Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
ಉಡುಪಿ, ಏಪ್ರಿಲ್ 25: ಬಡಗುತಿಟ್ಟು ಯಕ್ಷಗಾನದ ಹಿರಿಯ ಭಾಗವತ ಸುಬ್ರಮಣ್ಯ ಧಾರೇಶ್ವರ (67) ವಿಧಿವಶರಾಗಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಏಪ್ರಿಲ್ 25 ರಂದು ಬೆಳಗ್ಗೆ 4.30ಕ್ಕೆ ಬೆಂಗಳೂರಿನಲ್ಲಿರುವ ತಮ್ಮ ಪುತ್ರನ ನಿವಾಸದಲ್ಲಿ ನಿಧನರಾಗಿದ್ದಾರೆ.
ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು 46 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಭಾಗವತ ಸುಬ್ರಮಣ್ಯ ಧಾರೇಶ್ವರ ಅವರು ಕಾಳಿಂಗ ನಾವುಡರ ಅಗಲುವಿಕೆಯ ಬಳಿಕ ಉಂಟಾಗಬಹುದಿದ್ದ ನಿರ್ವಾತವನ್ನು ತುಂಬಲು ಯತ್ನಿಸಿದ್ದ ಭಾಗವತ ಶ್ರೇಷ್ಠ ಎಂದೆನಿಸಿಕೊಂಡಿದ್ದರು. ಮೂಲತಃ ಗೋಕರ್ಣ ಮೂಲದವಾರದ ಭಾಗವತ ಸುಬ್ರಮಣ್ಯ ಧಾರೇಶ್ವರ ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

1957ರಲ್ಲಿ ಗೋಕರ್ಣದಲ್ಲಿ ಜನಿಸಿದ ಅವರು ಸುಬ್ರಮಣ್ಯ ಧಾರೇಶ್ವರ ಅವರು, ಸಂಗೀತಾಭ್ಯಾಸ ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ಬಳಿಕ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಇದೇ ವೇಳೆ ಇವರ ಧ್ವನಿಯ ಇಂಪನ್ನು ಗಮನಿಸಿ ಪ್ರೋತ್ಸಾಹಿಸಿದ ಪ್ರಾಚಾರ್ಯ ನಾರಣಪ್ಪ ಉಪ್ಪರರ ಮೂಲಕ ಸುಬ್ರಮಣ್ಯ ಧಾರೇಶ್ವರ ರಂಗಸ್ಥಳದ ಮೇಲೇರಿದರು.
ಯಕ್ಷಗಾನದಲ್ಲಿ ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಸುಬ್ರಮಣ್ಯ ಧಾರೇಶ್ವರ ಎನ್ನುವ ಹೆಸರು ಜನಪ್ರಿಯತೆಯಲ್ಲಿರುವಾಗಲೇ ಏಕಾಏಕಿ ಮೇಳ ತಿರುಗಾಟ ನಿಲ್ಲಿಸಿದ್ದರು. 10 ವರ್ಷದ ಬಳಿಕ ಮತ್ತೆ ಅದೇ ಮೇಳಕ್ಕೆ ಅನಿವಾರ್ಯ ಸಂದರ್ಭದಲ್ಲಿ ಸೇರಿ ಒಂದು ವರ್ಷದ ತಿರುಗಾಟ ಮಾಡಿದ್ದರು. ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು.
ಸುಬ್ರಮಣ್ಯ ಧಾರೇಶ್ವರ ಪೆರ್ಡೂರು ಮೇಳವೊಂದರಲ್ಲೇ 28 ವರ್ಷಗಳ ಕಾಲ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಅದಕ್ಕೂ ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಭಾಗವತರಾಗಿ ಯಕ್ಷ ಸೇವೆ ಸಲ್ಲಿಸಿದ್ದರು. ಸುಮಾರು 46 ವರ್ಷಗಳ ಕಾಲದ ಯಕ್ಷ ಪಯಣದಲ್ಲಿ ಸುಬ್ರಮಣ್ಯ ಧಾರೇಶ್ವರ ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದು, ಭಾಗವತರ ಅಗಲಿಕೆಯಿಂದ ಅಭಿಮಾನಿಗಳಲ್ಲಿ ದುಃಖ ಮಡುಗಟ್ಟಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications