ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಣೇಶ ಚತುರ್ಥಿ : ಮೈಸೂರು-ವಿಜಯಪುರ ನಡುವೆ ವಿಶೇಷ ರೈಲು

|
Google Oneindia Kannada News

ವಿಜಯಪುರ, ಆಗಸ್ಟ್ 28 : ಗಣೇಶ ಚತುರ್ಥಿ ಅಂಗವಾಗಿ ನೈಋತ್ಯ ರೈಲ್ವೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ. ಮೈಸೂರು-ವಿಜಯಪುರ ನಡುವೆ ಈ ರೈಲು ಸಂಚಾರ ನಡೆಸಲಿದೆ. ಬೆಂಗಳೂರು-ಬೆಳಗಾವಿ ನಡುವೆಯೂ ರೈಲಿನ ವ್ಯವಸ್ಥೆ ಮಾಡಲಾಗಿದೆ.

ರೈಲ್ವೆ ಖಾತೆ ರಾಜ್ಯ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಸೂಚನೆಯಂತೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರು ಈ ರೈಲಿನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಕೋರಿದೆ.

ಗಣೇಶ ಚತುರ್ಥಿ : ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲುಗಣೇಶ ಚತುರ್ಥಿ : ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲು

ರೈಲು ಸಂಖ್ಯೆ 06583 ಶುಕ್ರವಾರ (ಆಗಸ್ಟ್ 30) ಮೈಸೂರಿನಿಂದ ಮಧ್ಯಾಹ್ನ 12.50ಕ್ಕೆ ಹೊರಡಲಿದ್ದು, ಶನಿವಾರ ಬೆಳಗ್ಗೆ 10.20ಕ್ಕೆ ವಿಜಯಪುರ ತಲುಪಲಿದೆ. ರೈಲು ಸಂಖ್ಯೆ 06584 ಸೆಪ್ಟೆಂಬರ್ 2ರ ಸೋಮವಾರ ಸಂಜೆ 6 ಗಂಟೆಗೆ ವಿಜಯಪುರದಿಂದ ಹೊರಡಲಿದ್ದು, ಮರುದಿನ ಮಧ್ಯಾಹ್ನ 1.05ಕ್ಕೆ ಮೈಸೂರು ತಲುಪಲಿದೆ.

ಬೆಳಗಾವಿ-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ ಸೇರ್ಪಡೆಬೆಳಗಾವಿ-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ ಸೇರ್ಪಡೆ

Ganesh Chaturthi : Special Train Between Mysuru And Vijayapura

ನಿಲ್ದಾಣಗಳು : ಮೈಸೂರಿನಿಂದ ಹೊರಡುವ ರೈಲು ಮಂಡ್ಯ, ರಾಮನಗರ, ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಚಿತ್ರದುರ್ಗ, ಬಳ್ಳಾರಿ, ಹೊಸಪೇಟೆ, ಕೊಪ್ಪಳ, ಗದಗ, ಬಾದಾಮಿ, ಬಾಗಲಕೋಟೆ, ಆಲಮಟ್ಟಿ, ಬಸವನ ಬಾಗೇವಾಡಿಯಲ್ಲಿ ನಿಲುಗಡೆಗೊಳ್ಳಲಿದೆ.

ಈ ವಿಶೇಷ ರೈಲಿನಲ್ಲಿ ಒಟ್ಟು 16 ಕೋಚ್‌ಗಳಿದ್ದು, 2 ಸಾಮಾನ್ಯ/ಲಗೇಜ್, 2 ತೃತೀಯ ಎಸಿ, 12 ಸ್ಲೀಪರ್ ಕೋಚ್‌ಗಳಿವೆ.

ಬೆಳಗಾವಿ-ಬೆಂಗಳೂರು ಸೂಪರ್ ಫಾಸ್ಟ್ ರೈಲು ನ.1 ರಿಂದ ಕಾಯಂಬೆಳಗಾವಿ-ಬೆಂಗಳೂರು ಸೂಪರ್ ಫಾಸ್ಟ್ ರೈಲು ನ.1 ರಿಂದ ಕಾಯಂ

ರೈಲು ಸಂಖ್ಯೆ 06585 ಆಗಸ್ಟ್ 31ರ ಶನಿವಾರ ವಿಜಯಪುರದಿಂದ ರಾತ್ರಿ 10 ಗಂಟೆಗೆ ಹೊರಡಲಿದ್ದು, ಹುಬ್ಬಳ್ಳಿಗೆ ರವಿವಾರ ಬೆಳಗ್ಗೆ 4 ಗಂಟೆಗೆ ತಲುಪುವಂತೆ, ರೈಲು ಸಂಖ್ಯೆ 06586 ಹುಬ್ಬಳ್ಳಿಯಿಂದ ಸೆಪ್ಟೆಂಬರ್ 1ರಂದು ರಾತ್ರಿ 10.30ಕ್ಕೆ ಹೊರಟು ವಿಜಯಪುರಕ್ಕೆ ಸೋಮವಾರ 4.45ಕ್ಕೆ ತಲುಪುವಂತೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ.

English summary
Special train arranged by South Western railway between Mysuru and Vijayapura to beat Ganesh Chaturthi rush.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X