ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೃಷ್ಣನಗರಿಯಲ್ಲಿ ಈಗ ಮಹಿಳೆಯರೇ ಆಡಳಿತದ ಮುಖ್ಯಸ್ಥರು!

|
Google Oneindia Kannada News

ಉಡುಪಿ, ಫೆಬ್ರವರಿ 21:ಶ್ರೀ ಕೃಷ್ಣನ ನಾಡು ಉಡುಪಿ ಜಿಲ್ಲೆಯ ಸಂಪೂರ್ಣ ಆಡಳಿತ ಮಹಿಳೆಯರ ಕೈಯ್ಯಲ್ಲಿದೆ. ಉಡುಪಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಸಂಪೂರ್ಣ ಹೊಣೆಗಾರಿಕೆ ಮಹಿಳಾ ಶಕ್ತಿಯ ಮೇಲೆ ನಿಂತಿದೆ.

ಜಿಲ್ಲಾಧಿಕಾರಿ , ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ , ಜಿಲ್ಲಾ ಪಂಚಾಯತ್ ನ ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಸೇರಿದಂತೆ ಜಿಲ್ಲೆಯ ಆಡಳಿತ ಸೂತ್ರವೆಲ್ಲಾ ಮಹಿಳಾ ಮಣಿಗಳ ಕೈಯ್ಯಲ್ಲೇ ಇದೆ.

ಹೌದು, ಉಡುಪಿ ಜಿಲ್ಲೆಯಲ್ಲೀಗ ಮಹಿಳಾ ಸಾಮ್ರಾಜ್ಯ. ಜಿಲ್ಲಾಧಿಕಾರಿ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಅಪರ ಜಿಲ್ಲಾಧಿಕಾರಿ ಸೇರಿದಂತೆ ಉನ್ನತ ಅಧಿಕಾರದ ಆಡಳಿತ ಮತ್ತು ರಾಜಕೀಯದಲ್ಲಿ ಮಹಿಳೆಯರು ತಮ್ಮ ಪ್ರಾಬಲ್ಯ ಮೆರೆಯುತ್ತಿದ್ದಾರೆ.

ಶಿವಮೊಗ್ಗ ಇತಿಹಾಸದಲ್ಲೇ ಮೊದಲ ಮಹಿಳಾ ಎಸ್.ಪಿ. ಎಂಬ ಹೆಗ್ಗಳಿಕೆಗೆ ಪಾತ್ರರಾದ ಅಶ್ವಿನಿಶಿವಮೊಗ್ಗ ಇತಿಹಾಸದಲ್ಲೇ ಮೊದಲ ಮಹಿಳಾ ಎಸ್.ಪಿ. ಎಂಬ ಹೆಗ್ಗಳಿಕೆಗೆ ಪಾತ್ರರಾದ ಅಶ್ವಿನಿ

ಇಲ್ಲಿ ಇಡೀ ಆಡಳಿತ ಯಂತ್ರವನ್ನು ಮಹಿಳೆಯರೇ ನಿರ್ವಹಿಸುವಲ್ಲಿ ದಾಪುಗಾಲಿಟ್ಟಿದ್ದಾರೆ. ಇತ್ತೀಚೆಗಷ್ಟೆ ಉಡುಪಿ ಜಿಲ್ಲಾಧಿಕಾರಿಯಾಗಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧಿಕಾರ ವಹಿಸಿಕೊಂಡಿದ್ದರು. ಈ ನಡುವೆ ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ನಿಶಾ ಜೇಮ್ಸ್ ಅವರನ್ನು ರಾಜ್ಯ ಸರಕಾರ ನಿಯುಕ್ತಿಗೊಳಿಸಿದೆ.

ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಹಣಾಧಿಕಾರಿಯಾಗಿ ಸಿಂಧು ಬಿ.ರೂಪೇಶ್ ಕತ್ಯವ್ಯದಲ್ಲಿದ್ದಾರೆ. ವಿದ್ಯಾಕುಮಾರಿ ಕೆ. ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿದ್ದಾರೆ.

ಅದರಂತೆ ಜಿಲ್ಲೆಯ ರಾಜಕೀಯ ಪಾರುಪತ್ಯ ಕೂಡ ಮಹಿಳೆಯರ ಕೈಯ್ಯಲ್ಲೇ ಇದೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಯಮಾಲ ಅಧಿಕಾರ ಚಲಾಯಿಸುತ್ತಿದ್ದಾರೆ. ಇನ್ನೊಂದೆಡೆ ಶೋಭಾ ಕರಂದ್ಲಾಜೆ ಉಡುಪಿ ಲೋಕಸಭಾ ಕ್ಷೇತ್ರ ಸಂಸದರಾಗಿದ್ದಾರೆ. ಮುಂದೆ ಓದಿ...

ಮಹಿಳೆಯರು ಮಿಂಚುತ್ತಿದ್ದಾರೆ

ಮಹಿಳೆಯರು ಮಿಂಚುತ್ತಿದ್ದಾರೆ

ರಾಜಕೀಯ ಮತ್ತು ಸರಕಾರಿ ಇಲಾಖೆಗಳಲ್ಲಿ ಮಹಿಳೆಯರು ಮಿಂಚುತ್ತಿದ್ದಾರೆ. ಈ ಮೂಲಕ ಉಡುಪಿ ಜಿಲ್ಲೆಯ ಸಂಪೂರ್ಣ ಆಡಳಿತ ಮಹಿಳೆಯರ ಕೈಯ್ಯಲ್ಲಿದೆ. ಇಲ್ಲಿ ಅಧಿಕಾರಿಗಳ ನಡುವಿನ ಸಂವಹನ ಆರಾಮದಾಯಕವಾಗಿ ಪರಿಣಮಿಸಲಿದ್ದು, ಮುಂಬರುವ ಲೋಕಸಭಾ ಚುನಾವಣೆಯನ್ನು ಈ ಮಹಿಳಾ ಪಡೆಯೇ ಯಶಸ್ವಿಯಾಗಿ ನಿರ್ವಹಿಸಿದೆ.

 ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ಹೆಪ್ಸಿಬಾ ರಾಣಿ ಕೊರ್ಲಪಾಟಿ

ಜಿಲ್ಲಾಧಿಕಾರಿಯಾಗಿ ಹೆಪ್ಸಿಬಾ ರಾಣಿ ಕೊರ್ಲಪಾಟಿ

ಜಿಲ್ಲಾಧಿಕಾರಿಯಾಗಿ ಹೆಪ್ಸಿಬಾ ರಾಣಿ ಕೊರ್ಲಪಾಟಿ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇತ್ತೀಚೆಗೆ ಉಡುಪಿಯ ನೂತನ ಜಿಲ್ಲಾಧಿಕಾರಿಯಾಗಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ರಾಜ್ಯ ಸರಕಾರ ನಿಯುಕ್ತಿಗೊಳಿಸಿತ್ತು. ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಸ್ಥಾನಕ್ಕೆ ನಿಯುಕ್ತಿಗೊಳ್ಳುವ ಮೊದಲು ಹೆಪ್ಸಿಬಾ ರಾಣಿ ಕೊರ್ಲಪಾಟಿ ಹುಬ್ಬಳ್ಳಿ ಧಾರವಾಡದ ಸ್ಪೆಷಲ್ ಪರ್ಪಸ್ ವೆಹಿಕಲ್ ಇದರ ಆಡಳಿತ ನಿರ್ದೇಶಕರಾಗಿದ್ದರು. ಇವರು ಈ ಹಿಂದೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು. ಹೆಬ್ಸಿಬಾ ಅವರು 2011ರ ಐಎಎಸ್ ಬ್ಯಾಚ್ ನವರಾಗಿದ್ದಾರೆ. ಈಗ ಮುಂಬರುವ ಲೋಕಸಭಾ ಚುನಾವಣೆಯ ಸಂಪೂರ್ಣ ಜವಾಬ್ದಾರಿ ಹೆಬ್ಸಿಬಾ ಅವರ ಕೈಯ್ಯಲ್ಲಿದೆ

