ಗಂಗಾಧರ ಚಡಚಣ ಹತ್ಯೆ : 373 ಪುಟದ ಚಾರ್ಜ್ ಶೀಟ್ ಸಲ್ಲಿಕೆ

ವಿಜಯಪುರ, ಸೆಪ್ಟೆಂಬರ್ 07 : ವಿಜಯಪುರ ಜಿಲ್ಲೆಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಗಂಗಾಧರ ಚಡಚಣ ಹತ್ಯೆ ಪ್ರಕರಣದ ಕುರಿತು ಸಿಐಡಿ ಪೊಲಿಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇನ್ನೂ ಇಬ್ಬರು ಆರೋಪಿಗಳನ್ನು ಸಿಐಡಿ ಬಂಧಿಸಬೇಕಿದೆ.

ಸಿಐಡಿ ಡಿವೈಎಸ್‌ಪಿ ವಿಜಯ್ ಕುಮಾರ್ ನೇತೃತ್ವದ ತಂಡ ಇಂಡಿ ಜೆಎಫ್‌ಎಂಸಿ ನ್ಯಾಯಾಲಯಕ್ಕೆ ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಒಟ್ಟು 15 ಆರೋಪಿಗಳ ವಿರುದ್ಧ 373 ಪುಟದ ಜಾರ್ಜ್‌ಶೀಟ್ ಸಲ್ಲಿಸಲಾಗಿದೆ.

Gangadhar Chadchan Murder case : CID files charge sheet

ಗಂಗಾಧರ ಚಡಚಣ ಹತ್ಯ ಪ್ರಕರಣದಲ್ಲಿ ಪಿಎಸ್‌ಐ ಗೋಪಾಲ ಹಳ್ಳೂರ್, ಮಹಾದೇವ ಭೈರಗೊಂಡ ಪ್ರಮುಖ ಆರೋಪಿಗಳಾಗಿದ್ದಾರೆ. ಚಡಚಣ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಎಂ.ಬಿ.ಅಸೋಡೆ ಸೇರಿ ಇಬ್ಬರು ಆರೋಪಿಗಳನ್ನು ಇನ್ನೂ ಬಂಧಿಸಬೇಕಿದೆ.

ಗಂಗಾಧರ ಚಡಚಣ ಹತ್ಯೆ ಪ್ರಕರಣದಲ್ಲಿ ಹಲವು ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ. ಆದ್ದರಿಂದ, ಈ ಪ್ರಕರಣ ಕುತೂಹಲ ಕೆರಳಿಸಿದೆ. ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಪಿಎಸ್‌ಐ ಗೋಪಾಲ ಹಳ್ಳೂರ, ಪದೇಗಳಾದ ಸಿದ್ದಾರೂಢ ರಾಗಿ, ಚಂದ್ರಶೇಕರ ಜಾಧವ, ಗೆದ್ದಪ್ಪ ನಾಯ್ಕೋಡಿಯನ್ನು ಈಗಾಗಲೇ ಬಂಧಿಸಲಾಗಿದೆ.

ಚಡಚಣ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಎಂ.ಬಿ.ಅಸೋಡೆ ಅವರು ಪ್ರಕರಣ ಬೆಳಕಿಗೆ ಬಂದ ಬಳಿಕ ನಾಪತ್ತೆಯಾಗಿದ್ದು, ಹುಡುಕಾಟ ಮುಂದುವರೆದಿದೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಜಯಪುರ ಕೋರ್ಟ್ ವಜಾಗೊಳಿಸಿದೆ.

2017ರ ಅಕ್ಟೋಬರ್ 30ರಂದು ವಿಜಯಪುರದಲ್ಲಿ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ರೌಡಿ ಶೀಟರ್ ಧರ್ಮರಾಜ್ ಚಡಚಣ ಹತ್ಯೆಯಾಗಿತ್ತು. ಅವರ ಸಹೋದರ ಗಂಗಾಧರ ಚಡಚಣನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಕೆಲವು ದಿನಗಳ ಬಳಿಕ ಆತ ನಾಪತ್ತೆಯಾಗಿದ್ದ, ಮೂರು ತಿಂಗಳ ಹಿಂದೆ ಆತ ಹತ್ಯೆಯಾಗಿರುವುದ ಬೆಳಕಿಗೆ ಬಂದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+