ಆಲಮಟ್ಟಿ ಜಲಾಶಯ ಭರ್ತಿ : 32 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

ವಿಜಯಪುರ, ಜುಲೈ 28 : ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. 32 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.

519.60 ಮೀಟರ್ ಎತ್ತರದ ಆಲಮಟ್ಟಿ ಜಲಾಶಯದಲ್ಲಿ ಭಾನುವಾರ 519.34 ಮೀಟರ್‌ನಷ್ಟು ನೀರಿನ ಸಂಗ್ರಹವಿದೆ. 6 ಕ್ರಸ್ಟ್ ಗೇಟ್‌ಗಳ ಮೂಲಕ 32 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.

ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದಾಗಿ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಭಾನುವಾರ 72 ಸಾವಿರ ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.

Alamatti Dam Full : 32 Cusec Water Released

32 ಸಾವಿರ ಕ್ಯೂಸೆಕ್ ನೀರು, ವಿದ್ಯುತ್ ಉತ್ಪಾದನಾ ಘಟಕಗಳ ಮೂಲಕ ಸುಮಾರು 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಆದ್ದರಿಂದ, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಆಲಮಟ್ಟಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ ಜಲಾಶಯ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿದೆ. ನೀರಾವರಿ ಮತ್ತು ವಿದ್ಯುತ್ ಉತ್ಪಾದನೆಗೆ ಈ ಜಲಾಶಯದ ನೀರನ್ನು ಬಳಕೆ ಮಾಡಲಾಗುತ್ತದೆ.

ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಆಲಮಟ್ಟಿ ಜಲಾಶಯ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿದೆ. ಜಲಾಶಯ ಭರ್ತಿಯಾದರೆ 123 ಟಿಎಂಸಿ ನೀರನ್ನು ಸಂಗ್ರಹಣೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+