Gruha Lakshmi: "ಇದೇ ಕಾರಣಕ್ಕೆ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ!"

ಕರ್ನಾಟಕ ಕಾಂಗ್ರೆಸ್‌ ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಜನರನ್ನು ಭಾವನಾತ್ಮಕವಾಗಿ ಕಟ್ಟಿ ಹಾಕುವ ಕೆಲಸವನ್ನು ಮಾಡುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಹೌದು ಇತ್ತೀಚಿನ ದಿನಗಳಲ್ಲಿ ಗ್ಯಾರಂಟಿ ಯೋಜನೆ ಹಣವನ್ನು ಸಕಾಲದಲ್ಲಿ ಬಿಡುಗಡೆ ಮಾಡದೆ ಇರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಇನ್ನು ಈ ನಡುವೆ ಗ್ಯಾರಂಟಿ ಯೋಜನೆಯ ಹಣವನ್ನು ಯಾವ ಕಾರಣಕ್ಕೆ ಬಿಡುಗಡೆ ಮಾಡಿಲ್ಲ ಎನ್ನುವ ಬಗ್ಗೆ ಗಂಭೀರ ವಿಷಯವೊಂದು ಕೇಳಿ ಬಂದಿದೆ. ಅದೇನು ಎನ್ನುವ ವಿವರ ಇಲ್ಲಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರವು 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿದೆ. ಅದರಲ್ಲೂ ಮುಖ್ಯವಾಗಿ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಗಳು ಸಾಕಷ್ಟು ಪ್ರಸಿದ್ಧತೆಯನ್ನು ಗಳಿಸಿದೆ. ಆದರೆ, ಕಳೆದ ಮೂರು ತಿಂಗಳಿನಿಂದ ಕೆಲವು ಜಿಲ್ಲೆಗಳಲ್ಲಿ ಹಾಗೂ ಇನ್ನೂ ಕೆಲವು ಜಿಲ್ಲೆಗಳಲ್ಲಿ ಕಳೆದ 5 ತಿಂಗಳುಗಳಿಂದ ಗ್ಯಾರಂಟಿ ಯೋಜನೆಯ ಹಣವನ್ನು ಬಿಡುಗಡೆ ಮಾಡಿಲ್ಲ. ಇದೀಗ ಯಾವ ಕಾರಣಕ್ಕೆ ಹಣ ಬಿಡುಗಡೆಯಾಗಿಲ್ಲ ಎನ್ನುವ ಬಗ್ಗೆ ಚರ್ಚೆ ನಡೆದಿದ್ದು. ಬಿಜೆಪಿ ಶಾಸಕ ಯತ್ನಾಳ್‌ ಅವರು ಇದರ ಹಿನ್ನೆಲೆಯಲ್ಲಿ ಬಿಚ್ಚಿಟ್ಟಿದ್ದಾರೆ.

Gruha Lakshmi Money Update This is Why Gruhalakshmi Yojana Money Has not Been Released

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಅವರು ಮತ್ತೊಮ್ಮೆ ಕ್ಲಾಸ್‌ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಇನ್ನೇನು ತಾಲ್ಲೂಕು ಪಂಚಾಯ್ತಿ/ಜಿಲ್ಲಾ ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿದಂತೆ ಕಾರ್ಯಕರ್ತರನ್ನು ಹಾಗೂ ಮುಖಂಡರನ್ನು ಓಲೈಸಲು ಕಾಂಗ್ರೆಸ್ ಪಕ್ಷ ತಮ್ಮ ಗ್ಯಾರಂಟಿ ಸಮಿತಿಯ ಸದಸ್ಯರಿಗೆ ವೇತನ ನೀಡಿದೆ. ಆದರೆ ಫಲಾನುಭವಿಗಳಿಗೆ 3ರಿಂದ 4 ತಿಂಗಳಿನಿಂದ ಹಣ ನೀಡಿಲ್ಲ ಎಂದು ಅವರು ದೂರಿದ್ದಾರೆ.

ಬಾಕಿ ಇರುವ ಗ್ಯಾರಂಟಿ ಹಣವನ್ನು ಚುನಾವಣಾ ಪೂರ್ವದಲ್ಲಿ, ಹಬ್ಬ ಹರಿದಿನಗಳ ಸಮಯದಲ್ಲಿ ಕೊಟ್ಟು ಅವರನ್ನು ಭಾವನಾತ್ಮಕವಾಗಿ ಸೆಳೆದುಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್‌ ಮಾಡುತ್ತಿದೆ. ಫಲಾನುಭವಿಗಳಿಗೆ ಸಿಗದ ಹಣ, ಸಮಿತಿಯ ಸದಸ್ಯರಿಗೆ ಸಿಕ್ಕಿದೆ. ಮುಖ್ಯ ಮಂತ್ರಿಗಳ 'ಆರ್ಥಿಕ ಶಿಸ್ತು' ಬರಿ ಭಾಷಣಕ್ಕೆ ಸೀಮಿತವಾಗಿದೆ. ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಮಿತಿಗಳಿಗೆ ಗೌರವ ಸಂಭಾವನೆ, ಭತ್ಯೆ ಹಾಗೂ ಸಿಬ್ಬಂದಿ ವೆಚ್ಚ ಸೇರಿ ಒಟ್ಟು ವರ್ಷಕ್ಕೆ 16 ಕೋಟಿ ವೆಚ್ಚವಾಗುತ್ತದೆ. ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಿ, ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಬೇಕಾಗಿದ್ದ ಸರ್ಕಾರ ಈ ರೀತಿ ಓಲೈಕೆ ಮಾಡುತ್ತಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಚರ್ಚೆ: ಇನ್ನು ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ಬಗ್ಗೆಯೂ ಅವರು ಮಾತನಾಡಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ವಯೋಮಿತಿಯನ್ನು ಸಡಿಲಿಕೆ ಮಾಡುವುದಾಗಿ ಆಶ್ವಾಸನೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಈಗ ತಟಸ್ಥರಾಗಿದ್ದಾರೆ. ಕಾನ್ಸ್ಟೇಬಲ್ ನೇಮಕಾತಿ ಅಧಿಸೂಚನೆ ಇನ್ನೇನು ಪ್ರಕಟವಾಗುವ ಸಮಯದಲ್ಲಿ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳದೇ ಇರುವುದು ನಿಜಕ್ಕೂ ದುರದೃಷ್ಟಕರ.

ಸರ್ಕಾರ ಕೂಡಲೇ ಎಚೆತ್ತುಕೊಂಡು ನೇಮಕಾತಿ ಅಧಿಸೂಚನೆ ಹೊರಡಿಸುವ ಮುಂಚೆಯೇ ವಯೋಮಿತಿ ಸಡಿಲಿಕೆ ಮಾಡಲಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+