ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯಪುರ; ವಿಮಾನದಲ್ಲಿ ಹಾರುವ ಜನರ ಕನಸು ಶೀಘ್ರವೇ ನನಸು

|
Google Oneindia Kannada News

ವಿಜಯಪುರ, ನವೆಂಬರ್ 17; ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿ ಪೂರ್ಣಗೊಳ್ಳುತ್ತಾ ಬಂದಿದೆ. 727 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಶೀಘ್ರದಲ್ಲಿಯೇ ವಾಣಿಜ್ಯ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ.

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ಜಿಲ್ಲಾಡಳಿತದ ಜೊತೆ ಸಭೆ ನಡೆಸಿದರು. ವಿಮಾನ ನಿಲ್ದಾಣಕ್ಕೆ 'ಶ್ರೀ ಬಸವೇಶ್ವರ ವಿಮಾನ ನಿಲ್ದಾಣ' ಎಂದು ನಾಮಕರಣ ಮಾಡಲು ಈಗಾಗಲೇ ಸರ್ಕಾರ ಒಪ್ಪಿಗೆ ನೀಡಿದೆ.

ವಿಜಯಪುರ ವಿಮಾನ ನಿಲ್ದಾಣಕ್ಕೆ ಬಸವೇಶ್ವರ ಹೆಸರಿಡಲು ಸಂಪುಟ ಸಭೆ ಅನುಮೋದನೆವಿಜಯಪುರ ವಿಮಾನ ನಿಲ್ದಾಣಕ್ಕೆ ಬಸವೇಶ್ವರ ಹೆಸರಿಡಲು ಸಂಪುಟ ಸಭೆ ಅನುಮೋದನೆ

ವಿಜಯಪುರ ನಗರದ ಹೊರವಲಯದ ಬುರಾಣಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. 220 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ 2022ರ ಡಿಸೆಂಬರ್‌ನಲ್ಲಿ ಸಂಚಾರಕ್ಕೆ ಮುಕ್ತಗೊಳ್ಳುವ ಗುರಿ ಹೊಂದಲಾಗಿತ್ತು.

ಕೊಪ್ಪಳ ವಿಮಾನ ನಿಲ್ದಾಣ; ಸ್ಥಳ ಪರಿಶೀಲಿಸಿ ವರದಿ ತಯಾರಿಕೆಗೆ ಸೂಚನೆಕೊಪ್ಪಳ ವಿಮಾನ ನಿಲ್ದಾಣ; ಸ್ಥಳ ಪರಿಶೀಲಿಸಿ ವರದಿ ತಯಾರಿಕೆಗೆ ಸೂಚನೆ

ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವ ವಿ. ಸೋಮಣ್ಣ ಕೆಲವು ದಿನಗಳ ಹಿಂದೆ ವಿಧಾನಸಭೆ ಕಲಾಪದಲ್ಲಿ ವಿಮಾನ ನಿಲ್ದಾಣದ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ್ದರು. "2022ರ ಡಿಸೆಂಬರ್ ವೇಳೆಗೆ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡುವ ಭರವಸೆ ನೀಡಲಾಗಿತ್ತು. ಕೆಲವು ಕಾರಣದಿಂದ ವಿಳಂಬವಾಗುತ್ತಿದೆ" ಎಂದು ಹೇಳಿದ್ದರು.

ದಾವಣಗೆರೆ ಏರ್‌ಪೋರ್ಟ್‌ ಬೇಡಿಕೆಗೆ ಮನ್ನಣೆ, ಅಧಿಕಾರಿಗಳ ಭೇಟಿದಾವಣಗೆರೆ ಏರ್‌ಪೋರ್ಟ್‌ ಬೇಡಿಕೆಗೆ ಮನ್ನಣೆ, ಅಧಿಕಾರಿಗಳ ಭೇಟಿ

ಜನರಿಗೆ ವಿಮಾನದಲ್ಲಿ ಸಂಚರಿಸುವ ಅವಕಾಶ

ಜನರಿಗೆ ವಿಮಾನದಲ್ಲಿ ಸಂಚರಿಸುವ ಅವಕಾಶ

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಬಳಿಕ ಮಾತನಾಡಿದ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, "ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಂಡು ವಿಜಯಪುರದ ಜನತೆ ವಿಮಾನದಲ್ಲಿ ಸಂಚರಿಸುವ ಅವಕಾಶ ಲಭ್ಯವಾಗಲಿದೆ" ಎಂದು ಹೇಳಿದರು.

"ಈ ವಿಮಾನ ನಿಲ್ದಾಣದಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ. ಆಲಮಟ್ಟಿ, ಕೊಲ್ಲಾಪುರ, ಸೊಲ್ಲಾಪುರ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ತೆರಳಲು ಅನುಕೂಲವಾಗಲಿದೆ" ಎಂದರು.

