Accident: ವಿಜಯಪುರದಲ್ಲಿ ಭೀಕರ ಅಪಘಾತ; ನಾಲ್ವರು ಸಾವು, ಮೂವರ ಸ್ಥಿತಿ ಗಂಭೀರ
ವಿಜಯಪುರ, ಏಪ್ರಿಲ್ 13: ಕಾರು ಹಾಗೂ ಸಿಮೆಂಟ್ ಸಾಗಾಟ ಮಾಡುತ್ತಿದ್ದ ಟ್ರಕ್ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಬಳಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ನಿವಾಸಿಗಳಾದ ರವಿನಾಥ ಸುನಿಲಾಲ್ ಪತ್ತಾರ ( 52 ), ಪುಷ್ಪಾ ರವಿನಾಥ ಪತ್ತಾರ ( 40) ಅರ್ಜುನ್ ಹಾಗೂ ಮೇಘರಾಜ ಎಂದು ಗುರುತಿಸಲಾಗಿದೆ.

ಬ್ಯಾಂಕ್ ಉದ್ಯೋಗಿ ಅರ್ಜುನ್ ಅವರಿಗೆ ರವಿನಾಥ್ ತಮ್ಮ ಮಗಳು ಜಯಶ್ರೀಯನ್ನು ಮದುವೆ ಮಾಡಿಕೊಟ್ಟಿದ್ದರು. ಅರ್ಜುನ್ ಮೂವರು ಮಕ್ಕಳಿದ್ದು, ಅವರಲ್ಲಿ ಓರ್ವ ಮಗ ಮೇಘರಾಜ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.
ಬ್ಯಾಂಕ್ ಉದ್ಯೋಗಿಯಾಗಿದ್ದ ಅರ್ಜುನ್ ಸಿಂಗ್ಗೆ ಮಹಾಲಿಂಗಪುರದಿಂದ ವಿಜಯಪುರಕ್ಕೆ ವರ್ಗಾವಣೆಗೊಂಡಿತ್ತು. ಹೀಗಾಗಿ ಮನೆ ಸ್ಥಳಾಂತರಿಸಲು ವಿಜಯಪುರದಿಂದ ಜಮಖಂಡಿ ಮಾರ್ಗವಾಗಿ ಮಹಾಲಿಂಗಪುರಕ್ಕೆ ತೆರಳುತ್ತಿದ್ದ ವೇಳೆ ಜಮಖಂಡಿಯಿಂದ ಸಿಮೆಂಟ್ ಲೋಡ್ ಇದ್ದ ಲಾರಿ ವಿಜಯಪುರದತ್ತ ಬರುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿಯಾಗಿದೆ.
ಈ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದರೆ. ಅರ್ಜುನ್ ಪತ್ನಿ ಜಯಶ್ರೀ ಅರ್ಜುನ ರಜಪೂತ(30) ಮಗಳು ನಾಯನಾ( 6) ಹಾಗೂ ಮತ್ತೊಬ್ಬ ಮಗ ಪ್ರೇಮಸಿಂಗ್(13 ) ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಬಾಲಕಿಯನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












Click it and Unblock the Notifications