ಗಂಗಾಧರ ಚಡಚಣ ಹತ್ಯೆ : ಪ್ರತ್ಯಕ್ಷದರ್ಶಿಯನ್ನು ಬಂಧಿಸಿದ ಸಿಐಡಿ

ವಿಜಯಪುರ, ಜುಲೈ 24 : ಗಂಗಾಧರ ಚಡಚಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾನಂದ ಬಿರಾದಾರ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಗಂಗಾಧರ ಚಡಚಣ ನಿಗೂಢ ನಾಪತ್ತೆ, ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.

ಶಿವಾನಂದ ಬಿರಾದಾರ ಅವರನ್ನು ಮಹಾರಾಷ್ಟ್ರದಲ್ಲಿ ಬಂಧಿಸಿ ವಿಜಯಪುರಕ್ಕೆ ಕರೆತರಲಾಗಿದೆ. ಸದ್ಯ, ಆರೋಪಿ ಸಿಐಡಿ ವಶದಲ್ಲಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿಚಾರಣೆ ಪ್ರಮುಖವಾಗಿದೆ.

ಶಿವಾನಂದ ಬಿರಾದಾರ ಗಂಗಾಧರ ಚಡಚಣ ಹತ್ಯೆ ಪ್ರಕರಣದ ಪ್ರತ್ಯಕ್ಷದರ್ಶಿ ಎಂದು ತಿಳಿದುಬಂದಿದೆ. ಧರ್ಮರಾಜ ಚಡಚಣ ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾಗಲೂ ಈತ ಸ್ಥಳದಲ್ಲಿದ್ದ. ಆದ್ದರಿಂದ ಪ್ರಕರಣದ ತನಿಖೆಗೆ ಆರೋಪಿಯ ಹೇಳಿಕೆ ಮಹತ್ವದ್ದಾಗಿದೆ.

Gangadhara Chadachana murder case witness arrested

ಭೀಮಾ ತೀರದ ರೌಡಿ ಶೀಟರ್ ಧರ್ಮರಾಜ್ ಚಡಚಣ 2017ರ ಅಕ್ಟೋಬರ್ 30ರಂದು ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದ. ಆತನ ಸಹೋದರ ಗಂಗಾಧರ ಚಡಚಣನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ, ಆತ ಬಳಿಕ ನಾಪತ್ತೆಯಾಗಿದ್ದ.

ಗಂಗಾಧರ ಚಡಚಣ ತಾಯಿ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಆತ ಹತ್ಯೆಯಾದ ವಿಚಾರ ಬೆಳಕಿಗೆ ಬಂದಿತ್ತು. ಈ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರ ಮಾಡಿದೆ.

ಗಂಗಾಧರ ಚಡಚಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮಹಾದೇವ ಭೈರಗೊಂಡನನ್ನು ಪೊಲೀಸರು ಬಂಧಿಸಿದ್ದಾರೆ. ಒಬ್ಬರು ಪೊಲೀಸ್ ಇನ್ಸ್‌ಪೆಕ್ಟರ್, ಮೂವರು ಪೇದೆಗಳನ್ನು ಸಹ ಸಿಐಡಿ ಓ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+