ಸರ್ಕಾರಕ್ಕೆ ಜನ-ಜಾನುವಾರುಗಳ ಶಾಪ ತಟ್ಟಿದೆ: ರಮೇಶ್ ಜಿಗಜಿಣಗಿ
ವಿಜಯಪುರ, ಜೂನ್ 13: ರಾಜ್ಯದ ಮೈತ್ರಿ ಸರ್ಕಾರಕ್ಕೆ ಜನ-ಜಾನುವಾರುಗಳ ಶಾಪ ತಟ್ಟಿದೆ ಎಂದು ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಹೇಳಿದರು.
ವಿಜಯಪುರದಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಬಳಿ ಒಂದು ರೂಪಾಯಿ ಕೂಡ ಹಣ ಇಲ್ಲ. ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದರು.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಒಂದು ನಾಟಕ. ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವಾಸ್ತವ್ಯ ಹೂಡಿದ್ದ ಗ್ರಾಮಗಳು ಇಂದಿಗೂ ಅಭಿವೃದ್ಧಿಯಾಗಿಲ್ಲ. ರಾಜ್ಯದ ಜನರು ಕುಡಿಯಲು ನೀರು ಸಿಗದೆ ಸಾಯುತ್ತಿದ್ದಾರೆ. ಮುಖ್ಯಮಂತ್ರಿ ಮೊದಲು ಅಭಿವೃದ್ಧಿಯ ಕಡೆಗೆ ಗಮನ ಹರಿಸಲಿ ಎಂದು ಟೀಕಿಸಿದರು.

ಐಎಂಎ ಬಹುಕೋಟಿ ವಂಚನೆ ಹಗರಣದ ಬಗ್ಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಆಳವಾದ ತನಿಖೆ ನಡೆಯಬೇಕು. ಬಳಿಕ ತಪ್ಪಿತಸ್ಥರನ್ನು ನೇಣಿಗೆ ಹಾಕಬೇಕು. ಇದೊಂದು ಅತ್ಯಂತ ಹೇಯ ಕೃತ್ಯ. ಜನರು ಕೂಡ ಎಚ್ಚೆತ್ತುಕೊಳ್ಳಬೇಕು. ಬಡ್ಡಿ ಆಸೆಗೆ ಮರುಳಾಗಬಾರದು. ರಾಜ್ಯ ಸರ್ಕಾರ ಇಂತಹ ವ್ಯವಹಾರ ನಡೆಸುವವರ ಮೇಲೆ ನಿಗಾ ವಹಿಸಬೇಕು ಎಂದು ಹೇಳಿದರು.












Click it and Unblock the Notifications