• search
  • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ: ಮದುವೆಯ ರೋಸ್‌ ಕಾರ್ಯಕ್ರಮಕ್ಕೆ ಬಂದಿದ್ದ ಯುವತಿ ಕುಳಿತಲ್ಲೇ ಕುಸಿದು ಬಿದ್ದು ಸಾವು

|
Google Oneindia Kannada News

ಉಡುಪಿ, ನವೆಂಬರ್‌ 25: ಇತ್ತೀಚಿನ ದಿನಗಳಲ್ಲಿ ಆರೋಗ್ಯವಾಗಿದ್ದ ಯುವಕ, ಯುವತಿ ಅಥವಾ ಯಾವುದೇ ವಯೋಮಾನದವರು ಕುಸಿದು ಬಿದ್ದು ಸಾವನ್ನಪ್ಪುವ ಘಟನೆಗಳು ಹೆಚ್ಚಾಗುತ್ತಿದ್ದೆ. ಇದರಲ್ಲಿ ಏಕಾಏಕಿ ಸಂಭವಿಸುವ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಅಧಿಕವಾಗಿದೆ.

ಇದೇ ರೀತಿಯ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದ್ದು, ಮದುವೆ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಇದೀಗ ಸ್ಮಶಾನ ಮೌನ ಆವರಿಸಿದೆ. ಮದುವೆಗೆ ಮುನ್ನ ಮಾಡುವ ಧಾರ್ಮಿಕ ಶಾಸ್ತ್ರ ರೋಸ್‌ನಲ್ಲಿ ಭಾಗಿಯಾಗಿದ್ದ ಯುವತಿ ಕುಳಿತ ಜಾಗದಲ್ಲಿಯೇ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಾವಂಜೆಯಲ್ಲಿ ನಡೆದಿದೆ.

ಉಡುಪಿ; ನ. 21ರಿಂದ ಭತ್ತ ಖರೀದಿಗೆ ನೋಂದಣಿ ಕೇಂದ್ರ ಆರಂಭ ಉಡುಪಿ; ನ. 21ರಿಂದ ಭತ್ತ ಖರೀದಿಗೆ ನೋಂದಣಿ ಕೇಂದ್ರ ಆರಂಭ

23 ವರ್ಷದ ಹಾವಂಜೆ ನಿವಾಸಿ ಜೋಸ್ನಾ ಲೂವಿಸ್‌ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ಜೋಸ್ನಾ ಲೂವಿಸ್‌ ಬ್ರಹ್ಮಾವರ ತಾಲೂಕಿನ ಕೊಳಲಗಿರಿ ಸಮೀಪದ ಹಾವಂಜೆಯಲ್ಲಿ ನಡೆಯುತ್ತಿದ್ದ ತಮ್ಮ ಸಂಬಂಧಿರ ಮನೆಗೆ ಮುದುವೆ ಮುನ್ನ ಮಾಡುವ ರೋಸ್‌ ಕಾರ್ಯಕ್ರಮಕ್ಕೆ ಬಂದಿದ್ದರು. ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಿತ್ತು.

ಧಾರ್ಮಿಕ ಕಾರ್ಯಕ್ರಮವಾದ ರೋಸ್‌ನ ಎಲ್ಲಾ ರೀತಿಯ ಶಾಸ್ತ್ರಗಳು ನಡೆಯುವ ಸಂದರ್ಭದಲ್ಲಿ ರಾತ್ರಿ ಸುಮಾರು 8:30ಕ್ಕೆ ಜೋಸ್ನಾ ಲೂವಿಸ್‌ ತಾನು ಕುಳಿತ ಕುರ್ಚಿಯಿಂದ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಸ್ಥಳದಲ್ಲಿದ್ದವರು ಆಕೆಯನ್ನು ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯದಿದ್ದಾರೆ. ಆದರೆ ದುರಾದೃಷ್ಟವಶಾತ್‌ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಸಾವನ್ನಪ್ಪಿದ್ದಾಳೆ.

ಜೋಸ್ನಾ ಲೂವಿಸ್‌ಗೆ ಯಾವುದೇ ಸಮಸ್ಯೆ ಇರಲಿಲ್ಲ. ಆಕೆ ಆರೋಗ್ಯವಾಗಿದ್ದಳು ಎಂದು ಪೋಷಕರು ತಿಳಿಸಿದ್ದಾರೆ. ಘಟನೆ ಸಂಬಂಧ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿಯ ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ಕಾರಣ ಏನು ಎನ್ನುವುದು ತಿಳಿದು ಬರಬೇಕಿದೆ. ಮುದುವೆ ಸಂಭ್ರಮದಲ್ಲಿರ ಬೇಕಾದ ಮನೆಯಲ್ಲಿ ನೀರವ ಮೌನ ಆವರಿಸಿದ್ದು, ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

English summary
23 years old young lady dies after collapsing in relative marriage roze function at Udupi Brahmavara. 23 ವರ್ಷದ ಯುವತಿ ಸಂಬಂಧಿಕರ ಮದುವೆಯ ರೋಸ್‌ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X