 ಸರ್ಕಾರಿ ಶಾಲೆಯೇ ಸಾಕು: ಮಾದರಿಯಾದರು ಈ ಮಹಿಳಾ ಜಿಲ್ಲಾಧಿಕಾರಿ ಸರ್ಕಾರಿ ಶಾಲೆಯೇ ಸಾಕು: ಮಾದರಿಯಾದರು ಈ ಮಹಿಳಾ ಜಿಲ್ಲಾಧಿಕಾರಿ

ಎಸ್ಪಿಯಾಗಿ ನಿಶಾ ಜೇಮ್ಸ್

ಎಸ್ಪಿಯಾಗಿ ನಿಶಾ ಜೇಮ್ಸ್

ಉಡುಪಿ ಜಿಲ್ಲೆಯ ನೂತನ ಎಸ್.ಪಿ.ಯಾಗಿ ನಿಶಾ ಜೇಮ್ಸ್ ಅವರನ್ನು ರಾಜ್ಯ ಸರಕಾರ ನಿಯುಕ್ತಿಗೊಳಿಸಿದೆ. ನೂತನ ಎಸ್.ಪಿ.ಯಾಗಿ ನೇಮಕಗೊಂಡಿರುವ ನಿಶಾ ಜೇಮ್ಸ್ ಅವರು 2013ನೇ ಸಾಲಿನ ಐ.ಪಿ.ಎಸ್. ಅಧಿಕಾರಿಯಾಗಿದ್ದಾರೆ. ಅವರು ಬೆಂಗಳೂರಿನಲ್ಲಿ ಕೆ.ಎಸ್.ಆರ್.ಪಿ.ಯ ನಾಲ್ಕನೇ ಬೆಟಾಲಿಯನ್ ನ ಕಮಾಂಡೆಂಟ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ದಟ್ಟ ಅರಣ್ಯ ಹಾಗೂ ನಕ್ಸಲ್ ಪೀಡಿತ ಪ್ರದೇಶಗಳನ್ನು ಹೊಂದಿರುವ ಉಡುಪಿ ಜಿಲ್ಲೆಯ ಕಾನೂನು ಸುವ್ಯವಸ್ಥತೆ ಜವಾಬ್ದಾರಿ ನಿಶಾ ಜೇಮ್ಸ್ ಅವರ ಹೆಗಲ ಮೇಲಿದೆ. ಅದಲ್ಲದೇ ಮುಂಬರುವ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾರ್ಯ ತಂತ್ರ ರೂಪಿಸುವ ಜವಾಬ್ದಾರಿ ಕೂಡ ಶ್ರೀಮತಿ ನಿಶಾ ಜೇಮ್ಸ್ ಅವರ ಮೇಲಿದೆ.

ಸಿಇಒ ಸಿಂಧೂ ಬಿ. ರೂಪೇಶ್

ಸಿಇಒ ಸಿಂಧೂ ಬಿ. ರೂಪೇಶ್

ಅದಲ್ಲದೇ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿರುವುದು ವಿದ್ಯಾಕುಮಾರಿ ಕೆ. ಜಿಲ್ಲೆಯ ವಿವಿಧ ಇಲಾಖೆಯ ಕಾರ್ಯವೈಖರಿ ನೋಡಿಕೊಳ್ಳುತ್ತಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಪದವೀಧರೆ. 2011 ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದಾರೆ.

English summary
The posting of Nisha James as new SP of Udupi district has catapulted Udupi district to Unique position.4 top posts including that of the DC,SP, ADC, ZP CEO are held by women.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X