Get Updates
Get notified of breaking news, exclusive insights, and must-see stories!

ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ: ರಾಜಕೀಯ ಗಣ್ಯರಿಂದ ಸಂತಾಪ

ವಿಜಯಪುರ ಜನವರಿ 2: ಅನಾರೋಗ್ಯದಿಂದಾಗಿ ಇಂದು ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರು ಕೊನೆಯಿಸಿರೆಳೆದಿದ್ದಾರೆ. 82 ನೇ ವಯಸ್ಸಿನಲ್ಲಿ ಶ್ರೀಗಳು ಲಿಂಗೈಕ್ಯರಾಗಿದ್ದಾರೆ. ಇದರಿಂದಾಗಿ ವಿಜಯಪುರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಜೊತೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಳೆ ಬೆಳಗ್ಗೆ 11 ಕ್ಕೆ ವಿಜಯಪುರಕ್ಕೆ ಪ್ರಯಾಣಿಸಲಿದ್ದಾರೆ.

'ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು. ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಶ್ರೀಗಳ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ನಾಡಿನಾದ್ಯಂತ ಇರುವ ಶ್ರೀಗಳ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

CM Basavaraj Bommai express grief over death of Siddeswara Swamiji

ಶ್ರೀಗಳ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಜಲ ಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ "ಇಹಪರ ಎರಡೂ ಒಂದೆ ಎಂದು ಸಾರುತ್ತ ಅದರಂತೆ ನಡೆಯುತ್ತ ಇರುವ ಅಪರೂಪದ ಯೋಗಿಗಳು ಶ್ರೀ ಸಿದ್ದೇಶ್ವರ ಸ್ವಾಮೀಜಿ. ನಿಸರ್ಗವನ್ನು ಅತ್ಯಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಗುರುಗಳು ಇಂದು ನಮ್ಮನ್ನು ಅಗಲಿರುವುದು ಅಪಾರ ದುಃಖ ತಂದಿದೆ.ಅವರ ಅವರ ಅಗಲುವಿಕೆಯಿಂದ ನಾಡಿನ ಆಧ್ಯಾತ್ಮಿಕ ಕೊಂಡಿಯೊಂದು ಕಳಚಿದಂತಾಗಿದೆ.ಸಿದ್ದೇಶ್ವರ ಸ್ವಾಮಿಜಿಗಳ ಅಗಲುವಿಕೆಯಿಂದ ಅವರ ಅಪಾರ ಭಕ್ತ ಸಮೂಹಕ್ಕೆ ಆಗಿರುವ ದುಃಖದಲ್ಲಿ ನಾನು ಭಾಗಿ. ವೈಯಕ್ತಿಕವಾಗಿ ಪೂಜ್ಯರೊಂದಿಗೆ 50 ವರ್ಷಗಳ ಸುಧಿರ್ಘ ಒಡನಾಟ ಅಂತ್ಯ ಗೊಂಡಿದ್ದು ದುಃಖತಂದಿದೆ.ದಯಾಘನನಾದ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ" ಎಂದು ಕಂಬನಿ ಮಿಡಿದಿದ್ದಾರೆ.

'ವಿಜಯಪುರ ಜ್ಞಾನಯೋಗಾಶ್ರಮದ ಜ್ಞಾನಯೋಗಿ, ಕಾಯಕಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ' ಎಂದು ಸಂಸದ ಪ್ರತಾಪ್ ಸಿಂಹ ಟ್ವಿಟ್ ಮಾಡಿದ್ದಾರೆ.


'ಸಂತ, ಜ್ಞಾನಯೋಗಿ, ಸಮಾಜದ ಹಿತ ಚಿಂತಕರು, ಖ್ಯಾತ ಪ್ರವಚನಕಾರರಾಗಿದ್ದ ವಿಜಯಪುರದ ಜ್ಞಾನಯೋಗಾಶ್ರಮದ ಪೂಜ್ಯಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಉತ್ತಮ ಸಮಾಜ ನಿರ್ಮಾಣ ಮತ್ತು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸ್ವಾಮೀಜಿಯವರು ನೀಡುತ್ತಿದ್ದ ಸಂದೇಶಗಳು ಸದಾ ದಾರಿ ದೀಪವಾಗಿರುತ್ತವೆ' ಬಿಸಿ ನಾಗೇಶ್ ಕಂಬನಿ ಮಿಡಿದಿದ್ದಾರೆ.

