ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಯುವಕನ ಬಂಧನ
ಉಡುಪಿ, ಅಕ್ಟೋಬರ್ 26: ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಯುವಕನೊಬ್ಬನನ್ನು ಉಡುಪಿ ಕೋಟ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸಾಸ್ತಾನ ನಿವಾಸಿ ಸೊಹೈಲ್ ಮಹಮ್ಮದ್ ಅಲಿ ಎಂದು ಗುರುತಿಸಲಾಗಿದೆ.
ಬಂಧಿತ ಸೊಹೈಲ್ ಸ್ಥಳೀಯ ಕಾಲೇಜಿನಲ್ಲಿ ಒದುತಿದ್ದ ಯುವತಿಯೊಬ್ಬಳನ್ನು ಪ್ರೀತಿಯ ಜಾಲಕ್ಕೆ ಸಿಲುಕಿಸಿದ್ದ. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕಕ್ಕೆ ಮುಂದಾಗಿದ್ದ. ದೈಹಿಕ ಸಂಪರ್ಕಕ್ಕೆ ಒಪ್ಪದ ಯುವತಿಗೆ ಬೆದರಿಕೆ ಹಾಕಿ ಹಲವಾರು ಬಾರಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ .

ಈಗ ಯುವತಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ನಡುವೆ ಸೊಹೈಲ್ ಅತ್ಯಾಚಾರ ಕುರಿತು ಬಹಿರಂಗ ಪಡಿಸದಂತೆ ಜೀವ ಬೆದರಿಕೆ ಒಡ್ಡಿದ್ದ ಎಂದು ಆರೋಪಿಸಲಾಗಿದೆ.
ಈ ಕುರಿತು ಯುವತಿಯ ಮನೆಯವರು ಕೋಟಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ಪರಾರಿಯಾಗಲು ಯತ್ನಿಸಿದ ಸೊಹೈಲ್ ನನ್ನು ಪೊಲೀಸರು ಬಂಧಿಸಿದ್ದಾರೆ .












Click it and Unblock the Notifications