ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯಪುರ: 18 ಸಿಬ್ಬಂದಿಗೆ ಸೋಂಕು ಹಿನ್ನೆಲೆ ಪಾಲಿಕೆ ಸೀಲ್ ಡೌನ್

|
Google Oneindia Kannada News

ವಿಜಯಪುರ, ಜುಲೈ.13: ಕೊರೊನಾವೈರಸ್ ಅಟ್ಟಹಾಸಕ್ಕೆ ಜಿಲ್ಲೆಯ ಸಾಮಾನ್ಯ ಜನರಷ್ಟೇ ಅಲ್ಲ ಕೊರೊನಾ ವಾರಿಯರ್ಸ್ ಕೂಡಾ ಬೆಚ್ಚಿ ಬೀಳುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ಮಹಾನಗರ ಪಾಲಿಕೆಯ 18 ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದೆ.

ವಿಜಯಪುರ ಮಹಾನಗರ ಪಾಲಿಕೆ ಸಿಬ್ಬಂದಿಗೂ ಕೊರೊನಾವೈರಸ್ ಸೋಂಕು ಪತ್ತೆಯಾಗಿದ್ದು, ಮುಂದಿನ 48 ಗಂಟೆಗಳ ಕಾಲ ಪಾಲಿಕೆಯ ಕಚೇರಿಯನ್ನು ಸೀಲ್ ಡೌನ್ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಕೊರೊನಾವೈರಸ್ ನಿಯಂತ್ರಣಕ್ಕೆ ಇಲ್ಲಿವೆ ಶಿಸ್ತುಕ್ರಮಗಳುಕರ್ನಾಟಕದಲ್ಲಿ ಕೊರೊನಾವೈರಸ್ ನಿಯಂತ್ರಣಕ್ಕೆ ಇಲ್ಲಿವೆ ಶಿಸ್ತುಕ್ರಮಗಳು

ವಿಜಯಪುರದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಐವರು ಸಿಬ್ಬಂದಿ, ಗಾಂಧಿಚೌಕ್ ಪೊಲೀಸ್ ಠಾಣೆಯ 6 ಪೊಲೀಸರು, ಪೊಲೀಸ್ ಉಪವಿಭಾಗ ಕಚೇರಿಯ ಇಬ್ಬರು ಸೇರಿದಂತೆ ಒಟ್ಟು 14 ಮಂದಿ ಪೊಲೀಸರಿಗೆ ಕೊವಿಡ್-19 ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.

 Vijayapur Corporation 18 Staff And 14 Police Personnel Get Positive For Coronavirus

ಪೊಲೀಸ್ ಠಾಣೆ, ಕಚೇರಿಗೆ 2 ಬಾರಿ ಸ್ಯಾನಿಟೈಸ್:

ವಿಜಯಪುರದ ಜಲ ಮಂಡಳಿ ಕಚೇರಿಯ ಇಬ್ಬರು ಸಿಬ್ಬಂದಿ ಹಾಗೂ ಇಂಡಿ ತಾಲೂಕಿನ ಮೂವರು ಆರೋಗ್ಯ ಕಾರ್ಯಕರ್ತರಿಗೂ ಕೊರೊನಾವೈರಸ್ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಹಾಗೂ ಕಚೇರಿಗಳಿಗೆ ದಿನದಲ್ಲಿ ಎರಡು ಬಾರಿ ಸ್ಯಾನಿಟೈಸ್ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ತಿಳಿಸಿದ್ದಾರೆ.

ವಿಜಯಪುರದಲ್ಲಿ ಒಟ್ಟು 758 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 490 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. 252 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಇದುವರೆಗೂ ಮಹಾಮಾರಿಗೆ 16 ಜನರು ಪ್ರಾಣ ಬಿಟ್ಟಿದ್ದಾರೆ.

English summary
Vijayapur Corporation 18 Staff And 14 Police Personnel Get Positive For Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X