ವಕ್ಫ್‌-ರೈತರ ಜಟಾಪಟಿ, ವಿಜಯಪುರಕ್ಕೆ ವಿಶೇಷ ತಂಡ ರಚಿಸಿದ ಬಿಜೆಪಿ

ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್‌ ಬೋರ್ಡ್‌ನಿಂದ ನೋಟಿಸ್‌ ನೀಡಿರುವ ವಿಚಾರವು ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಇದೇ ವಿಚಾರ ರಾಜಕೀಯ ಸ್ವರೂಪವನ್ನೂ ಪಡೆದುಕೊಂಡಿದೆ. ಸದ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ದೇಶನದಂತೆ ಒಂದು ತಂಡ ಕೂಡ ರಚನೆಯಾಗಿದೆ.

ವಿಜಯಪುರ ಜಿಲ್ಲೆಯಾದ್ಯಂತ ವಕ್ಫ್ ಬೋರ್ಡ್ ಕಾಯ್ದೆಯಿಂದ ಆಗುತ್ತಿರುವ ತೊಂದರೆ ಹಾಗೂ ತೊಂದರೆಗೊಳಗಾದ ರೈತರ ಅಹವಾಲು ಸ್ವೀಕರಿಸಲು ರಾಜ್ಯ ಬಿಜೆಪಿ ವತಿಯಿಂದ ತಂಡ ರಚಿಸಲಾಗಿದೆ. ಈ ತಂಡವು ಅಕ್ಟೋಬರ್‌ 29ರಂದು ವಿಜಯಪುರ ಜಿಲ್ಲೆಗೆ ಭೇಟಿ ನೀಡಲಿದೆ. ಬಿಜೆಪಿ ರಚಿಸಿರುವ ತಂಡದಲ್ಲಿ ಸಂಸದ ಗೋವಿಂದ ಕಾರಜೋಳ, ಶಾಸಕರಾದ ಹರೀಶ್‌ ಪೂಂಜಾ, ಮಹೇಶ್‌ ಟೆಂಗಿನಕಾಯಿ, ಅರುಣ್‌ ಶಹಾಪುರ ಇದ್ದಾರೆ.

A Team Has Been Formed By The State BJP To Receive The Grievances Of The Farmers Of Vijayapur

ವಕ್ಫ್‌ ಬೋರ್ಡ್‌ನಿಂದ ರೈತರಿಗೆ ನೋಟಿಸ್‌ ನೀಡಿರುವ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ. ಇದೇ ವಿಚಾರವಾಗಿ ಕಾಂಗ್ರೆಸ್‌ ಸಚಿವರಾದ ಎಂ.ಬಿ.ಪಾಟೀಲ್‌ ಪ್ರತಿಕ್ರಿಯಿಸಿದ್ದಾರೆ. ರೈತರಿಗೆ ಸೇರಿದ ಜಮೀನಲ್ಲಿ ಒಂದಿಂಚು ಕೂಡ ಯಾರ ವಶವೂ ಆಗಲು ಬಿಡುವುದಿಲ್ಲ ಎಂದು ಎಂ.ಬಿ.ಪಾಟೀಲ್‌ ರೈತರಿಗೆ ಅಭಯ ನೀಡಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ 10 ಸರ್ವೇ ನಂಬರುಗಳ 11 ಎಕರೆ ಆಸ್ತಿ ಮಾತ್ರ ವಕ್ಫ್ ಆಸ್ತಿ ಎಂದು ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಅದರಲ್ಲಿ 10 ಎಕರೆ 14 ಗುಂಟೆ ಖಬರಸ್ತಾನ ಇದೆ. ಉಳಿದದ್ದು ಈದ್ಗಾ, ಮಸೀದಿ ಇತ್ಯಾದಿ ಕಟ್ಟಡಗಳಿವೆ ಹಾಗೂ ಈ ಭೂಮಿಯು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಸೇರಿದ್ದು, ಯಾವುದೇ ರೈತರ ಖಾಸಗಿ ಜಮೀನು ಒಳಪಟ್ಟಿಲ್ಲ ಎಂಬುದನ್ನು ಗಮನಿಸಬೇಕು ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

A Team Has Been Formed By The State BJP To Receive The Grievances Of The Farmers Of Vijayapur

ಹಜರತ್ ಪೀರ ದಸ್ತಿಗೀರ ಸಾಬ್ ಮೊಹಮ್ಮದ ಚಿಂಗ್ ಸಿಯಾ ತಖಿಯಾ ದರ್ಗಾ ವಿಜಯಪುರ ಮಹಾಲಬಾಗಯತ ಸೇರಿದ ಆಸ್ತಿಯಾಗಿದ್ದು, ಕೆಳಗಡೆ ತಪ್ಪಾಗಿ ಹೊನವಾಡ ಎಂದು ಸೇರಿದೆ. ಇದು ಗೊಂದಲಕ್ಕೆ ಕಾರಣವಾಗಿದೆ. ಈ ಯಾವ ರೈತರಿಗೂ ವಕ್ಫ್‌ ಸಮಿತಿ ಅಥವಾ ಸರ್ಕಾರದ ಇಲಾಖೆಯಿಂದ ಯಾವುದೇ ನೋಟಿಸ್‌ಗಳು ಬಂದಿಲ್ಲ ಎಂದು ಸಚಿವ ಎಂಬಿ ಪಾಟೀಲ್‌ ಹೇಳಿದ್ದಾರೆ.

ಈಗಾಗಲೇ ಜಿಲ್ಲೆಯಲ್ಲಿ ಹಲವು ರೈತರಿಗೆ ವಕ್ಫ್ ಆಸ್ತಿ ನೋಟಿಸ್ ಬಂದಿದೆ ಎಂಬ ದೂರುಗಳಿದ್ದು, ವಕ್ಫ್ ಸಮಿತಿ ಮತ್ತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಎಲ್ಲ ದಾಖಲೆಗಳನ್ನು ಕೂಲಕುಂಷವಾಗಿ ಪರಿಶೀಲಿಸುತ್ತಾರೆ. ಒಂದೇ ಒಂದು ಇಂಚು ರೈತರ ಜಾಗವು ಅನಗತ್ಯವಾಗಿ, ಆಧಾರ, ದಾಖಲೆಗಳಿಲ್ಲದೆ ವಕ್ಫ್‌ ಆಸ್ತಿ ಎಂದು ಸೇರಿಸಲಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಶೀಘ್ರದಲ್ಲೇ ಸಭೆ ನಡೆಸಿ, ಎಲ್ಲ ಗೊಂದಲಗಳಿಗೆ ಉತ್ತರ ನೀಡಲಾಗುವುದು. ಈ ನಿಟ್ಟಿನಲ್ಲಿ ಸಂಸದ ಶ್ರೀ ತೇಜಸ್ವಿ ಸೂರ್ಯ ಅವರಾಗಲಿ, ಮತ್ತೊಬ್ಬರಾಗಲಿ ರಾಜಕಾರಣ ಮಾಡಿ ಜನಸಾಮಾನ್ಯರಲ್ಲಿ ಇಲ್ಲದ ಗೊಂದಲ, ಆತಂಕ ಮೂಡಿಸುವುದು ಬೇಡ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+