ಬುರಾಣಪುರದಲ್ಲಿನ ವಿಮಾನ ನಿಲ್ದಾಣ

ಬುರಾಣಪುರದಲ್ಲಿನ ವಿಮಾನ ನಿಲ್ದಾಣ

"ವಿಜಯಪುರ ವಿಮಾನ ನಿಲ್ದಾಣವನ್ನು ಎಟಿಆರ್‌ 72 ದಿಂದ ಏರ್ ಬಸ್ 320 ವಿಮಾನಗಳ ಹಾರಾಟಕ್ಕೆ ಅನುಕೂಲವಾಗುವಂತೆ ಹೆಚ್ಚುವರಿಯಾಗಿ 127.29 ಕೋಟಿ ಹೆಚ್ಚುವರಿ ಅನುದಾನದ ಕಾಮಗಾರಿಗೆ ಸರ್ಕಾರದಿಂದ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಭೌತಿಕ ಮತ್ತು ತಾಂತ್ರಿಕ ಕಾಮಗಾರಿಗಳು ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿದೆ" ಎಂದು ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

ವಿಜಯಪುರ ವಿಮಾನ ನಿಲ್ದಾಣದಲ್ಲಿ ಎಟಿಆರ್‌-72 ಮಾದರಿಯ ವಿಮಾನಗಳ ಹಾರಾಟಕ್ಕಾಗಿ 220 ಕೋಟಿ ರೂ. ಮಂಜೂರಾಗಿದೆ. ಎರಡು ಹಂತದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

2023ರ ಜೂನ್‌ಗೆ ಲೋಕಾರ್ಪಣೆ?

2023ರ ಜೂನ್‌ಗೆ ಲೋಕಾರ್ಪಣೆ?

ವಿಮಾನ ನಿಲ್ದಾಣಕ್ಕೆ ಜಮೀನು ನೀಡಿದವರಿಗೆ 63.76 ಕೋಟಿ ರೂ. ಪರಿಹಾರ ನೀಡಲಾಗಿದೆ. ವಿಮಾನ ನಿಲ್ದಾಣದಲ್ಲಿ ರಾತ್ರಿ ಸಹ ವಿಮಾನ ಲ್ಯಾಂಡ್ ಆಗಲು ವ್ಯವಸ್ಥೆ ಮಾಡಲಾಗುತ್ತಿದೆ. 2023ರ ಜೂನ್‌ಗೆ ವಿಮಾನ ನಿಲ್ದಾಣ ಲೋರ್ಕಾಪಣೆ ಮಾಡುವ ಗುರಿ ಹಾಕಿಕೊಳ್ಳಲಾಗಿದೆ.

95 ಕೋಟಿ ರೂ. ವೆಚ್ಚದಲ್ಲಿ ಮೊದಲನೇ ಹಂತದ ಕಾಮಗಾರಿ ಕೈಗೊಳ್ಳಲಾಗಿದೆ. ಇದರಲ್ಲಿ ಶೇ 64.75ರಷ್ಟು ಭೌತಿಕ ಹಾಗೂ ಶೇ 64.75 ಆರ್ಥಿಕ ಪ್ರಗತಿ ಸಾಧಿಸಲಾಗಿದೆ ಎಂದು ವಿಜಯಪುರ ಜಿಲ್ಲಾಡಳಿತ ಡಾ. ಶೈಲೇಂದ್ರ ಬೆಲ್ದಾಳೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ನೀಡಿದೆ.

ಎರಡು ಹಂತಗಳಲ್ಲಿ ಕಾಮಗಾರಿ

ಎರಡು ಹಂತಗಳಲ್ಲಿ ಕಾಮಗಾರಿ

ವಿಜಯಪುರ ವಿಮಾನ ನಿಲ್ದಾಣದ 2ನೇ ಹಂತದ ಕಾಮಗಾರಿಗೆ 125 ಕೋಟಿ ಮಂಜೂರಾಗಿದೆ. ಇದನ್ನು ಎರಡು ಭಾಗವಾಗಿ ಮಾಡಿ ಕಾಮಗಾರಿ ನಡೆಸಲಾಗುತ್ತಿದೆ. 2ನೇ ಹಂತದ ಸಿವಿಲ್ ಕಾಮಗಾರಿ ಪ್ರಗತಿ ಶೇ 40.93, ಆರ್ಥಿಕ ಪ್ರಗತಿ ಶೇ 40.93ರಷ್ಟು ಎಂದು ಜಿಲ್ಲಾಡಳಿತ ಹೇಳಿದೆ.

ವಿಮಾನ ನಿಲ್ದಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಸರ್ಕಾರ ವಿಜಯಪುರ ವಿಮಾನ ನಿಲ್ದಾಣಕ್ಕೆ 'ಶ್ರೀ ಬಸವೇಶ್ವರ ವಿಮಾನ ನಿಲ್ದಾಣ' ಎಂದು ನಾಮಕರಣ ಮಾಡಲು ಈಗಾಗಲೇ ಅನುಮೋದನೆ ನೀಡಿದೆ.

English summary
Karnataka to get another airport. Vijayapura airport work may complete soon. Airport will come up in the 727 acre of land and it may open in 2023 June.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X