ಬಿಜೆಪಿ ಶಾಸಕರು ಜೆಡಿಎಸ್ ಸಂಪರ್ಕದಲ್ಲಿದ್ದಾರೆ: ಬಂಡೆಪ್ಪ ಕಾಶೆಂಪುರ
ವಿಜಯಪುರ, ಜನವರಿ 14: ಬಿಜೆಪಿಯ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ನಮ್ಮ ಪಕ್ಷಕ್ಕೆ ಬರಲು ಅವರು ತಯಾರಾಗಿದ್ದಾರೆ ಎಂದು ಸಚಿವ ಬಂಡೆಪ್ಪ ಕಾಶೆಂಪುರ ಹೊಸ ಬಾಂಬ್ ಸಿಡಿಸಿದ್ದಾರೆ.
ಕಾಂಗ್ರೆಸ್‌ನ ಕೆಲವು ಶಾಸಕರು ಬಿಜೆಪಿ ಪಾಳಯಕ್ಕೆ ನೆಗೆಯಲು ತಯಾರಾಗಿದ್ದಾರೆ ಎಂಬ ಸುದ್ದಿಗೆ ಪ್ರತಿಕ್ರಿಯೆಯಾಗಿ ಅವರು ಈ ಹೇಳಿಕೆ ನೀಡಿದ್ದಾರೆ.
ಮುದ್ದೆಬಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಹೊಂದಾಣಿಕೆ ಕೊರತೆ ಇದೆ ಆದರೆ ಅದನ್ನು ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುತ್ತೇವೆ. ಆದರೆ ಸರ್ಕಾರ ಬೀಳುತ್ತದೆ ಎನ್ನುವ ಸುದ್ದಿ ಅಪ್ಪಟ ಸುಳ್ಳು ಎಂದು ಅವರು ಹೇಳಿದರು.

ಸರ್ಕಾರವು ಸರಿಯಾದ ದಾರಿಯಲ್ಲಿಯೇ ನಡೆಯುತ್ತಿದೆ ಎಂದ ಅವರು, ಮುಂದಿನ ಬಜೆಟ್‌ನಲ್ಲಿ ಕುಮಾರಸ್ವಾಮಿ ಅವರು ದಾಖಲೆ ಪ್ರಮಾಣದಲ್ಲಿ ರಾಜ್ಯದ ಜನರಿಗೆ ಉಡುಗೊರೆಗಳನ್ನು ನೀಡಲಿದ್ದಾರೆ ಎಂದು ಹೇಳಿದರು.
ಸಾಲಮನ್ನಾ ಬಗ್ಗೆ ಮಾತನಾಡಿದ ಅವರು, ಸಾಲಮನ್ನಾ ವಿಷಯದಲ್ಲಿ ಸರ್ಕಾರ ತಪ್ಪು ಮಾಡಿಲ್ಲ. ಸಾಲ ಮರುಪಾವತಿ ಮಾಡದ ಯಾವ ರೈತನಿಗೂ ನೊಟೀಸ್‌ಗಳು ಹೋಗಿಲ್ಲ. ಫಲಾನುಭವಿಗಳಲ್ಲದವರಿಗೆ ಯೋಜನೆ ಹೋಗಬಾರದು ಎಂಬ ಕಾರಣಕ್ಕೆ ರೈತರ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಸಚಿವರು ಹೇಳಿದರು.












Click it and Unblock the Notifications