• search
 • Live TV
ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೋಂ ಕ್ವಾರಂಟೈನ್‌

|

ವಿಜಯಪುರ, ಸೆಪ್ಟೆಂಬರ್ 14: ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೋಂ ಕ್ವಾರಂಟೈನ್‌ ಆಗಿದ್ದಾರೆ. ಸ್ನೇಹಿತರಿಗೆ ಕೋವಿಡ್ ಸೋಂಕು ದೃಢವಾದ ಹಿನ್ನಲೆಯಲ್ಲಿ ಸ್ವಯಂ ಪ್ರೇರಿತವಾಗಿ ಅವರು ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಈ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿದ್ದಾರೆ. ಕೆಲವು ಸ್ನೇಹಿತರು, ಸಹಾಯಕರಿಗೆ ಕೋವಿಡ್ ಸೋಂಕು ತಗುಲಿದ್ದು ಖಚಿತವಾದ ಹಿನ್ನಲೆಯಲ್ಲಿ ಹೋಂ ಕ್ವಾರಂಟೈನ್‌ ಆಗಿದ್ದೇನೆ ಎಂದು ಹೇಳಿದ್ದಾರೆ.

ಮನೆಯಲ್ಲೇ ಕೊಪ್ಪಳದಲ್ಲಿ ಕೋವಿಡ್ ಗೆದ್ದ 105ರ ವೃದ್ಧೆ

ಕೆಲವು ದಿನಗಳ ಕಾಲ ನಾನು ಐಸೊಲೇಷನ್‌ನಲ್ಲಿ ಇರಲಿದ್ದೇನೆ. ದೇವರ ಆಶೀರ್ವಾದ ಮತ್ತು ನನ್ನ ಕ್ಷೇತ್ರದ ಜನರ ಹಾರೈಕೆಯಿಂದಾಗಿ ನಾನು ಗುಣಮುಖನಾಗಿ ಕ್ಷೇತ್ರಕ್ಕೆ ಬರಲಿದ್ದೇನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಬೆಂಗಳೂರು ಟಾಪ್!

ಭಾನುವಾರದ ವರದಿಯಂತೆ ವಿಜಯಪುರದಲ್ಲಿ 30 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 7,750ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 577.

   European Guide Vision ಸಂಸ್ಥೆ Infosys ತೆಕ್ಕೆಗೆ | Oneindia Kannada

   ಸೆಪ್ಟೆಂಬರ್ 21ರಿಂದ ಕರ್ನಾಟಕ ವಿಧಾನಸಭೆ ಅಧಿವೇಶನ ಆರಂಭವಾದಲಿದೆ. ಅಧಿವೇಶನದಲ್ಲಿ ಪಾಲ್ಗೊಳ್ಳುವ ಮೊದಲು ಎಲ್ಲಾ ಶಾಸಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು.

   English summary
   Vijayapura BJP MLA Basanagouda Patil Yatnal I have gone into home quarantine and will recover soon with all your good wishes.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X