ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೋಂ ಕ್ವಾರಂಟೈನ್
ವಿಜಯಪುರ, ಸೆಪ್ಟೆಂಬರ್ 14: ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೋಂ ಕ್ವಾರಂಟೈನ್ ಆಗಿದ್ದಾರೆ. ಸ್ನೇಹಿತರಿಗೆ ಕೋವಿಡ್ ಸೋಂಕು ದೃಢವಾದ ಹಿನ್ನಲೆಯಲ್ಲಿ ಸ್ವಯಂ ಪ್ರೇರಿತವಾಗಿ ಅವರು ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
ಈ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿದ್ದಾರೆ. ಕೆಲವು ಸ್ನೇಹಿತರು, ಸಹಾಯಕರಿಗೆ ಕೋವಿಡ್ ಸೋಂಕು ತಗುಲಿದ್ದು ಖಚಿತವಾದ ಹಿನ್ನಲೆಯಲ್ಲಿ ಹೋಂ ಕ್ವಾರಂಟೈನ್ ಆಗಿದ್ದೇನೆ ಎಂದು ಹೇಳಿದ್ದಾರೆ.

ಕೆಲವು ದಿನಗಳ ಕಾಲ ನಾನು ಐಸೊಲೇಷನ್‌ನಲ್ಲಿ ಇರಲಿದ್ದೇನೆ. ದೇವರ ಆಶೀರ್ವಾದ ಮತ್ತು ನನ್ನ ಕ್ಷೇತ್ರದ ಜನರ ಹಾರೈಕೆಯಿಂದಾಗಿ ನಾನು ಗುಣಮುಖನಾಗಿ ಕ್ಷೇತ್ರಕ್ಕೆ ಬರಲಿದ್ದೇನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
I had quarantined myself for couple of days and remained isolated from all including my family as couple of my associates and friends proved covid positive. By the grace of god and with peoples wishes I am hale and healthy I am back in constituency, 🙏
— B R Patil (Yatnal) (@b_yatnal) September 13, 2020
ಭಾನುವಾರದ ವರದಿಯಂತೆ ವಿಜಯಪುರದಲ್ಲಿ 30 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 7,750ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 577.
ಸೆಪ್ಟೆಂಬರ್ 21ರಿಂದ ಕರ್ನಾಟಕ ವಿಧಾನಸಭೆ ಅಧಿವೇಶನ ಆರಂಭವಾದಲಿದೆ. ಅಧಿವೇಶನದಲ್ಲಿ ಪಾಲ್ಗೊಳ್ಳುವ ಮೊದಲು ಎಲ್ಲಾ ಶಾಸಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು.












Click it and Unblock the Notifications