ಮರವಂತೆಯಲ್ಲಿ ಅಮಾವಾಸ್ಯೆಯಂದು ವರಾಹ ದೇವರ ಮೊರೆ ಹೊಕ್ಕ ಭಕ್ತರು
ಉಡುಪಿ, ಮರವಂತೆ, ಆಗಸ್ಟ್ 11 : ಕರಾವಳಿ ಜನರ ಆರಾಧ್ಯ ದೇವರು, ನಂಬಿದ ಭಕ್ತರ ವರ ನೀಡುವ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಶನಿವಾರ ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಸಕಲ ಧಾರ್ಮಿಕ ಪೂಜಾ ಕಾರ್ಯಕ್ರಮದಿಂದ ನಡೆಯಿತು.
ವಿಶ್ವವಿಖ್ಯಾತ ಮರವಂತೆ ಕಡಲತೀರ, ಪೂರ್ವದಲ್ಲಿ ಸೌಪರ್ಣಿಕಾ ನದಿ, ಪಶ್ಚಿಮದಲ್ಲಿ ಸಮುದ್ರ ರಾಜನ ನರ್ತನ ನಡುವೆ ರಾಷ್ಟ್ರೀಯ ಹೆದ್ದಾರಿ ಈ ಪ್ರಕೃತಿಯ ಸೊಬಗಿನ ತಾಣ.

ಇಂಥ ಪ್ರದೇಶದಲ್ಲಿರುವ ಪುರಾಣ ಪ್ರಸಿದ್ಧ ಕ್ಷೇತ್ರದಲ್ಲಿ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನಕ್ಕೆ ಬೆಳಗ್ಗಿನ ಜಾವದಿಂದಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೇವರ ದರುಶನ ಪಡೆದು ಕಷ್ಟ, ಕಾರ್ಪಣ್ಯವನ್ನು ನಿವಾರಿಸಿ, ಸಂತೋಷ ನೆಮ್ಮದಿ ಕರುಣಿಸಲಿ ಎಂದು ಪ್ರಾರ್ಥಿಸಿದರು.

ಕರಾವಳಿ ಪ್ರದೇಶದ ಮೀನುಗಾರರು, ಕೃಷಿಕರು ಸಮೃದ್ಧಿಯನ್ನು ಕರುಣಿಸುವಂತೆ ಪ್ರಾರ್ಥಿಸುವ ಸಂಪ್ರದಾಯದಂತೆ ನೂರಾರು ಭಕ್ತಾದಿಗಳು ಸಮುದ್ರ ಮತ್ತು ನದಿಗಳಲ್ಲಿ ಪವಿತ್ರ ಸ್ನಾನ ಮಾಡಿ, ವರಾಹ ದೇವರಿಗೆ, ಗಂಗಾಧರೇಶ್ವರ ದೇವರಿಗೆ ಅಭಿಷೇಕ, ಪೂಜೆ ಸಲ್ಲಿಸಿ, ತೀರ್ಥ, ಪ್ರಸಾದ ಸ್ವೀಕರಿಸಿ ಹರಕೆಗಳನ್ನು ಸಲ್ಲಿಸಿದರು. ಸಾವಿರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ದೇಗುಲದ ಒಳ ಬಂದು ಶ್ರೀ ವರಾಹ ದೇವರ ಕೃಪೆಗೆ ಪಾತ್ರರಾದರು.

ಬೈಂದೂರಿನಲ್ಲಿ ಪುಣ್ಯಪ್ರಾಪ್ತಿಗಾಗಿ ದಂಪತಿಗಳ ಸಮುದ್ರ ಸ್ನಾನ : ಬೈಂದೂರಿನ ಪ್ರಸಿದ್ದ ಪಡುವರಿ ಸೋಮೇಶ್ವರ ದೇವಸ್ಥಾನದ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್ 11ರಂದು ಸಂಭ್ರಮ ಸಡಗರದಿಂದ ನಡೆಯಿತು. ಪ್ರತಿ ವರ್ಷ ಕರ್ಕಾಟಕ ಅಮಾವಾಸ್ಯೆಯಂದು ಜಾತ್ರೆ ನಡೆಯುತ್ತದೆ. ನವ ದಂಪತಿಗಳು ಸಮುದ್ರ ಸ್ಥಾನ ಮಾಡಿ ದೇವರ ದರ್ಶನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎನ್ನುವ ಪ್ರತೀತಿ ಇದೆ. ಹೀಗಾಗಿ ಬೇರೆ ಬೇರೆ ಊರುಗಳಿಂದ ಸಹಸ್ರಾರು ಭಕ್ತರು ಆಗಮಿಸುತ್ತಾರೆ.
ಸೋಮೇಶ್ವರ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆಯಂದು ಇಲ್ಲಿನ ನಾಗತೀರ್ಥಕ್ಕೆ ವಿಶೇಷವಾದ ಪ್ರಾಮುಖ್ಯತೆಯಿದೆ. ಗುಡ್ಡದ ಅಡಿ ಭಾಗದಿಂದ ಹರಿಯುವ ತೊರೆಯಿಂದ ವರ್ಷ ಪೂರ್ತಿ ನೀರಿನಿಂದ ಕೂಡಿರುತ್ತದೆ. ದೇವಸ್ಥಾನದ ಎಲ್ಲಾ ಕಾರ್ಯಕ್ಕೆ ನಾಗತೀರ್ಥ ನೀರನ್ನು ಬಳಸುತ್ತಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications