Waqf land controversy: ವಕ್ಫ್ ನೆಪದಲ್ಲಿ ವಿಜಯಪುರ ಹಿಂದುತ್ವದ ಪ್ರಯೋಗಶಾಲೆ ಮಾಡಲು ಸಂಚು

ವಿಜಯಪುರ, ನವೆಂಬರ್ 08: ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಾಗ ವಕ್ಫ್ ಆಸ್ತಿ ರಕ್ಷಣೆ ಕುರಿತು ಬಿಜೆಪಿ ಅಪಾರ ಕಾಳಜಿ ತೋರಿತ್ತು. ಇದೀಗ ಬಿಜೆಪಿ ವಿಜಯಪುರವನ್ನು ಹಿಂದುತ್ವದ ಪ್ರಯೋಗ ಶಾಲೆಯನ್ನಾಗಿ ಮಾಡಲು ಹೊರಟಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರು ಆರೋಪಿಸಿದ್ದಾರೆ.

ಜಿಲ್ಲೆಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದ ಅವಧಿಯಲ್ಲಿ ವಕ್ಫ್ ಆಸ್ತಿ ರಕ್ಷಣೆಗೆ ಹೊರಡಿಸಿದ ಹತ್ತಾರು ಸುತ್ತೋಲೆಗಳನ್ನು ಬಿಡುಗಡೆ ಮಾಡಿದರು. ಕಳೆದ ಒಂದೆರಡು ವಾರಗಳಿಂದ ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ಅಪಪ್ರಚಾರ ಮಾಡುತ್ತಿದೆ.

A Conspiracy to Make Vijayapura a Laboratory of Hindutva Under the Guise of Wakf MB Patil

ಆದರೆ, ತಾವೇ ಅಧಿಕಾರದಲ್ಲಿ ಇದ್ದಾಗ ರೈತರು, ಧಾರ್ಮಿಕ ಸ್ಥಳಗಳ ಹಾಗೂ ಎಲ್ಲ ಧರ್ಮೀಯರ ಆಸ್ತಿಯನ್ನು ವಕ್ಫ್ ಗೆ ಹಿಂಪಡೆದಿದೆ ಎಂದು ದೂರಿದರು.

ರಾಜ್ಯದಲ್ಲಿ 2019ರಲ್ಲಿ ಬಿಜೆಪಿಯೇ ಅಧಿಕಾರದಲ್ಲಿ ಇತ್ತು. ಆ ವರ್ಷದ ಸೆ.17ರಂದು ದೇವರಹಿಪ್ಪರಗಿ ತಾಲೂಕಿನ ಮಣೂರ ಗ್ರಾಮದ ಮುರುಘೇಂದ್ರ ಶಿವಬಸಪ್ಪ ಖ್ಯಾಡಿ, ಮಾಶಾಬಿ ಮೌಲಾಸಾಬ ಮುಲ್ಲಾ, ಸುಭಾಷ ಧರ್ಮಣ್ಣ ಆನೆಗುಂದಿ ಅವರ ಆಸ್ತಿಗಳನ್ನು ವಕ್ಫ್ ಹೆಸರಿಗೆ ಇಂದೀಕರಣ ಮಾಡಿದೆ. ಇಂಡಿ ತಾ.ನಲ್ಲೂ 2023ರ ಜ.13ರಂದು ಮಾರ್ಸನಹಳ್ಳಿಯ ಗ್ರಾಮದ ನಿಂಗಪ್ಪ ಭೂಮಣ್ಣ ಶಿರಶ್ಯಾಡ ಅವರಿಗೆ ಸೇರಿದ ಆಸ್ತಿಯನ್ನು ಇದೇ ರೀತಿ ವಕ್ಫ್ ಹೆಸರಿಗೆ ಮಾಡಲಾಗಿದೆ ಎಂದರು.

2010ರ ಜನವರ 4ರಂದು ಬಿಜೆಪಿ ಸರ್ಕಾರವವಿದ್ದಾಗ ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕ್ರಮಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಲಾಯಿತು. ನಂತರ ಅದೇ ವರ್ಷದ ಮೇ 29ರಂದು ವಕ್ಫ್ ಆಸ್ತಿಗಳ ಅತಿಕ್ರಮಣ ತೆರವಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದರು ಎಂದು ಅವರು ವಿವರಿಸಿದರು.

A Conspiracy to Make Vijayapura a Laboratory of Hindutva Under the Guise of Wakf MB Patil

ಬಿಜೆಪಿ ತನ್ನ ಎರಡನೆಯ ಅವಧಿಯ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಇದೇ ಕೆಲಸ ಮಾಡಿದೆ. 2020ರ ಆಗಸ್ಟ್ 8 ರಂದು ವಕ್ಫ್ ಆಸ್ತಿಗಳನ್ನು ಭೂಮಿ ತಂತ್ರಾಂಶದಲ್ಲಿ ಫ್ಲಾಗ್ ಮಾಡುವ ಕುರಿತು ಕಂದಾಯ ಇಲಾಖೆಯ ಅಂದಿನ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದರು.

ನಂತರ 2021ರ ಜನವರಿ 8 ರಂದು ಜಿಲ್ಲಾ ಮಟ್ಟದ ವಕ್ಫ್ ಆಸ್ತಿಗಳ ಕಾರ್ಯಪಡೆ ರಚಿಸಲು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಂದ ಸುತ್ತೋಲೆ ಹೊರಡಿಸಿತ್ತು. ಆಮೇಲೆ ಸಹ 2021ರ ಜ.27ರಂದು ಗ್ರಾಮ ಠಾಣಾ ವ್ಯಾಪ್ತಿಯಲ್ಲಿರುವ ವಕ್ಸ್ ಆಸ್ತಿಗಳನ್ನು ಪಂಚತಂತ್ರ ಮತ್ತು ಇ-ಸ್ವತ್ತು ತಂತ್ರಾಂಶದಲ್ಲಿ ಫ್ಲಾಗ್ (ಲಾಕ್) ಮಾಡುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರ ಆದೇಶ ಹೊರಡಿಸಿತು.

ವಕ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ

2019ರಲ್ಲಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ್ದಾಗಲೂ ಮೋದಿ ಸರ್ಕಾರವು ವಕ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣಕ್ಕೆ ಆದ್ಯತೆ ಕೊಡಲಾಗಿದೆ ಎಂದು ಹೇಳಿತ್ತು. ರಾಜ್ಯದಲ್ಲಿ ಈಗ ನೀಡಿರುವ ಎಲ್ಲಾ ನೋಟೀಸುಗಳನ್ನು ವಾಪಸ್ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ ಎಂದು ಸಚಿವರು ಪ್ರತಿಪಾದಿಸಿದರು.

ಕಂದಾಯ ಸಚಿವ ಕೃಷ್ಣ ಭೈರೇಗೌಡ ಮತ್ತು ವಕ್ಫ್ ಸಚಿವ ಜಮೀರ ಅಹ್ಮದ್ ಖಾನ್ ಕೂಡ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇವೆ. 2023ರ ಜೂನ್ 1ರಿಂದ 2024ರ ಅ.31ರವರೆಗೆ ರಾಜ್ಯದಲ್ಲಿ ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮತ್ತು ತಪ್ಪು ಸರಿಪಡಿಸಲು ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ಸಾರ್ವಜನಿಕ ಬಹಿರಂಗ ಪಡಿಸಿದ್ದೇವೆ ಎಂದು ತಿಳಿಸಿದರು.

ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್ ಅವರ ವಿಜಯಪುರ ಭೇಟಿ ಕಾನೂನುಬಾಹಿರ. ಇದರ ಜತೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮತ್ತು ಶೋಭಾ ಕರಂದ್ಲಾಜೆ ಹೋರಾಟ ಕೆಲವೇ ಗಂಟೆಗಳಲ್ಲಿ ಮುಗಿದಿದೆ ಎಂದು ಅವರು ವ್ಯಂಗ್ಯವಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+