ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯಪುರ ಜನರಿಗೆ ಸಿಹಿಸುದ್ದಿ ಕೊಟ್ಟ ರೈಲ್ವೆ ಇಲಾಖೆ

|
Google Oneindia Kannada News

ವಿಜಯಪುರ, ಆಗಸ್ಟ್ 24; ನೈಋತ್ಯ ರೈಲ್ವೆ ವಿಜಯಪುರ ಮತ್ತು ಮಂಗಳೂರಿನ ಜನರಿಗೆ ಸಿಹಿಸುದ್ದಿ ಕೊಟ್ಟಿದೆ. ಕೋವಿಡ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು-ವಿಜಯಪುರ ರೈಲು ಸಂಚಾರ ಪುನಃ ಆರಂಭವಾಗಲಿದೆ. ಶೀಘ್ರದಲ್ಲೇ ರೈಲಿನ ವೇಳಾಪಟ್ಟಿ ಅಂತಿಮಗೊಳ್ಳಲಿದೆ.

ರೈಲು ಪುನಃ ಆರಂಭಿಸಲು ನೈಋತ್ಯ ರೈಲ್ವೆ ಈಗಾಗಲೇ ಸಿದ್ಧತೆ ಆರಂಭಿಸಿದೆ. ಆದರೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲು ವೇಳಾಪಟ್ಟಿ ಪರಿಷ್ಕರಣೆ ಮಾಡುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವಗೆ ಮನವಿ ಮಾಡಿದ್ದಾರೆ.

ಬೈಯಪ್ಪನಹಳ್ಳಿ-ಕೆಂಗೇರಿ ನಮ್ಮ ಮೆಟ್ರೋ ರೈಲು ದರ ಪಟ್ಟಿ ಬೈಯಪ್ಪನಹಳ್ಳಿ-ಕೆಂಗೇರಿ ನಮ್ಮ ಮೆಟ್ರೋ ರೈಲು ದರ ಪಟ್ಟಿ

ಸದ್ಯ ಇರುವ ಪ್ರಸ್ತಾವನೆ ಪ್ರಕಾರ ವಿಜಯಪುರದಿಂದ ಹೊರಡುವ ರೈಲು ಮಂಗಳೂರಿಗೆ 12.40ಕ್ಕೆ ಆಗಮಿಸಲಿದೆ. ಸಂಜೆ 4.30ಕ್ಕೆ ಮತ್ತೆ ಹೊರಡಲಿದೆ. ಈ ವೇಳಾಪಟ್ಟಿಯಿಂದ ಕರಾವಳಿ ಜನರಿಗೆ ತೊಂದರೆ ಆಗಲಿದೆ ಎಂದು ಸಂಸದರು ರೈಲ್ವೆ ಸಚಿವರ ಗಮನ ಸೆಳೆದಿದ್ದಾರೆ.

 ಕರ್ನಾಟಕಕ್ಕೆ ಬರುವ ರೈಲು ಪ್ರಯಾಣಿಕರ ಗಮನಕ್ಕೆ ಕರ್ನಾಟಕಕ್ಕೆ ಬರುವ ರೈಲು ಪ್ರಯಾಣಿಕರ ಗಮನಕ್ಕೆ

All Set To Resume Mangaluru Vijayapura train Service

ರೈಲು ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಬೇಕು. ಈ ಹಿಂದೆ ಇದ್ದಂತೆ ರೈಲು ಬೆಳಗ್ಗೆ 9.30ಕ್ಕೆ ಮಂಗಳೂರು ಜಂಕ್ಷನ್ ತಲುಪಬೇಕು. ಸಂಜೆ 5.30ಕ್ಕೆ ಇಲ್ಲಿಂದ ಹೊರಡಬೇಕು. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಲಾಗಿದೆ.

