ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಲಿಂಗಾಯತ ಧರ್ಮ ಹೋರಾಟಕ್ಕೂ ಕಾಂಗ್ರೆಸ್ಸಿಗೂ ಸಂಬಂಧವಿಲ್ಲ'

|
Google Oneindia Kannada News

ವಿಜಯಪುರ, ಡಿಸೆಂಬರ್ 10: ಕಾಂಗ್ರೆಸ್ ಪಕ್ಷಕ್ಕೂ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವ ವಿಚಾರವು ಲಿಂಗಾಯತ ಸಮುದಾಯ ಮತ್ತು ಕೇಂದ್ರ ಸರ್ಕಾರಕ್ಕೆ ಬಿಟ್ಟಿದ್ದು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಪ್ರತ್ಯೇಕ ಲಿಂಗಾಯತ ಧರ್ಮ ಶಿಫಾರಸ್ಸು ತಿರಸ್ಕಾರ, ಹೈಕೋರ್ಟಿಗೆ ಮಾಹಿತಿಪ್ರತ್ಯೇಕ ಲಿಂಗಾಯತ ಧರ್ಮ ಶಿಫಾರಸ್ಸು ತಿರಸ್ಕಾರ, ಹೈಕೋರ್ಟಿಗೆ ಮಾಹಿತಿ

ಲಿಂಗಾಯತ ಸಮುದಾಯದ ಜನರು ಪ್ರತ್ಯೇಕ ಧರ್ಮಕ್ಕೆ ಬೇಡಿಕೆ ಸಲ್ಲಿಸಿದ್ದರು. ಅದಕ್ಕೆ ಅನುಗುಣವಾಗಿ ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ರವಾನಿಸಿತ್ತು.

Congress has nothing to do with separate lingayat religion dinesh gundurao

ಪ್ರತ್ಯೇಕ ಧರ್ಮ ರಚನೆಯ ಸಂಬಂಧ ಕೇಂದ್ರ ಸರ್ಕಾರದ ನಿಲುವು ಏನೆಂಬುದು ಸ್ಪಷ್ಟವಾಗಿ ಗೊತ್ತಾಗಿಲ್ಲ. ಈಗಿನ ಸಂದರ್ಭದಲ್ಲಿ ಪ್ರತ್ಯೇಕ ಧರ್ಮದ ವಿಚಾರವು ಕೇಂದ್ರ ಸರ್ಕಾರ ಹಾಗೂ ಲಿಂಗಾಯತ ಸಮುದಾಯಕ್ಕೆ ಬಿಟ್ಟಿರುವಂತಹದ್ದು. ಅದು ನಮ್ಮ ಸರ್ಕಾರದ ಕಾರ್ಯಕ್ರಮ ಅಲ್ಲ ಎಂದು ದಿನೇಶ್ ಹೇಳಿದ್ದಾರೆ.

ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ತಿರಸ್ಕಾರ : ಯಾರು, ಏನು ಹೇಳಿದರು? ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ತಿರಸ್ಕಾರ : ಯಾರು, ಏನು ಹೇಳಿದರು?

'ಲಿಂಗಾಯತ ಧರ್ಮದ ವಿಚಾರವಾಗಿ ನಾವು ತಪ್ಪು ಮಾಡಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರೇ ಒಪ್ಪಿಕೊಂಡಿದ್ದಾರೆ. ಸಿದ್ದರಾಮಯ್ಯ ಕೂಡ ನಾವು ಪ್ರತ್ಯೇಕ ಧರ್ಮದ ಪ್ರಸ್ತಾವನೆ ಮಾಡಬಾರದಿತ್ತು ಎಂದು ಹೇಳಿಕೊಂಡಿದ್ದಾರೆ. ಇದೆಲ್ಲ ಕೇವಲ ರಾಜಕೀಯ ಗಿಮಿಕ್. ರಾಜಕೀಯ ಲಾಭಕ್ಕಾಗಿ ಪ್ರತ್ಯೇಕ ಧರ್ಮ ಹೋರಾಟಕ್ಕೆ ಸರ್ಕಾರ ಮುಂದಾಗಿತ್ತು. ಚುನಾವಣೆಯಲ್ಲಿ ಮುಖಭಂಗ ಆದ ಬಳಿಕ ಅವರಿಗೆ ಅರ್ಥವಾಗಿದೆ' ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

English summary
KPCC President Dinesh Gundu Rao said, the issue of separate Lingayat religion is up to Lingayat community and the central government.Congress has nothing to do with that.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X