ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ತಾಯಿ ನಿಧನ
ಬೆಂಗಳೂರು, ನವೆಂಬರ್ 19: ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ತಾಯಿ ವಿಧಿವಶರಾಗಿದ್ದಾರೆ.
ತಾಯಿ ಪಾರ್ವತಿ ಮಕ್ತಪ್ಪ ಕಾರಜೋಳ(90) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಗೋವಿಂದ ಕಾರಜೋಳ ಸೇರಿದಂತೆ ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿ ಸೇರಿದಂತೆ ಮೊಮ್ಮಕ್ಕಳು ಹಾಗೂ ಮರಿಮಕ್ಕಳನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಬುಧವಾರ ವಿಜಯಪುರ ಜಿಲ್ಲೆಯ ಹಾಗೂ ತಾಲೂಕಿನ ಸ್ವಗ್ರಾಮವಾದ ಕಾರಜೋಳದಲ್ಲಿ ಮಧ್ಯಾಹ್ನ 12 ಗಂಟೆಗೆ ನೆರವೇರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಉಪಮುಖ್ಯಮಮತ್ರಿ ಗೋವಿಂದ ಕಾರಜೋಳ ಅವರ ತಾಯಿ ಪಾರ್ವತಪ್ಪ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲು ಎಂದು ಪ್ರಾರ್ಥಿಸುವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.