ಗಂಗಾಧರ ಚಡಚಣ ಹತ್ಯೆ ಪ್ರಕರಣ : ಮಹಾರಾಷ್ಟ್ರಕ್ಕೆ ಎಸ್‌ಐಟಿ ತಂಡ
ವಿಜಪಯರ, ಜೂನ್ 27 : ಗಂಗಾಧರ ಚಡಚಣ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ ಮಹಾರಾಷ್ಟ್ರಕ್ಕೆ ತೆರಳಿದೆ. ಮಹಾದೇವ ಸಾಹುಕಾರ ಅಲ್ಲಿ ಅಡಗಿರುವ ಶಂಕೆ ಇದ್ದು, ತಂಡ ಹುಡುಕಾಟ ನಡೆಸುತ್ತಿದೆ.
ಮಹಾದೇವ ಸಾಹುಕಾರ (ಭೈರಗೊಂಡ) ಗಂಗಾಧರ ಚಡಚಣ ಹತ್ಯೆ ಪ್ರಕರಣದ ಪ್ರಮುಖ ಆರೋಪಿ. ಪ್ರಕರಣದ ಬಗ್ಗೆ ತನಿಖೆ ಆರಂಭವಾದ ಬಳಿಕ ಆತ ನಾಪತ್ತೆಯಾಗಿದ್ದಾನೆ.
ಮಹಾರಾಷ್ಟ್ರದ ಅಹಮದ್‌ನಗರದಲ್ಲಿ ಮಹಾದೇವ ಸಾಹುಕಾರ ಇರುವ ಸುಳಿವು ಎಸ್‌ಐಟಿಗೆ ಸಿಕ್ಕಿದ್ದು, ತಂಡ ಅಲ್ಲಿಗೆ ತೆರಳಿದೆ. ವಿಜಯಪುರದ ಜನರು ಮಹಾರಾಷ್ಟ್ರದಲ್ಲಿ ಮಹಾದೇವ ಸಾಹುಕಾರನನ್ನು ನೋಡಿರುವುದಾಗಿ ಹೇಳಿದ್ದಾರೆ.

ತನ್ನ ಬುಲೆಟ್ ಪ್ರೂಫ್ ಕಾರಿನಲ್ಲಿ ಮಹಾದೇವ ಸಾಹುಕಾರ ಮಹಾರಾಷ್ಟ್ರದಲ್ಲಿ ತಿರುಗಾಡುತ್ತಿದ್ದ ಎಂದು ಎಸ್‌ಐಟಿ ಅಧಿಕಾರಿಗಳಿಗೆ ಜನರು ಮಾಹಿತಿ ನೀಡಿದ್ದಾರೆ. ಆದ್ದರಿಂದ, ತಂಡ ಅಲ್ಲಿ ಹುಡುಕಾಟ ನಡೆಸುತ್ತಿದೆ.
ಮಹಾದೇವ ಸಾಹುಕಾರ ಶರಣಾಗತಿ? : ಗಂಗಾಧರ ಚಡಚಣ ಹತ್ಯೆ ಪ್ರಕರಣದ ಆರೋಪಿಯಾಗಿರುವ ಮಹಾದೇವ ಸಾಹುಕಾರ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದೆ. ಇದೇ ವಾರದಲ್ಲಿ ಅವರು ಶರಣಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ವಿಜಯಪುರ ಜಿಲ್ಲೆಯಲ್ಲಿ ಗಂಗಾಧರ ಹತ್ಯೆ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಪೊಲೀಸ್ ಅಧಿಕಾರಿಗಳು ಈ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ವಿಚಾರ ತಿಳಿದ ಮೇಲೆ ಚರ್ಚೆ ತೀವ್ರಗೊಂಡಿದೆ.












Click it and Unblock the Notifications