ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವುದು ಬಿಜೆಪಿ ಅಜೆಂಡಾ: ದಿನೇಶ್ ಗುಂಡೂರಾವ್

ವಿಜಯಪುರ, ಡಿಸೆಂಬರ್ 13: "ಬಿಜೆಪಿ ಕಾರ್ಯಕರ್ತರೇ ಕೋಮು ಗಲಭೆ ಸೃಷ್ಟಿಸುತ್ತಿದ್ದಾರೆ ಮತ್ತು ಗಲಾಟೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವುದು ಬಿಜೆಪಿ ಅಜೆಂಡವಾಗಿದೆ," ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದರು.

ವಿಜಯಪುರದಲ್ಲಿ ಇಂದು ಮಾತನಾಡಿದ ಅವರು, ಉತ್ತರ ಕನ್ನಡದ ಕುಮುಟಾ ಹಾಗೂ ಶಿರಸಿ ಕೋಮ ಗಲಭೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವ ಕೆಲಸವನ್ನು ರಾಜ್ಯ ಸರಕಾರ ಹಾಗೂ ಪೊಲೀಸ್ ಇಲಾಖೆ ಮಾಡುತ್ತಿದೆ ಎಂದು ಹೇಳಿದರು.

Creating anarchy in the state is BJP’s agenda: Dinesh Gundu Rao

"ಕೋಮ ಗಲಭೆ ಸೃಷ್ಟಿಸುವುದು ಬಿಜೆಪಿಯ ಉದ್ದೇಶವಾಗಿದೆ. ಬಿಜೆಪಿಯ ಪರಿವರ್ತನಾ ಯಾತ್ರೆಯ ಅಜೆಂಡಾ ಇಡೀ ರಾಜ್ಯದಲ್ಲಿ ಹಿಂಸೆಯನ್ನು ಸೃಷ್ಟಿಸುವುದಾಗಿದೆ," ಎಂದು ಗುಂಡೂರಾವ್ ವಾಗ್ದಾಳಿ ನಡೆಸಿದರು.

"ರಾಜ್ಯದಲ್ಲಿ ಬಿಜೆಪಿ ಕೆಟ್ಟ ವಾತಾವರಣವನ್ನು ನಿರ್ಮಾಣ ಮಾಡುತ್ತಿದೆ. ಹಾಗೂ ಬೇಜವಾಬ್ದಾರಿ ರೀತಿಯಲ್ಲಿ ವರ್ತಿಸುತ್ತಿದೆ. ಬಿಜೆಪಿಯವರು ಉದ್ದೇಶ ಪೂರ್ವಕವಾಗಿ ಗಲಾಟೆ ಆಗಲಿ ಅಂತಾ ಆಸೆ ಪಡುತ್ತಿದ್ದಾರೆ," ಎಂದು ಅವರು ಟೀಕಿಸಿದರು.

"ಎರಡು ಕಡೆ ಗೋಲಿಬಾರ್ ಆದರೂ ಬಿಜೆಪಿಯವರಿಗೆ ಸಮಸ್ಯೆ ಇಲ್ಲ," ಎಂದು ದಿನೇಶ್ ಗುಂಡೂರಾವ್ ಇದೇ ವೇಳೆ ಆರೋಪಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+