ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking:ಸಾಹಿತಿ,ಚಿಂತಕ ಹೋರಾಟಗಾರ ಜಿ.ರಾಜಶೇಖರ್ ನಿಧನ

|
Google Oneindia Kannada News

ಉಡುಪಿ, ಜುಲೈ 20: ಹಿರಿಯ ಚಿಂತಕ ಸಾಹಿತ್ಯ ವಿಮರ್ಶೆಗೆ ಹೆಸರಾಗಿದ್ದ ಹಾಗೂ ಜನಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದ ನಿವಾಸಿ ಜಿ.ರಾಜಶೇಖರ್ (75) ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾಗಿದ್ದಾರೆ.

2019ರಿಂದ ಪ್ರೊಗ್ರೆಸಿವ್ ಸುಪ್ರ ನ್ಯೂಕ್ಲಿಯರ್ ಪಾಲ್ಸಿ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ರಾಜಶೇಖರ್‌ ಶ್ವಾಸಕೋಸದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Writer and intellectual activist G. Rajasekhar passed away

ರಾಜಶೇಖರ ಅವರು ಎಡಪಂಥೀಯ ಚಿಂತಕರಾಗಿದ್ದರು, ಸಾಮಾಜಿಕ ಹೋರಾಟಗಾರರಾಗಿ ಜನಪರ ಚಳುವಳಿಗಳನ್ನು ರೂಪಿಸುವಲ್ಲಿ ಮುಂಚೂಣಿಯಲ್ಲಿದ್ದರು. ಕರಾವಳಿಯ ಕೋಮುವಾದದ ವಿರುದ್ಧ ಗಟ್ಟಿಯಾಗಿ ಧ್ವನಿ ಎತ್ತುತ್ತಿದ್ದಲ್ಲದೆ, ಕೋಮು ಗಲಭೆಗಳು ನಡೆದ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಮಾತನಾಡಿ ಸತ್ಯಶೋಧನಾ ವರದಿಗಳನ್ನು ಪ್ರಕಟಿಸಿದ್ದರು.

2019ರಲ್ಲಿ ರಾಜಶೇಖರ್‌ರ ತಲೆಗೆ ಪೆಟ್ಟು ಬಿದ್ದು ಗಂಭೀರ ಗಾಯಗೊಂಡಿದ್ದರು. ಪರೀಕ್ಷೆಗೆ ಒಳಪಡಿಸಿದ್ದಾಗ ಅವರಿಗೆ ಪ್ರೊಗ್ರೆಸಿವ್ ಸುಪ್ತ ನ್ಯೂಕ್ಲಿಯರ್ ಪಾಲ್ಸಿ ಎಂಬ ಅಪರೂಪದ ಪಾರ್ಕಿಸನ್ಸ್ ಕಾಯಿಲೆ ಇರುವುದು ದೃಢಪಟ್ಟಿತ್ತು. ಇದರಿಂದ ಅವರು ನೆನೆಪಿನ ಶಕ್ತಿಯನ್ನು ಕಳೆದುಕೊಂಡಿದ್ದರು ಎಂದು ತಿಳಿದುಬಂದಿದೆ.

ಮಾತನಾಡುವುದಕ್ಕೆ ಹಾಗೂ ನಡೆದಾಡಲು ಸಾಧ್ಯವಾಗದ ಕಾರಣ ಹೋರಾಟಗಳಲ್ಲಿ, ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸುವುದನ್ನು ನಿಲ್ಲಿಸಿದ್ದರು. ಇತ್ತೀಚೆಗೆ ಆಹಾರ ಸೇವನೆ ಬಿಟ್ಟಿದ್ದ ಅವರು ಬುಧವಾರ ತಮ್ಮ ಕೊನೆಯುಸಿರೆಳೆದಿದ್ದಾರೆ.

ಸಿದ್ದರಾಮಯ್ಯ ಸಂತಾಪ

" ಕನ್ನಡದ ಹಿರಿಯ ವಿಮರ್ಶಕ, ನೇರ-ನಿಷ್ಠುರ ನಡವಳಿಕೆಯ ಪ್ರಖರ ಚಿಂತಕ ಮತ್ತು ಸೌಹಾರ್ದ ಬದುಕಿನ ಹೋರಾಟಗಾರ ಜಿ.ರಾಜಶೇಖರ್ ಅಗಲಿಕೆ ನಮ್ಮೆಲ್ಲರ ಪಾಲಿಗೆ ತುಂಬಿಕೊಳ್ಳಲಾಗದ ನಷ್ಟ. ಅವರ ಕುಟುಂಬ ಮತ್ತು ಸ್ನೇಹಿತರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ' ಎಂದು ಸಿದ್ದರಾಮಯ್"ಯ ಟ್ವೀಟ್ ಮಾಡಿದ್ದಾರೆ.

English summary
Senior Writer and intellectual activist G. Rajasekhar passed away on Wednesday due health issues in Udupi,ಹಿರಿಯ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X