ವಿಜಯಪುರ: ಅತ್ಯಾಚಾರ ಮಾಡಿ ಕೊಲೆ, ಪೋಷಕರಿಂದ ಅಹೋರಾತ್ರಿ ಪ್ರತಿಭಟನೆ

Posted By: ವಿಜಯಪುರ ಪ್ರತಿನಿಧಿ
Subscribe to Oneindia Kannada

ವಿಜಯಪುರ, ಡಿಸೆಂಬರ್ 20: ಗಾಂಜಾ ನಶೆಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ವಿಜಯಪುರ: ಗಾಂಜಾ ನಶೆಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ

ಆರೋಪಿಗಳಿಗೆ ಕೂಡಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ನಡುರಸ್ತೆಯಲ್ಲಿ ಮೃತ ಬಾಲಕಿಯ ಶವವಿಟ್ಟು ಕುಟುಂಬಸ್ಥರು ಮಂಗಳವಾರ ತಡರಾತ್ರಿ ವಿಜಯಪುರದ ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಇದಕ್ಕೆ ವಿವಿಧ ದಲಿತ ಪರ ಸಂಘಟನೆಗಳು ಸಾಥ್ ನೀಡಿದ್ದು, ಕಲಬುರಗಿ-ಅಥಣಿ ರಸ್ತೆ ಬಂದ್ ಮಾಡಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದದರು.

Gang raped and killed a girl: Family members staged protest for justice at Vijayapura

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ, ಸಂತ್ರಸ್ತ ಬಾಲಕಿಯ ಕುಟಯಂಬಕ್ಕೆ ವೈಯಕ್ತಿಕವಾಗಿ 5 ಲಕ್ಷ ರು. ಹಾಗೂ ಸರ್ಕಾರದಿಂದ 8 ಲಕ್ಷ ರು. ಪರಿಹಾರ ನೀಡುವುದಾಗಿ ಘೋಷಿಸಿದರು. ಬಳಿಕ ಬಾಲಕಿಯ ಪೋಷಕರು ಪ್ರತಿಭಟನೆಯನ್ನು ಕೈಬಿಟ್ಟರು.

ಡಿಸೆಂಬರ್ 19ರಂದು ಮಂಜುನಾಥ ನಗರದ ಮಲ್ಲಿಕಾರ್ಜುನ ಶಾಲೆ ಬಳಿ ಶಾಲೆಗೆ ಹೋಗುತ್ತಿದ್ದ ವೇಳೆ ಐವರು ಯುವಕರು ಗಾಂಜಾ ಸೇವಿಸಿ ಅದೇ ಮತ್ತಿನಲ್ಲಿ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಿ ವಿಕೃತಿ ಮೆರೆದಿದ್ದರು.

ಕೈಲಾಸ, ಸಾಗರ್ ಮೋರೆ, ದೀಪಕ ಹಾಗೂ ಇನ್ನು ಇಬ್ಬರಿಂದ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಕೈಲಾಶ್ ಒರ್ವನನ್ನು ಬಿಟ್ಟು ಉಳಿದ ಇಬ್ಬರು ಅತ್ಯಾಚಾರಿಗಳು ಅಪ್ರಾಪ್ತರು ಎಂದು ತಿಳಿದು ಬಂದಿದೆ. ಸದ್ಯಕ್ಕೆ ಕೈಲಾಸ್ ಮತ್ತು ಸಾಗರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Family members of a girl, who was sexually assaulted and murdered staged a protest at Ambedkar circle in Vijayapura demanding justice the girl. Kin withdrew the protest after minister MB Patil promised action and announced compensation.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