ್ ಬುಲೆಟಿನ್‌ ಪ್ರಕಾರ 126 ಹೊಸ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 1617. ಇದುವರೆಗೂ ಜಿಲ್ಲೆಯಲ್ಲಿ 465 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 74864.

ಮಾರ್ಗಸೂಚಿ ಜಾರಿಯಲ್ಲಿರಲಿದೆ

ಮಾರ್ಗಸೂಚಿ ಜಾರಿಯಲ್ಲಿರಲಿದೆ

ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ. ಆದರೆ ಪ್ರಸ್ತುತ ಜಾರಿಯಲ್ಲಿರುವ ಕೋವಿಡ್ ಮಾರ್ಗಸೂಚಿಗಳನ್ನು ದಿನಾಂಕ 27/9/2021ರವರೆಗೆ ಮುಂದುವರಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಅಲ್ಲದೇ ಈಗ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂ ಜಿಲ್ಲೆಯಲ್ಲಿ ಮುಂದುವರೆಯಲಿದೆ. ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯ ತನಕ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಡಳಿತ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಿದೆ.

ಮಾರ್ಗಸೂಚಿಯಲ್ಲಿ ಏನಿದೆ?

ಮಾರ್ಗಸೂಚಿಯಲ್ಲಿ ಏನಿದೆ?

ಕೋವಿಡ್ ಮಾರ್ಗಸೂಚಿ ಅನ್ವಯ ಷರತ್ತುಗಳೊಂದಿಗೆ ಕ್ರೀಡಾಪಟುಗಳಿಗೆ ಅಭ್ಯಾಸಕ್ಕೆ ಮಾತ್ರ ಕ್ರೀಡಾ ಸಂಕೀರ್ಣಗಳನ್ನು ಬಳಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪ್ರೇಕ್ಷಕರಿಗೆ ಅನುಮತಿ ಇಲ್ಲ.

ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನಾ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಇತರೆ ಸಭೆ ಸಮಾರಂಭಗಳನ್ನು ಮತ್ತು ಸಾರ್ವಜನಿಕರು ಒಟ್ಟುಗೂಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಶುಭ ಸಮಾರಂಭಗಳಿಗೆ ಮಾರ್ಗಸೂಚಿ

ಶುಭ ಸಮಾರಂಭಗಳಿಗೆ ಮಾರ್ಗಸೂಚಿ

ಮದುವೆ/ ಕೌಟುಂಬಿಕ ಶುಭ ಸಮಾರಂಭಗಳನ್ನು ಆಯೋಜಿಸುವವರು ಆಮಂತ್ರಣ ಪತ್ರ ಅಥವ ಇತರ ಯಾವುದೇ ದಾಖಲೆಯೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್‌ಗೆ ಸಲ್ಲಿಕೆ ಮಾಡಬೇಕು. ಅರ್ಜಿಯನ್ನು ಸ್ವೀಕಾರ ಮಾಡಿದ ಅವರು ಪ್ರತಿ ಮದುವೆ/ ಕೌಟುಂಬಿಕ ಕಾರ್ಯಕ್ರಮಕ್ಕೆ 400 ಪಾಸುಗಳನ್ನು ವಿತರಣೆ ಮಾಡಲಿದ್ದಾರೆ. ಪಾಸು ಹೊಂದಿರುವ ಜನರು ಮಾತ್ರ ಮುದುವೆ/ ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬಹುದು. ಪಾಸುಗಳನ್ನು ವರ್ಗಾವಣೆ ಮಾಡಲು ಸಹ ಅವಕಾಶವಿಲ್ಲ.

Recommended Video

Kohli ಹಾಗು Ronaldo ಭೇಟಿ ಮಾಡಿಸಲು ಮುಂದಾದ ಅಭಿಮಾನಿಗಳು | Oneindia Kannada
ಮಾರ್ಗಸೂಚಿ ಪಾಲನೆ ಕಡ್ಡಾಯ

ಮಾರ್ಗಸೂಚಿ ಪಾಲನೆ ಕಡ್ಡಾಯ

ಮಾರ್ಗಸೂಚಿಗಳ ಅನ್ವಯ ಅಂತ್ಯ ಸಂಸ್ಕಾರದಲ್ಲಿ 20 ಜನರು ಪಾಲ್ಗೊಳ್ಳಬಹುದು. ದೇವಾಲಯ/ ಚರ್ಚ್/ ಮಸೀದಿ/ ಗುರುದ್ವಾರ ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಜಾತ್ರೆ, ಉತ್ಸವ/ ಹಬ್ಬ, ಮೆರವಣಿಗೆ ಮಾಡುವುದನ್ನು ನಿಷೇಧಿಸಲಾಗಿದೆ.

ಕೋವಿಡ್ ಮಾರ್ಗಸೂಚಿ ಅನ್ವಯ ಸಾರ್ವಜನಿಕ ಸಾರಿಗೆಗಳಲ್ಲಿ ಶೇ 100ರಷ್ಟು ಜನರು ಪ್ರಯಾಣ ಮಾಡಲು ಅನುಮತಿ ನೀಡಲಾಗಿದೆ. ಸಿನಿಮಾ ಹಾಲ್/ ಮಲ್ಟಿಪ್ಲೆಕ್ಸ್‌/ ಚಿತ್ರಮಂದಿರ/ ರಂಗಮಂದಿರಗಳು ಶೇ 50ರಷ್ಟು ಭರ್ತಿ ಮಾಡಲು ಒಪ್ಪಿಗೆ ಕೊಡಲಾಗಿದೆ.

English summary
Kurma Rao M. Udupi deputy commissioner ordered to lift weekend curfew in Udupi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X