ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ ಪರಿಸ್ಥಿತಿ; ಸಿಂಧಗಿ ಉಪ ಚುನಾವಣೆ ಮುಂದೂಡಿಕೆ

|
Google Oneindia Kannada News

ವಿಜಯಪುರ, ಮೇ 06; ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕರ್ನಾಟಕದಲ್ಲಿಯೂ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಚುನಾವಣಾ ಆಯೋಗ ಹಲವಾರು ಕ್ಷೇತ್ರಗಳ ಉಪ ಚುನಾವಣೆಯನ್ನು ಮುಂದೂಡಿಕೆ ಮಾಡಿದೆ.

ವಿಜಯಪುರ ಜಿಲ್ಲೆಯ ಸಿಂಧಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ (85) ಜನವರಿ 28ರಂದು ಮೃತಪಟ್ಟಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

ಸಿಂಧಗಿ; ಉಪ ಚನಾವಣೆಗೆ ಮುನ್ನ ಆಪರೇಷನ್ ಜೆಡಿಎಸ್!ಸಿಂಧಗಿ; ಉಪ ಚನಾವಣೆಗೆ ಮುನ್ನ ಆಪರೇಷನ್ ಜೆಡಿಎಸ್!

ದೇಶದಲ್ಲಿನ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಚುನಾವಣಾ ಆಯೋಗ 3 ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತ್ತು 8 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಮುಂದೂಡಿದೆ. ಈ ಹಿನ್ನಲೆಯಲ್ಲಿ ಸಿಂಧಗಿ ಉಪ ಚುನಾವಣೆಯೂ ಮುಂದೂಡಿಕೆಯಾಗಿದೆ.

ಗೆದ್ದ 2 ಬಾರಿಯೂ ಸಚಿವರಾಗಿದ್ದ ಎಂ. ಸಿ. ಮನಗೂಳಿ ಪರಿಚಯಗೆದ್ದ 2 ಬಾರಿಯೂ ಸಚಿವರಾಗಿದ್ದ ಎಂ. ಸಿ. ಮನಗೂಳಿ ಪರಿಚಯ

 COVID Situation Sindgi By Poll Postponed

ಯಾವುದೇ ಎಂಪಿ ಅಥವ ಎಂಎಲ್‌ಎ ಮೃತಟ್ಟರೆ ಆರು ತಿಂಗಳ ಒಳಗೆ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕು. ಆದರೆ, ದೇಶದಲ್ಲಿನ ಕೋವಿಡ್ ಪರಿಸ್ಥಿತಿ ಅವಲೋಕಿಸಿರುವ ಆಯೋಗ ಉಪ ಚುನಾವಣೆಗಳನ್ನು ಮುಂದೂಡಿಕೆ ಮಾಡಿದೆ.

ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂಸಿ ಮನಗೂಳಿ ವಿಧಿವಶಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂಸಿ ಮನಗೂಳಿ ವಿಧಿವಶ

ದೇಶದಲ್ಲಿ ಕೋವಿಡ್ ಪರಿಸ್ಥಿತಿ ಸುಧಾರಣೆಯಾದ ಬಳಿಕ ಚುನಾವಣೆ ನಡೆಸುವುದಾಗಿ ಆಯೋಗ ಹೇಳಿದೆ. ಪಶ್ಚಿಮ ಬಂಗಾಳದಲ್ಲಿ 294 ವಿಧಾನಸಭಾ ಕ್ಷೇತ್ರಗಳ ಪೈಕಿ 292 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆದಿದೆ. ಇನ್ನೂ 2 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ.

Recommended Video

#Covid19Updates, Bengaluru: ಉದ್ಯಾನನಗರಿಯಲ್ಲಿ 23106 ಹೊಸ ಕೋವಿಡ್ ಸೋಂಕಿತರು | Oneindia Kannada

ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ಅವರು ಮೃತಪಟ್ಟ ಬಳಿಕ ಅವರ ಪುತ್ರ ಅಶೋಕ ಮನಗೂಳಿ ಜೆಡಿಎಸ್ ಪಕ್ಷವನ್ನು ತೊರೆಯುವುದಾಗಿ ಘೋಷಣೆ ಮಾಡಿದ್ದಾರೆ. ಸಿಂಧಗಿ ಉಪ ಚುನಾವಣೆ ಯಾವಾಗ ನಡೆಯಲಿದೆ? ಎಂಬುದು ಇನ್ನೂ ಖಚಿತವಾಗಿಲ್ಲ.

English summary
Political party's and people to wait for Vijayapura district Sindgi assembly constituency by poll. Due to COVId election commission deferred bypolls to 3 lok sabha and 8 assembly seats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X