ವಿಜಯಪುರ-ಅಥಣಿ ರಾಜ್ಯ ಹೆದ್ದಾರಿಯಲ್ಲಿ ಸೇತುವೆ ಕುಸಿತ
ವಿಜಯಪುರ, ಅಕ್ಟೋಬರ್ 01 : ವಿಜಯಪುರ-ಅಥಣಿ ನಡುವಿನ ರಾಜ್ಯ ಹೆದ್ದಾರಿಯಲ್ಲಿನ ಸೇತುವೆ ಕುಸಿದು ಬಿದ್ದಿದೆ. 2002ರಲ್ಲಿ ನಿರ್ಮಾಣವಾಗಿದ್ದ ಸೇತುವೆ ಈಗ ಕುಸಿದು ಬಿದ್ದಿದ್ದು, ಯಾವುದೇ ಪ್ರಾಣಾಪಾಯ ಆಗಿಲ್ಲ.
ಸೋಮವಾರ ಮಧ್ಯಾಹ್ನ ವಿಜಯಪುರ-ಅಥಣಿ ನಡುವಿನ ರಾಜ್ಯ ಹೆದ್ದಾರಿಯ ಸೇತುವೆ ರತ್ನಾಪುರ ಗ್ರಾಮದ ಬಳಿ ಕುಸಿದು ಬಿದ್ದಿದೆ. ಸೇತುವೆ ಕುಸಿದು ಬೀಳುವಾಗ ಯಾವುದೇ ವಾಹನಗಳು ಸಂಚಾರ ನಡೆಸುತ್ತಿರಲಿಲ್ಲ. ಆದ್ದರಿಂದ, ಅವಘಡ ತಪ್ಪಿದೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ರಾಜ್ಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿದರು. ಈ ಹೆದ್ದಾರಿಯಲ್ಲಿ ಸಂಚಾರ ನಡೆಸುವ ವಾಹನಗಳು ರತ್ನಾಪುರ-ತಿಕೋಟ ಮಾರ್ಗದಲ್ಲಿ ಸಂಚಾರ ನಡೆಸುವಂತೆ ಸೂಚನೆ ನೀಡಲಾಗಿದೆ.

ಸ್ಥಳೀಯರು ನೀಡಿರುವ ಮಾಹಿತಿಯಂತೆ ಸೇತುವೆ 2002ರಲ್ಲಿ ನಿರ್ಮಾಣವಾಗಿತ್ತು. ಸೇತುವೆಯ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿಲ್ಲ ಎಂದು ಜನರು ಅನುಮಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೇತುವೆ ಕುಸಿದ ಪರಿಣಾಮ ಸ್ಥಳೀಯರ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸೇತುವೆಯನ್ನು ತಕ್ಷಣ ದುರಸ್ಥಿಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜನರು ಒತ್ತಾಯಿಸಿದ್ದಾರೆ.












Click it and Unblock the Notifications