ಎಸ್‌ಎಸ್‌ಎಲ್‌ಸಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ

ವಿಜಯಪುರ, ಮಾರ್ಚ್ 25 : ಎಸ್‌ಎಸ್‌ಎಲ್‌ಸಿಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಮರು ಪರೀಕ್ಷೆಯನ್ನು ನಡೆಸುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ವಾಟ್ಸಪ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋಮವಾರ ಹರಿದಾಡುತ್ತಿತ್ತು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

'ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಶಿಕ್ಷಕರೊಬ್ಬರು ಪ್ರಶ್ನೆ ಪತ್ರಿಕೆ ಫೋಟೋ ತೆಗೆದು ವಾಟ್ಸಪ್‌ನಲ್ಲಿ ಹಾಕಿಕೊಂಡಿದ್ದರಿಂದ ಗೊಂದಲ ಸೃಷ್ಟಿಯಾಗಿದೆ' ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಸಿ.ಕೆ.ಜಾಫರ್ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತದಾರರೆ, ನಿಮ್ಮ ಕ್ಷೇತ್ರ ಯಾವುದು? ಕಳೆದ ಬಾರಿ ಗೆದ್ದವರು, ಸೋತವರು ಯಾರು?

'ಸೋಮವಾರ ಬೆಳಗ್ಗೆ ಪರೀಕ್ಷೆ ಆರಂಭವಾದ ಒಂದು ಗಂಟೆಯ ಬಳಿಕ ಶಿಕ್ಷಕರು ಪತ್ರಿಕೆ ಫೋಟೋವನ್ನು ತೆಗೆದು ವಾಟ್ಸಪ್‌ನಲ್ಲಿ ಹಾಕಿಕೊಂಡಿದ್ದಾರೆ. ತಪ್ಪಿತಸ್ಥ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಈ ಕುರಿತು ಸಿಂಧಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ' ಎಂದು ಸಿ.ಕೆ.ಜಾಫರ್ ಹೇಳಿದ್ದಾರೆ.

Education dept clarification on SSLC maths question paper leak

'ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಆದ್ದರಿಂದ, ಮರು ಪರೀಕ್ಷೆಯನ್ನು ನಡೆಸುವುದಿಲ್ಲ. ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಗೊಳ್ಳುವ ಅಗತ್ಯವಿಲ್ಲ' ಎಂದು ಸಿ.ಕೆ.ಜಾಫರ್ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ಗಣಿತ ಪರೀಕ್ಷೆ ನಡೆದಿತ್ತು. ಮೊರಟಗಿಯ ಕಲ್ಪವೃಕ್ಷ ಶಿಕ್ಷಣ ಸಂಸ್ಥೆಯಲ್ಲಿ ಪತ್ರಿಕೆ ಸೋರಿಕೆಯಾದ ಮಾಹಿತಿ ಅಧಿಕಾರಿಗಳಿಗೆ ಸಿಕ್ಕಿತ್ತು. ವಾಟ್ಸಪ್‌ನಲ್ಲಿ ಪಶ್ನೆ ಪತ್ರಿಕೆ ಹರಿದಾಡುತ್ತಿತ್ತು. ಇದರಿಂದಾಗಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಆತಂಕ ಉಂಟಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+