ಬೆಂಗಳೂರಿನಲ್ಲಿ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ: ಈ ಬಾರಿಯ ವಿಶೇಷತೆಗಳೇನು..?
ಬೆಂಗಳೂರು, ಜುಲೈ 08: ಈ ಬಾರಿ ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನ ನಡೆಸಲು ನಿರ್ಧರಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕುಂದಗನ್ನಡ ಲೋಕವನ್ನು ಭರ್ಜರಿಯಾಗಿ ಅನಾವರಣಗೊಳಿಸುವ ಈ ಕಾರ್ಯಕ್ರಮ ಆಗಸ್ಟ್ 17 ಮತ್ತು 18ರಂದು ಅರಮನೆ ಮೈದಾನದ ವೈಟ್ ಪೆಟಲ್ಸ್‌ನಲ್ಲಿ ನಡೆಯಲಿದೆ.
ಈ ವರ್ಷ ಬೆಂಗಳೂರಿನಲ್ಲಿ ನಡೆಸುವ ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯ ವಿಶೇಷತೆಯ ಬಗ್ಗೆ ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ದೀಪಕ್ ಶೆಟ್ಟಿ ಬಾರ್ಕೂರು ತಿಳಿಸಿದ್ದು, ಮೊದಲ ಬಾರಿಗೆ ಅರಮನೆ ಮೈದಾನದಲ್ಲಿ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಆಚರಿಸಲಾಗುತ್ತಿದೆ. ಎರಡು ದಿನಗಳ ಈ ಕಾರ್ಯಕ್ರಮ 'ದಿಬ್ಣ'ದೊಂದಿಗೆ ಆರಂಭವಾಗಲಿದೆ. ಅದರಲ್ಲಿ ಬೆಂಗಳೂರಿನ ಕನಿಷ್ಠ 10 ಕಡೆಗಳಿಂದ ಜನರು ಮೆರವಣಿಗೆ ಮೂಲಕ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಲಿದ್ದಾರೆ.

'ನಾಕ್ ಘನಾ ಸುರ್ಲ್' ಎಂಬ ಕರಾವಳಿಯ ಅದ್ಭುತ ಗೀತೆಗಳ ಗಾಯನವಿರಲಿದೆ. ನಂತರ 'ನುಡಿ ಚಾವಡಿ' ಎಂಬ ಕಾರ್ಯಕ್ರಮದ ಮೂಲಕ ಉದ್ಘಾಟನಾ ಸಮಾರಂಭ ನಡೆಯಲಿದೆ. ಅ.17ರ ರಾತ್ರಿ ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ 'ಜೋಡಾಟ' ನಡೆಯಲಿದೆ. ರಾಜ್ಯದ ಯಕ್ಷರಂಗದ ಮೇರು ಕಲಾವಿದರು ಭಾಗವಹಿಸಲಿರುವ ಈ ಯಕ್ಷಗಾನಕ್ಕೇ 15-20 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದಿದ್ದಾರೆ.
ಎರಡು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದ್ದು, ಈ ಬಗ್ಗೆ ಸಂಪೂರ್ಣವಾದ ವಿವರ ಇಲ್ಲಿದೆ.
* 'ಹಂದಾಡ್ತ ನೆಗ್ಯಾಡಿ': ಕುಂದಾಪ್ರ ಕನ್ನಡದ ನಗೆ ರಾಯಭಾರಿ ಮನು ಹಂದಾಡಿ ಅವರಿಂದ ನಗೆ ಪ್ರಹಸನ.
* 'ಬಯಲಾಟ': ಗ್ರಾಮೀಣ ಕ್ರೀಡೋತ್ಸವ
* 'ರಥೋತ್ಸವ': ಹಬ್ಬದ ರೀತಿಯಲ್ಲೇ ಭಾವಬೀದಿಯಲ್ಲಿ ಭಾಷೆಯ ತೇರು.
* 'ಪೆಟ್ಟ್ ಒಂದೇ, ಸ್ವರ ಬೇರೆ': ಆಫ್ರಿಕದ ಜಂಬೆ, ಕುಂದಾಪುರದ ಚೆಂಡೆ ಜುಗಲ್ ಬಂದಿ.
* 'ಭುಜಬಲದ ಪರಾಕ್ರಮ' ಹಗ್ಗಜಗ್ಗಾಟ 8 ಊರಿನ ಹೆಸರಲ್ಲಿ ತಂಡ.
* 'ಯಬ್ಯಾ ಸೌಂಡೇ': ರವಿ ಬಸ್ರೂರು ಅವರ ಶತಕುಂದ ಪದ್ಯಗಳ ಡಿಜೆ
* 'ಡ್ಯಾನ್ಸ್ ಕುಂದಾಪ್ರ ಡ್ಯಾನ್ಸ್': ವಿಶೇಷ ನೃತ್ಯ ಪ್ರದರ್ಶನ
* 'ಗಂಡಿನ್ ಪಿಚ್ಚರ್ ಬಿಡ್ತ್': ವಿಶೇಷ ಕಿರುಚಿತ್ರ ಪ್ರದರ್ಶನ
* 'ನಮ್ ಊರ್ಮನಿ ಪಿಚ್ಚರ್ ಯಾಕ್ಟ್ರ್ಸ್': ಊರಿನ ಸಿನಿತಾರೆಯರು, ಸೂಪರ್ ಸ್ಟಾರ್‌ಗಳ ಸಮಾಗಮ.
* 'ಕುಂದಾಪ್ರ ಸಂತಿ': ಕುಂದಾಪುರದಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಸಂತೆ.
* 'ಹೊಟ್ಟಿ ಕಂಡದ್ ನಾವೇ ಸೈ': ಕರಾವಳಿಯ ವಿಶೇಷ ಖಾದ್ಯ ಮೇಳ.












Click it and Unblock the Notifications