ವಿಜಯಪುರ: ಗಾಂಜಾ ನಶೆಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ
ವಿಜಯಪುರ, ಡಿಸೆಂಬರ್ 19: ಯುವತಿಯೊಬ್ಬಾಕೆಯನ್ನು ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ಮಂಜುನಾಥ ನಗರದ ಮಲ್ಲಿಕಾರ್ಜುನ ಶಾಲೆ ಬಳಿ ಘಟನೆ ನಡೆದಿದ್ದು, ಐವರು ಯುವಕರು ಗಾಂಜಾ ಸೇವಿಸಿ ಅದೇ ಮತ್ತಿನಲ್ಲಿ ಯುವತಿಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿ ವಿಕೃತಿ ಮೆರೆದಿದ್ದಾರೆ.

ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಇನ್ನಿಬ್ಬರಿಗಾಗಿ ಹುಡುಕಾಟ ನಡೆಸಿದ್ದಾರೆ. ಕೈಲಾಸ್, ಸಾಗರ್ ಮೋರೆ, ದೀಪಕ್ ಹಾಗೂ ಇನ್ನೂ ಇಬ್ಬರು ಯುವಕರು ಸೇರಿ ಯುವತಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯಪುರ ನಗರದ ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನೆಡದಿದ್ದು, ಪೊಲೀಸರಿಂದ ಬಂಧನಕ್ಕೊಳಗಾಗಿರುವ ಇಬ್ಬರು ಆರೋಪಿಗಳಿಗೆ ಪೊಲೀಸರ ಎದುರೇ ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.












Click it and Unblock the Notifications