'ತಮ್ಮ ಸರಳತೆ ಹಾಗೂ ಪ್ರವಚನ ಮೂಲಕ ವಿಶ್ವಾದ್ಯಂತ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿ, ನಡೆದಾಡುವ ದೇವರು ಎಂದೇ ನಂಬಿದ್ದ ಕಾಯಕ ಯೋಗಿ ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ನಮ್ಮನ್ನೆಲ್ಲ ಅಗಲಿದ್ದಾರೆ ಎಂಬುದನ್ನು ನಂಬಲು ನನ್ನಿಂದ ಆಗುತ್ತಿಲ್ಲ‌. ಅನ್ನ ಶಿಕ್ಷಣ ಕಲ್ಪಿಸಿ ಮೌಢ್ಯದ ವಿರುದ್ದ ಜನಜಾಗೃತಿ ಮೂಡಿಸುತ್ತಿದ್ದ ಶ್ರೀಗಳ ಅಗಲಿಕೆ ನಮಗೆ ಬಹಳ ನೋವು ತಂದಿದೆ.

CM Basavaraj Bommai express grief over death of Siddeswara Swamiji

ನಾಲ್ಕು ದಿನಗಳ ಹಿಂದೆಯಷ್ಟೇ ಭೇಟಿಯಾಗಿದ್ದ ಅವರು ಶೀಘ್ರ ಗುಣಮುಖರಾಗುತ್ತಾರೆ ಎಂಬ ನಿರೀಕ್ಷೆ ಹುಸಿಯಾಯಿತು.ಮಹಾ ಸಂತನೊಬ್ಬನನ್ನು ಕಳೆದುಕೊಂಡು ದುಃಖದಲ್ಲಿರುವ ಅವರ ಅಸಂಖ್ಯಾತ ಭಕ್ತರಿಗೆ ಶ್ರೀಗಳ ಅಗಲಿಕೆಯ ದುಃಖವನ್ನು ಭರಿಸುವಂತಹ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದು ಬೇಡಿಕೊಳ್ಳುತ್ತೇನೆ. ಅವರ ಅಗಲಿಕೆ ರಾಜ್ಯ ಹಾಗೂ ದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ' ಎಂದು ಬಿ ಶ್ರೀರಾಮುಲು ಸಂತಾಪ ಸೂಚಿಸಿದ್ದಾರೆ.

'ನಮ್ಮ ಪಾಲಿಗೆ ನಡೆದಾಡುವ ಬೆಳಕು, ನಡೆದಾಡುವ ಅರಿವು, ನಡೆದಾಡುವ ದೇವರೇ ಆಗಿದ್ದ ಜ್ಞಾನ ಯೋಗಾಶ್ರಮದ ಜ್ಞಾನಯೋಗಿ ಪರಮಪೂಜ್ಯ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ.ಸಮಾಜಕ್ಕೆ ಚಿಕಿತ್ಸರಾಗಿದ್ದ ಪೂಜ್ಯರು, ತಮ್ಮ ಪರಿಪೂರ್ಣ ಸಾರ್ಥಕ ಬದುಕಿನಿಂದಲೇ ನಮ್ಮನ್ನು ಪಾವನಗೊಳಿಸಿದವರು. ತಮ್ಮ ಪ್ರತಿ ಹೆಜ್ಜೆಯಲ್ಲೂ ಜ್ಞಾನದ ಬೆಳಕು ಮೂಡಿಸುತ್ತಿದ್ದ ಅವರ ನಿರ್ಗಮನ ಬಹುದೊಡ್ಡ ನಷ್ಟ. ಪೂಜ್ಯರು ಬಿಟ್ಟುಹೋಗಿರುವ ಅರಿವು ನಮಗೆಲ್ಲ ದಿವ್ಯಬೆಳಕು. ಆ ಬೆಳಕಿನಡಿಯಲ್ಲಿ ಮುನ್ನಡೆಯೋಣ ಎನ್ನುವ ಆಶಯ ನನ್ನದಾಗಿದೆ' ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

'ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಯವರು ಲಿಂಗೈಕ್ಯರಾದ ಸುದ್ದಿಯು ಅತ್ಯಂತ ದುಃಖದಾಯಕವಾಗಿದೆ. ಜನರ ಆಸ್ತಿಕ ಭಾವನೆಗಳು ಮೌಢ್ಯಗಳತ್ತ ಜಾರದಂತೆ ಆಧ್ಯಾತ್ಮಿಕ ಅಂತಃಶಕ್ತಿ ತುಂಬಿ, ಸನ್ಮಾರ್ಗ ತೋರುತ್ತಾ, ಸಾಮಾಜಮುಖಿ ಕಾರ್ಯಗಳಲ್ಲಿ ತೊಡಗಿ ಸದಾ ಲೋಕದ ಹಿತ ಬಯಸುತ್ತಿದ್ದ ಶ್ರೀಗಳನ್ನ ಕಳೆದುಕೊಂಡ ನಾಡು ಬಡವಾಗಿದೆ' ಎಂದು ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+