ಗುಡ್ಡ ಕುಸಿತ; 345 ಜನರ ಜೀವ ಉಳಿಸಿದ ರೈಲು ಸಿಬ್ಬಂದಿಗಳು ಗುಡ್ಡ ಕುಸಿತ; 345 ಜನರ ಜೀವ ಉಳಿಸಿದ ರೈಲು ಸಿಬ್ಬಂದಿಗಳು

ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಅನಾನುಕೂಲವಾದಲ್ಲಿ ಬಂದರಿನ ಗೂಡ್‌ಶೆಡ್‌ ಯಾರ್ಡ್‌, ಉಳ್ಳಾಲ ನಿಲ್ದಾಣದಲ್ಲಿ ನಿಲುಗಡೆ ಮಾಡಬಹುದು. ಪುನಃ ಜಂಕ್ಷನ್‌ಗೆ ತಂದು ವಿಜಯಪುರಕ್ಕೆ ಸಂಚಾರ ನಡೆಸಬಹುದು ಎಂದು ನಳಿನ್ ಕುಮಾರ್ ಕಟೀಲ್ ಸಲಹೆಯನ್ನು ನೀಡಿದ್ದಾರೆ.

ಮಂಗಳೂರು-ಚೆನ್ನೈ ರೈಲು; ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು-ಚೆನ್ನೈ ನಡುವೆ ನೇರ ರೈಲು ಆರಂಭಿಸಬೇಕು ಎಂದು ರೈಲ್ವೆ ಇಲಾಖೆಗೆ ಮನವಿ ಮಾಡಿದ್ದಾರೆ. ಮಂಗಳೂರು-ಹಾಸನ-ಬೆಂಗಳೂರು ಮಾರ್ಗವಾಗಿ ಚೆನ್ನೈಗೆ ರೈಲು ಸೇವೆ ಆರಂಭಿಸಿದರೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಮಂಗಳೂರು-ಚೆನ್ನೈ ನಡುವಿನ ರೈಲು ಪ್ರಸ್ತುತ ಪಾಲ್ಘಾಟ್, ಕೊಯಮತ್ತೂರು ಮಾರ್ಗವಾಗಿ ಸಂಚಾರ ನಡೆಸುತ್ತಿದೆ. ಮಂಗಳೂರು-ಹಾಸನ-ಚೆನ್ನೈ ಮೂಲಕ ರೈಲು ಸಂಚಾರ ನಡೆಸಿದರೆ ಸುಮಾರು 200 ಕಿ. ಮೀ. ಉಳಿತಾಯವಾಗಲಿದೆ ಎಂದು ಸಂಸದರು ಉಲ್ಲೇಖಿಸಿದ್ದಾರೆ.

ಆಗಸ್ಟ್ 26 ರಿಂದ ವಾಸ್ಕೋ-ಚೆನ್ನೈ ಸೆಂಟ್ರಲ್ ರೈಲು; ನೈಋತ್ಯ ರೈಲ್ವೆ ವಾಸ್ಕೋ ಡಾ-ಗಾಮ ಡಾ. ಎಂ. ಜಿ. ಆರ್. ಸೆಂಟ್ರಲ್ ನಡುವೆ ರೈಲನ್ನು ಓಡಿಸುವುದಾಗಿ ಘೋಷಣೆ ಮಾಡಿದೆ. ರೈಲು ನಂಬರ್ 07371/ 07372 ರೈಲು ಆಗಸ್ಟ್ 26ರಿಂದ ವಾರಕ್ಕೊಮ್ಮೆ ಸಂಚಾರ ನಡೆಸಲಿದೆ.

Recommended Video

ಎಲ್ಲಾ ವಿಮಾನವನ್ನ ಹೈಜಾಕ್ ಮಾಡುತ್ತಿರುವ ಉಗ್ರರು !! | Oneindia Kannada

ರೈಲ್ವೆ ಇಲಾಖೆ ರೈಲು ಸಂಖ್ಯೆ 06249/ 06250 ಯಶವಂತಪುರ-ಹಜರತ್ ನಿಜಾಮುದ್ದೀನ್- ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆಯನ್ನು ಯಶವಂತಪುರದಿಂದ 27/9/2021ರ ವರೆಗೆ ಮತ್ತು ಹಜರತ್ ನಿಜಾಮುದ್ದೀನ್‌ನಿಂದ 30/9/2021ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.

English summary
South western railway all set to resume Mangaluru Vijayapura train. The train service stopped in the time of Covid situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X