ಹಸೆಮಣೆ ಏರಬೇಕಾಗಿದ್ದ ಯುವಕ ಭೀಕರ ರಸ್ತೆ ಅಪಘಾತದಲ್ಲಿ ಸಾವು
ಉಡುಪಿ, ಡಿಸೆಂಬರ್ 23 : ಇನ್ನೇನು 8 ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವಕ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಕೋಟ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದಿದೆ.
ಕೋಟೇಶ್ವರ ದೊಡ್ಡೋಣಿ ರಸ್ತೆಯ ಪೇಟೆಮನೆ ನಿವಾಸಿ ವರುಣ್ (30) ಮೃತಪಟ್ಟ ದುರ್ದೈವಿ.
ಪ್ರಸ್ತುತ ವಿದೇಶದಲ್ಲಿ ಉದ್ಯೋಗದಲ್ಲಿರುವ ವರುಣ್ ಮದುವೆ ನಿಮಿತ್ತ 5 ದಿನಗಳ ಹಿಂದೆ ಊರಿಗೆ ಆಗಮಿಸಿದ್ದರು. ಮದುವೆ ಕೆಲಸ, ಆಮಂತ್ರಣ ಪತ್ರಿಕೆ ಹಂಚುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ವರುಣ್ ಶನಿವಾರ ಸಾಲಿಗ್ರಾಮ ದೇವಸ್ಥಾನಕ್ಕೆ ಪೂಜೆಗಾಗಿ ತೆರಳುವ ಸಂದರ್ಭ ಈ ದುರ್ಘಟನೆ ನಡೆದಿದೆ.

ತನ್ನ ಬೈಕಿನಲ್ಲಿ ಸಾಲಿಗ್ರಾಮ ಕಡೆಗೆ ಹೋಗುತ್ತಿರುವಾಗ ಚಿತ್ರಪಾಡಿ ಗ್ರಾಮದ ಬೆಲ್ಲದ ಗಣಪತಿ ದೇವಸ್ಥಾನ ಬಳಿ ಲಾರಿ ಚಾಲಕ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ವರುಣ್ ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಮುಂದೆ ಸಾಗುತ್ತಿದ್ದ ರೋಡ್ ರೋಲರಿಗೆ ಬೈಕ್ ಅಪ್ಪಳಿಸಿ ರಸ್ತೆಗೆ ಬಿದ್ದು, ಲಾರಿ ಅಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.












Click it and Unblock the Notifications