ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇದೇ ಮೊದಲ ಬಾರಿಗೆ ಸಿಎಂ ಯಡಿಯೂರಪ್ಪರನ್ನು ಸಮರ್ಥಿಸಿಕೊಂಡ ಯತ್ನಾಳ್

|
Google Oneindia Kannada News

ವಿಜಯಪುರ, ನ 20: ಏನಾದರೂ ಒಂದು ಕಾರಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಟೀಕಿಸುತ್ತಿದ್ದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಎಸ್ವೈ ಸರಕಾರ ಅಸ್ತಿತ್ವಕ್ಕೆ ಬಂದ ನಂತರ, ಇದೇ ಮೊದಲ ಬಾರಿಗೆ ಸರಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ನಗರದಲ್ಲಿ ಮಾತನಾಡುತ್ತಿದ್ದ ಯತ್ನಾಳ್, "ಬೆಳಗಾವಿ, ಕಾರವಾರದ ವಿಚಾರದಲ್ಲಿ ಶಿವಸೇನೆ ಮತ್ತು ಅಜಿತ್ ಪವಾರ್ ಹೇಳಿಕೆಯನ್ನು ನಾನು ವಿರೋಧಿಸುತ್ತೇನೆ. ನಮ್ಮ ಒಂದಿಂಚು ಜಾಗವೂ ಬೇರೆಯವರಿಗೆ ಹೋಗುವುದಿಲ್ಲ"ಎಂದು ಹೇಳಿದರು.

ನ25ರ ವರೆಗೆ ಸುಮ್ಮನಿರುತ್ತೇನೆ ಎಂದಿದ್ದ ಯತ್ನಾಳ್, ಮತ್ತೆ ಪರೋಕ್ಷ ಕಿಡಿನ25ರ ವರೆಗೆ ಸುಮ್ಮನಿರುತ್ತೇನೆ ಎಂದಿದ್ದ ಯತ್ನಾಳ್, ಮತ್ತೆ ಪರೋಕ್ಷ ಕಿಡಿ

"ಆದರೆ, ಮರಾಠಾ ಪ್ರಾಧಿಕಾರ ರಚಿಸಲು ಮುಂದಾಗಿರುವ ಮುಖ್ಯಮಂತ್ರಿಯವರನ್ನು ನಾನು ಅಭಿನಂದಿಸುತ್ತೇನೆ. ಕನ್ನಡಪರ ಹೋರಾಟಗಾರರು ಅದು ಹೇಗೆ ವಿಜಯಪುರದಲ್ಲಿ ಬಂದ್ ನಡೆಸುತ್ತಾರೋ, ನಾನೂ ನೋಡುತ್ತೇನೆ"ಎಂದು ಸವಾಲು ಹಾಕಿದರು.

After Long Time Vijayapura BJP MLA Basanagaouda Patil Yatnal Defended CM Yediyurappa On Proposed Maaratha Authority

"ಮರಾಠಾ ಪ್ರಾಧಿಕಾರ ರಚಿಸಿದರೆ ಕನ್ನಡಿಗರ ಮತ ಹೋಗುತ್ತದೆ ಎನ್ನುವುದರ ಬಗ್ಗೆ ಸಿಎಂ ಚಿಂತಿಸಬಾರದು. ನಾವು ಮೊದಲು ಹಿಂದೂಗಳು, ನಮ್ಮ ರಕ್ಷಣೆ ಮಾಡಿದ ಶಿವಾಜಿ ಸಮುದಾಯಕ್ಕೆ ಹೆಚ್ಚಿನ ಸೌಲಭ್ಯ ಒದಗಿಸುವ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಸಿಎಂ ಸರಿಯಾದ ನಿರ್ಧಾರವನ್ನೇ ತೆಗೆದುಕೊಂಡಿದ್ದಾರೆ"ಎಂದು ಸಿಎಂ ಅವರನ್ನು ಸಮರ್ಥಿಸಿಕೊಂಡರು.

"ಕನ್ನಡಪರ ಹೋರಾಟಗಾರರು ಬಂದ್ ಗೆ ಕರೆ ನೀಡಿದ್ದಾರೆ. ಅವರೆಲ್ಲಾ ನಕಲಿ, ರೋಲ್ಕಾಲ್ ಹೋರಾಟಗಾರರು. ಕನ್ನಡದ ಹೆಸರಿನಲ್ಲಿ ಸುಮ್ಮನೆ ಹೋರಾಟ ಸಲ್ಲದು. ಕನ್ನಡ ಮತ್ತು ಸಂಸ್ಕೃತಿ ಹೆಸರಿನಲ್ಲಿ ವಾಟಾಳ್ ನಾಗರಾಜ್ ಮತ್ತು ಕನ್ನಡ ಪರ ಸಂಘಟನೆಗಳ ಮುಖಂಡ ಎಷ್ಟು ಅನುದಾನ ಪಡೆದಿದ್ದಾರೆ"ಎಂದು ಯತ್ನಾಳ್ ಗರಂ ಆದರು.

 ಸಿಎಂ ಬದಲಾವಣೆ: ಯತ್ನಾಳ ಬೆದರಿಕೆಗೆ ಮಣಿದರೇ ಯಡಿಯೂರಪ್ಪ? ಸಿಎಂ ಬದಲಾವಣೆ: ಯತ್ನಾಳ ಬೆದರಿಕೆಗೆ ಮಣಿದರೇ ಯಡಿಯೂರಪ್ಪ?

Recommended Video

26 /11 ಅದೇ ದಿನ ಮತ್ತೊಂದು ದಾಳಿ ಸಾಧ್ಯತೆ | Oneindia Kannada

"ಬೆಂಗಳೂರಿನಲ್ಲಿ ಕುಳಿತು ಆರ್ಭಟಿಸಿದರೆ ನಾವೇನೂ ಭಯ ಪಡುವುದಿಲ್ಲ. ವಾಟಾಳ್ ನಾಗರಾಜ್ ಅವರಿಂದ ನಾನೇನು ಕಲಿಯಬೇಕಾಗಿಲ್ಲ. ಸಂಘಟನೆಗಳ ಒತ್ತಡಕ್ಕೆ ಮಣಿದು ಸಿಎಂ, ಪ್ರಾಧಿಕಾರ ಹಿಂಪಡೆದರೆ, ದೊಡ್ಡ ಅನಾಹುತವಾಗುತ್ತದೆ"ಎನ್ನುವ ಎಚ್ಚರಿಕೆಯನ್ನು ಬಸನಗೌಡ ಪಾಟೀಲ್ ಯತ್ನಾಳ್ ನೀಡಿದರು.

English summary
After Long Time Vijayapura BJP MLA Basanagaouda Patil Yatnal Defended CM Yediyurappa On Proposed Maaratha Authority.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X