ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಲ್ಪೆ ಬೀಚ್ ನಲ್ಲಿ ವೈನ್ ಫೆಸ್ಟಿವಲ್: ವಿಶೇಷತೆಗಳು ಏನೇನಿವೆ?

|
Google Oneindia Kannada News

ಉಡುಪಿ, ಜನವರಿ 18: ಉಡುಪಿಯ ಪ್ರಸಿದ್ಧ ಮಲ್ಪೆ ಬೀಚ್ ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ದ್ರಾಕ್ಷಾರಸ ಉತ್ಸವ ನಡೆಯಲಿದೆ.

ಸಹ್ಯಾದ್ರಿ ಉತ್ಸವ:ಪ್ರವಾಸಿ ತಾಣಗಳ ವೀಕ್ಷಣೆಗೆ ಹೆಲಿಕ್ಯಾಪ್ಟರ್ ಆಯೋಜನೆಸಹ್ಯಾದ್ರಿ ಉತ್ಸವ:ಪ್ರವಾಸಿ ತಾಣಗಳ ವೀಕ್ಷಣೆಗೆ ಹೆಲಿಕ್ಯಾಪ್ಟರ್ ಆಯೋಜನೆ

ರಾಜ್ಯ ದ್ರಾಕ್ಷಾರಸ ಮಂಡಳಿಯು ಮಲ್ಪೆ ಅಭಿವೃದ್ಧಿ ಸಮಿತಿ, ಜಿಲ್ಲಾಡಳಿತ, ತೋಟಗಾರಿಕಾ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಅಬಕಾರಿ ಇಲಾಖೆಗಳ ಸಹಯೋಗದೊಂದಿಗೆ ಇಂದಿನಿಂದ ಮೂರು ದಿನಗಳ ಕಾಲ ಮಲ್ಪೆ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಬೀಚ್ ದ್ರಾಕ್ಷಾ ರಸ ಉತ್ಸವ ಹಮ್ಮಿಕೊಂಡಿದೆ.

 ಆಗಸದಿಂದ ಉಡುಪಿಯ ಕಣ್ತುಂಬಿಕೊಳ್ಳಲು ಆರಂಭವಾಗಿದೆ ಹೆಲಿಟೂರಿಸಂ ಆಗಸದಿಂದ ಉಡುಪಿಯ ಕಣ್ತುಂಬಿಕೊಳ್ಳಲು ಆರಂಭವಾಗಿದೆ ಹೆಲಿಟೂರಿಸಂ

ಈ ಉತ್ಸವದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರಗಳ ಸುಮಾರು 10ರಿಂದ 12 ವೈನರಿಗಳು ಭಾಗವಹಿಸಲಿದ್ದು, ಸುಮಾರು 150ಕ್ಕೂ ಅಧಿಕ ಬ್ರಾಂಡ್‌ ಗಳನ್ನು ಪ್ರದರ್ಶಿಸಲಾಗುವುದು. ಹಳೆಯ ವೈನ್ ಪ್ರದೇಶಗಳಾದ ಯುರೋಪ್ ಖಂಡ ಹಾಗೂ ಹೊಸ ವೈನ್ ಪ್ರದೇಶಗಳಾದ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಚಿಲಿ, ಅಮೇರಿಕಾ ಹಾಗೂ ಇತರ ದೇಶಗಳ ವೈನ್‌ಗಳ ಪ್ರದರ್ಶನ ಮತ್ತು ಮಾರಾಟವೂ ಇಲ್ಲಿ ನಡೆಯಲಿದೆ.

Wine festival in Malpe beach

ಆರೋಗ್ಯದ ದೃಷ್ಟಿಯಿಂದ ವೈನ್ ಬಳಕೆಯನ್ನು ಉತ್ತೇಜಿಸಲು, ವೈನ್ ದ್ರಾಕ್ಷಿ ಬೆಳೆಯುವ ಹಾಗೂ ವೈನ್ ತಯಾರಿಕೆ ಬಗ್ಗೆ ತರಬೇತಿ ಮತ್ತು ವೈನ್ ತಯಾರಕರು ಮತ್ತು ಸಾರ್ವಜನಿಕರ ನಡುವೆ ವಿಚಾರ ವಿನಿಮಯವನ್ನು ಉತ್ಸವದಲ್ಲಿ ಆಯೋಜಿಸಲಾಗಿದೆ. ಪ್ರದರ್ಶನದಲ್ಲಿ ವಿವಿಧ ಆಹಾರ ಪದಾರ್ಥಗಳ ಹಾಗೂ ತಿನಿಸು ಮಳಿಗೆಗಳನ್ನು ತೆರೆಯಲು ನಿರ್ಧರಿಸಲಾಗಿದೆ.

 ಕೊಡಗು ಪ್ರವಾಸಿ ಉತ್ಸವ: ಜನಮನ ಸೆಳೆದ ಓಪನ್ ಸ್ಟ್ರೀಟ್ ಫೆಸ್ಟಿವಲ್ ಕೊಡಗು ಪ್ರವಾಸಿ ಉತ್ಸವ: ಜನಮನ ಸೆಳೆದ ಓಪನ್ ಸ್ಟ್ರೀಟ್ ಫೆಸ್ಟಿವಲ್

ರಾಜ್ಯ ತೋಟಗಾರಿಕಾ ಸಚಿವ ಎಂ.ಸಿ. ಮನಗೊಳಿ ಅವರು ದ್ರಾಕ್ಷಾರಸ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

English summary
Karnataka wine Bord organised the three days wine festival in Malpe beach on january 18.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X