ವಿಜಯಪುರ, ಡಿಸೆಂಬರ್ 20: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈಗೊಂಡಿರುವ ನವ ಕರ್ನಾಟಕ ನಿರ್ಮಾಣದತ್ತ ಕೈಗೊಂಡಿರುವ ರಾಜ್ಯ ಪ್ರವಾಸ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿದೆ.
ಬಾಗಲಕೋಟೆ: 550 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟಿಸಿದ ಸಿಎಂ
ಇಂದು (ಬುಧವಾರ) ವಿಜಯಪುರ ಜಿಲ್ಲೆಗೆ ಆಗಮಿಸಿದ್ದು, ನವ ವಿಜಯಪುರ ನಿರ್ಮಾಣಕ್ಕೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಬುಧವಾರ ಬೆಳಗ್ಗೆ 10.20ಕ್ಕೆ ಮುದ್ದೇಬಿಹಾಳ, ಮದ್ಯಾಹ್ನ 1ಕ್ಕೆ ಬಾಬಲೇಶ್ವರದಲ್ಲಿ ಮಾಳಿಂಗರಾಯ ದೇವಸ್ಥಾನವನ್ನು ಉದ್ಘಾಟಿಸಲಿದ್ದಾರೆ.ಮದ್ಯಾಹ್ನ 3.45ಕ್ಕೆ ವಿಜಯಪರ ನಗರದಲ್ಲಿ ಕಿತ್ತೂರು ರಾಣಿಚೆನ್ನಮ್ಮ ಮೂರ್ತಿ ಅನಾವರಣಗೊಳಿಸಲಿದ್ದಾರೆ. ಬಳಿಕ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ವಿಜಯಪುರದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಈಗಾಗಲೇ ಬೀದರ್, ರಾಯಚೂರು, ಬಳ್ಳಾರಿ, ಕಲಬುರಗಿ ಜಿಲ್ಲೆಗಳಲ್ಲಿ ಸಾವಿರಾರೂ ಕೋಟಿ ರು.ಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರ.subscribe to Kannada Oneindia.
ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!