ಸಂಪುಟ ವಿಸ್ತರಣೆಗೆ ಬೇಡಿಕೆ ಇಟ್ಟ ಎಂ.ಬಿ.ಪಾಟೀಲ್

ವಿಜಯಪುರ, ನವೆಂಬರ್ 29 : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ಸಂಪುಟ ವಿಸ್ತರಣೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಗುರುವಾರ ವಿಜಯಪುರದಲ್ಲಿ ಮಾತನಾಡಿದ ಎಂ.ಬಿ.ಪಾಟೀಲ್ ಅವರು, 'ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ನೇಮಕಾತಿ ನಡೆಯದಿದ್ದರೆ ಆಡಳಿತ ನಡೆಸಲು ಕಷ್ಟವಾಗಲಿದೆ' ಎಂದು ಹೇಳಿದರು.

'ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆ ಆದರೆ ಆಡಳಿತದಲ್ಲಿ ಚುರುಕು ಬರಲು ಸಾಧ್ಯವಿದೆ. ಆದ್ದರಿಂದ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು' ಎಂದು ಒತ್ತಾಯಿಸಿದರು.

Congress MLA MB Patil demands for cabinet expansion

'ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು 6 ತಿಂಗಳು ಕಳೆದಿದೆ. ಇನ್ನು ಮುಂದಾದರೂ ಸರ್ಕಾರ ಚುರುಕಾಗಬೇಕು. ಆದ್ದರಿಂದ, ಸಂಪುಟ ವಿಸ್ತರಣೆ, ನಿಗಮ-ಮಂಡಳ ನೇಮಕವಾಗಬೇಕು' ಎಂದರು.

'ನನ್ನನ್ನು ಸಚಿವರನ್ನಾಗಿ ಮಾಡದಿದ್ದರೂ ಪರವಾಗಿಲ್ಲ. ಸಚಿವ ಸಂಪುಟ ಪೂರ್ಣ ಪ್ರಮಾಣದಲ್ಲಿ ರಚನೆಯಾಗಬೇಕು' ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ 8 ಸಚಿವ ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ ಜೆಡಿಎಸ್ ಪಕ್ಷಕ್ಕೆ 2, ಕಾಂಗ್ರೆಸ್ ಪಕ್ಷಕ್ಕೆ 6 ಸ್ಥಾನಗಳು ಸಿಗಲಿವೆ. ಆರು ಸ್ಥಾನಗಳಿಗೆ ಕಾಂಗ್ರೆಸ್‌ನಲ್ಲಿ 12 ಕ್ಕೂ ಅಧಿಕ ಜನರು ಆಕಾಂಕ್ಷಿಗಳಾಗಿದ್ದಾರೆ.

ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ : ಸದ್ಯದ ಮಾಹಿತಿ ಪ್ರಕಾರ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಮೊದಲೇ ಸಂಪುಟ ವಿಸ್ತರಣೆಯಾಗಲಿದೆ. ಡಿಸೆಂಬರ್ 10 ರಿಂದ ಅಧಿವೇಶನ ಆರಂಭವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+