ಕುತೂಹಲ ಮೂಡಿಸಿದ ಯಡಿಯೂರಪ್ಪ, ಯತ್ನಾಳ್ ರಹಸ್ಯ ಭೇಟಿ!

ವಿಜಯಪುರ, ನವೆಂಬರ್ 27 : ಮಾಜಿ ಕೇಂದ್ರ ಸಚಿವ, ಉತ್ತರ ಕರ್ನಾಟಕ ಭಾಗದ ಪ್ರಭಾವಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಬಿ.ಎಸ್.ಯಡಿಯೂರಪ್ಪ ಜೊತೆ ರಹಸ್ಯ ಮಾತುಕತೆ ನಡೆಸಿದರು. ಈ ಸಭೆ ರಾಜಕೀಯ ವಲಯದಲ್ಲಿ ಕುತೂಹಲ ಉಂಟುಮಾಡಿದೆ.

ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಸೋಮವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ವಿಜಯಪುರಕ್ಕೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ನಗರದ ಪ್ರವಾಸಿ ಮಂದಿರದಲ್ಲಿ ಯಡಿಯೂರಪ್ಪ, ಯತ್ನಾಳ್ ಮಾತುಕತೆ ನಡೆಸಿದ್ದಾರೆ.

ವಿಜಯಪುರ-ಬಾಗಲಕೋಟೆ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಿದ ಕಾರಣಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.

ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಬಸನಗೌಡ ಪಾಟೀಲ್ ಯತ್ನಾಳ್ ಪುನಃ ಬಿಜೆಪಿ ಸೇರುವ ಬಗ್ಗೆ ಚರ್ಚೆ ಆರಂಭವಾಗಿತ್ತು. ಉಭಯ ನಾಯಕರ ಇಂದಿನ ಭೇಟಿ ಇದರಿಂದ ಕುತೂಹಲಕ್ಕೆ ಕಾರಣವಾಗಿದೆ. ಶೀಘ್ರದಲ್ಲೇ ಯತ್ನಾಳ್ ಬಿಜೆಪಿಗೆ ಮರಳಬಹುದು ಎಂದು ವಿಶ್ಲೇಷಿಸಲಾಗುತ್ತಿದೆ...

ಮೊದಲು ಬಿಜೆಪಿಯಲ್ಲಿದ್ದರು

ಮೊದಲು ಬಿಜೆಪಿಯಲ್ಲಿದ್ದರು

ಮೊದಲು ಬಿಜೆಪಿಯಲ್ಲಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಜವಳಿ ಖಾತೆ ಸಚಿವರಾಗಿದ್ದರು. ನಂತರದ ಬೆಳವಣಿಗೆಗಳಿಂದ ಪಕ್ಷ ತೊರೆದು ಜೆಡಿಎಸ್ ಸೇರಿದ್ದರು. ಈಗ ಪುನಃ ಬಿಜೆಪಿ ಸೇರಬಹುದು ಎಂಬ ಸುದ್ದಿ ಹಬ್ಬಿದೆ.

ವಿಧಾನಪರಿಷತ್ ಸದಸ್ಯರು

ವಿಧಾನಪರಿಷತ್ ಸದಸ್ಯರು

ವಿಜಯಪುರ-ಬಾಗಲಕೋಟೆ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು ಸಾಧಿಸಿದ್ದರು. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಅವರು ಶಿವಸೇನೆ ಸೇರಲು ಸಿದ್ಧತೆ ನಡೆಸುತ್ತಿದ್ದರು.

ಬಿಜೆಪಿಗೆ ಯತ್ನಾಳ್ ವಾಪಸ್?

ಬಿಜೆಪಿಗೆ ಯತ್ನಾಳ್ ವಾಪಸ್?

ಯಡಿಯೂರಪ್ಪ ಬಿಜೆಪಿ ಅಧ್ಯಕ್ಷರಾದ ಬಳಿಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಗೆ ಮರಳಬಹುದು ಎಂಬ ಸುದ್ದಿ ಹಬ್ಬಿತ್ತು. ಯಡಿಯೂರಪ್ಪ ಅವರು ರಾಷ್ಟ್ರೀಯ ನಾಯಕರ ಬಳಿ ಈ ಬಗ್ಗೆ ಚರ್ಚೆ ನಡೆಸಿದ್ದರು. ಹೈಕಮಾಂಡ್ ನಾಯಕರು ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷಕ್ಕೆ ಮರಳಲು ಒಪ್ಪಿಗೆ ನೀಡಿದ್ದರು.

ಯತ್ನಾಳ್ ಹೇಳಿದ್ದೇನು?

ಯತ್ನಾಳ್ ಹೇಳಿದ್ದೇನು?

ಸೋಮವಾರ ಯಡಿಯೂರಪ್ಪ ಭೇಟಿ ಮಾಡಿದ ಬಳಿಕ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, 'ನಾನು ಬಿಜೆಪಿ ಸೇರುವ ಕುರಿತು 15 ದಿನದಲ್ಲಿ ತಿಳಿಯಲಿದೆ' ಎಂದು ಹೇಳಿದರು.

ಜೆಡಿಎಸ್ ಸೇರಿದ್ದರು

ಜೆಡಿಎಸ್ ಸೇರಿದ್ದರು

ಬಿಜೆಪಿಯಲ್ಲಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಯಡಿಯೂರಪ್ಪ ಟೀಕಿಸಿದ ಕಾರಣಕ್ಕೆ ಪಕ್ಷದಿಂದ ಹೊರ ಹೋಗಿದ್ದರು. 2010ರಲ್ಲಿ ಜೆಡಿಎಸ್ ಸೇರಿದ್ದರು. 2013ರ ಚುನಾವಣೆಯಲ್ಲಿ ವಿಜಯಪುರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. 2013ರಲ್ಲಿ ಪುನಃ ಬಿಜೆಪಿಗೆ ಮರಳಿದ್ದರು. 2015ರಲ್ಲಿ ಪುನಃ ಪಕ್ಷದಿಂದ ಉಚ್ಛಾಟನೆಗೊಂಡಿದ್ದರು.

ಯಡಿಯೂರಪ್ಪ ಪರವಾಗಿ ನಿಂತಿದ್ದರು

ಯಡಿಯೂರಪ್ಪ ಪರವಾಗಿ ನಿಂತಿದ್ದರು

ಕೆಲವು ತಿಂಗಳ ಹಿಂದೆ ಯಡಿಯೂರಪ್ಪ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ, 'ವಿಜಯಪುರದಿಂದ ಸ್ಪರ್ಧಿಸಲು ಆಹ್ವಾನ ಕೊಟ್ಟಿದ್ದರು. ಜಿಲ್ಲೆಯ ಯಾವುದೇ ಕ್ಷೇತ್ರದಿಂದ ಅವರು ಸ್ಪರ್ಧಿಸಿದರೂ ಗೆಲ್ಲಿಸಿ ತರುತ್ತೇನೆ' ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+