ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು?
Recommended Video

ಉಡುಪಿ, ಅಕ್ಟೋಬರ್ 09 : 2019ರ ಲೋಕಸಭೆ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾರು?. ಸದ್ಯದ ಮಾಹಿತಿಯಂತೆ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 19 ರಿಂದ 23 ಕ್ಷೇತ್ರಗಳಲ್ಲಿ ಜಯಗಳಿಸಬೇಕು ಎಂಬುದು ಕರ್ನಾಟಕ ಬಿಜೆಪಿಯ ಗುರಿ. ಅದಕ್ಕಾಗಿ ಗೆಲ್ಲುವ ಅಭ್ಯರ್ಥಿಗಳಿಗಾಗಿ ಪಕ್ಷ ಹುಡುಕಾಟ ನಡೆಸುತ್ತಿದೆ. ಕೆಲವು ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆಯೂ ಇದೆ.
2014ರ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರು 581,168 ಮತಗಳನ್ನು ಪಡೆದು ಜಯಗಳಿಸಿದ್ದರು. ಆದರೆ, ಕೆಲವು ದಿನಗಳ ಹಿಂದೆ ಮೈಸೂರಿನಲ್ಲಿ ಮಾತನಾಡಿದ್ದ ಅವರು, '2019ರ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ' ಎಂದು ಹೇಳಿದ್ದರು.
ಕರ್ನಾಟಕ ಬಿಜೆಪಿ ಲೋಸಕಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಅವರು ಈ ಬಾರಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ...

ಶೋಭಾ ಕರಂದ್ಲಾಜೆ ಹೇಳಿದ್ದೇನು?
ಜುಲೈ ತಿಂಗಳಿನಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಆಗ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, 'ಮುಂಬರುವ ಲೋಕಸಭೆ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ. ಸಮೀಕ್ಷೆ ಮೂಲಕ ಪಕ್ಷ ಅಭ್ಯರ್ಥಿ ಆಯ್ಕೆ ಮಾಡಲಿದೆ' ಎಂದು ಹೇಳಿದ್ದರು.

ಮೂವರ ಹೆಸರು ಕೇಳಿಬರುತ್ತಿದೆ
ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾರು?. ಮಾಜಿ ಸಚಿವ, ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಅವರ ಹೆಸರು ಕೇಳಿಬರುತ್ತಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಶಾಸಕ ಜೀವರಾಜ್ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ.

ಕ್ಷೇತ್ರ ಬದಲಾವವಣೆ
2019ರ ಚುನಾವಣೆಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಕ್ಷೇತ್ರ ಬದಲಾವಣೆ ಮಾಡಲಿದ್ದಾರೆ?. ಹಾಲಿ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿರುವ ಅವರು 2019ರಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ? ಎಂಬ ಸುದ್ದಿ ಹಬ್ಬಿದೆ. ಆದರೆ, ಯಾವ ನಾಯಕರು ಇನ್ನೂ ಈ ಕುರಿತು ಅಧಿಕೃತವಾದ ಹೇಳಿಕೆ ನೀಡಿಲ್ಲ.

ಜಯಪ್ರಕಾಶ್ ಹೆಗ್ಡೆ ಬಹುತೇಕ ಖಚಿತ
ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರು ಬಿಜೆಪಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. ಲೋಕಸಭೆಯಲ್ಲಿ ಅವರ ಸ್ಪರ್ಧಿಸಬೇಕು ಎಂಬ ಕಾರಣದಿಂದಲೇ 2018ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅವರಿಗೆ ಟಿಕೆಟ್ ನೀಡಿರಲಿಲ್ಲ.

ದಾಖಲೆಯ ಗೆಲುವು
2014ರಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಅವರು 581,168 ಮತಗಳನ್ನು ಪಡೆದು ಜಯಗಳಿಸಿದ್ದರು.
ಕಾಗ್ರೆಸ್‌ನ ಕೆ.ಜಯಪ್ರಕಾಶ್ ಹೆಗ್ಡೆ ಅವರು 399525 ಮತ ಪಡೆದಿದ್ದರು. ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಕೇಂದ್ರ ಸಚಿವ ವಿ.ಧನಂಜಯ್ ಕುಮಾರ್ 14,895 ಮತ ಪಡೆದಿದ್ದರು.












Click it and Unblock the Notifications