ಮಾಜಿ ಸಿಎಂ ಯಡಿಯೂರಪ್ಪರಿಂದ ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಕೋಟ್ಯಂತರ ಹಣ?

ಬೆಂಗಳೂರು, ಅ. 26: ಬಹಿರಂಗ ಪ್ರಚಾರಕ್ಕೆ ಇನ್ನೆರಡು ದಿನಗಳಿರುವಾಗ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರುತ್ತಿವೆ. ಜೊತೆಗೆ ಹಲವು ರಹಸ್ಯಗಳೂ ಚುನಾವಣೆ ಸಂದರ್ಭದಲ್ಲಿ ಬಯಲಾಗುತ್ತಿವೆ. ಮತ್ತೊಂದು ಸೂಟ್‌ಕೇಸ್ ರಹಸ್ಯವನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಜಯಪುರದಲ್ಲಿ ಬಹಿರಂಗಗೊಳಿಸಿದ್ದಾರೆ.

ಉಪ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಣಕ್ಕಿಳಿಸಿದ್ದಾರೆ. ಆದರೆ ಅವರಿಬ್ಬರೂ ಸಿಂದಗಿ ಉಪ ಚುನಾವಣೆಗೆ ಮಾತ್ರ ಪ್ರಾಮುಖ್ಯತೆ ಕೊಟ್ಟಿದ್ದಾರೆ. ಅದಕ್ಕೆ ಕಾರಣ ಸಿಂದಗಿಯಲ್ಲಿ ಅವರಿಗೆ ಸೂಟ್‌ಕೇಸ್‌ ಬಂದಿರುವುದು. ಹಾನಗಲ್‌ನಲ್ಲಿ ಇನ್ನೂ ಸೂಟ್‌ಕೇಸ್‌ ಬಂದಿಲ್ಲ, ಹೀಗಾಗಿ ಹೋಗಿಲ್ಲ. ಇದನ್ನು ನಾನು ಹೇಳಿದ ಮೇಲೆ ಇಬ್ಬರೂ ನಾಯಕರು ಹಾನಗಲ್‌ಗೆ ಹೋಗಲೂಬಹುದು ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪಿಸಿದ್ದರು.

ಅದಕ್ಕೆ ಪ್ರತ್ಯುತ್ತರ ಕೊಟ್ಟಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು ಹಿಂದಿನ ಸೂಟ್‌ಕೇಸ್ ರಾಜಕೀಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಈ ಹಿಂದೆ ಯಡಿಯೂರಪ್ಪ ಅವರಿಂದ ಸೂಟ್‌ಕೇಸ್ ಪಡೆದುಕೊಂಡು ಚುನಾವಣೆ ಮಾಡಿದ್ದವರು ಯಾರು? ಮುಂದಿದೆ ಕುಮಾರಸ್ವಾಮಿ ಅವರು ಬಹಿರಂಗ ಪಡಿಸಿರುವ ರಹಸ್ಯ!

ಕಾಂಗ್ರೆಸ್ ನಾಯಕರ ಒಳಸಂಚು!

ಕಾಂಗ್ರೆಸ್ ನಾಯಕರ ಒಳಸಂಚು!

ಜೆಡಿಎಸ್ ಬೆಳವಣಿಗೆಯನ್ನು ಸಹಿಸಲಾಗದೇ ಉಪ ಚುನಾವಣೆಯಲ್ಲಿ ಸೋಲುವ ಭಯದಿಂದ ಕಾಂಗ್ರೆಸ್‌ ನಾಯಕರು ಒಳಸಂಚು ಮಾಡಿ ನಮ್ಮ ಕುಟುಂಬ ಮತ್ತು ಜೆಡಿಎಸ್ ವಿರುದ್ಧ ದಾಳಿ ನಡೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.‌ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಜೊತೆಗೆ ತಮ್ಮ ವಿರುದ್ಧ ಟೀಕೆ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಸಿದ್ದರಾಮಯ್ಯ ನನ್ನ ಬಗ್ಗೆ ನೇರವಾಗಿ ಮಾತನಾಡಲಾಗದೇ ಇನ್ನೊಬ್ಬರ ಮೂಲಕ ಮಾತನಾಡಿಸುತ್ತಿದ್ದಾರೆ ಎಂದು ಎಚ್‌ಡಿಕೆ ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಬೆಳೆಯಲು ಕಾರಣ ಯಾರು?

ರಾಜ್ಯದಲ್ಲಿ ಬಿಜೆಪಿ ಬೆಳೆಯಲು ಕಾರಣ ಯಾರು?

"ರಾಜ್ಯದಲ್ಲಿ ನಡೆದ ಆಪರೇಷನ್‌ ಕಮಲ, ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲು ಹಾಗೂ ಜಾತ್ಯತೀತ ಶಕ್ತಿಗಳು ದುರ್ಬಲವಾಗಿ ಬಿಜೆಪಿ ಪುಟಿದೇಳಲು ಸಿದ್ದರಾಮಯ್ಯ ಅವರೇ ನೇರ ಕಾರಣ. ರಾಜ್ಯದಲ್ಲಿ ಬಿಜೆಪಿ ಈ ಪ್ರಮಾಣದಲ್ಲಿ ಬೆಳೆಯಲು ಸಿದ್ದರಾಮಯ್ಯ ಅವರೇ ಮೂಲ ಕಾರಣ" ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ರಹಸ್ಯವೊಂದನ್ನು ಬಹಿರಂಗಗೊಳಿಸಿದ್ದಾರೆ. ಅದು ಸೂಟ್‌ಕೇಸ್‌ಗೆ ಸಂಬಂದಿಸಿದ ರಹಸ್ಯ ಎಂಬುದು ಗಮನಿಸಬೇಕಾದ ಸಂಗತಿ.

ಯಡಿಯೂರಪ್ಪರಿಂದ ಸಿದ್ದರಾಮಯ್ಯಗೆ ಕೋಟ್ಯಂತರ ಹಣ?

ಯಡಿಯೂರಪ್ಪರಿಂದ ಸಿದ್ದರಾಮಯ್ಯಗೆ ಕೋಟ್ಯಂತರ ಹಣ?

2008ರಲ್ಲಿ ರಾಜ್ಯದಲ್ಲಿ ಮೊದಲ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದಾಗ, ಆಪರೇಷನ್‌ ಕಮಲದ ಮೂಲಕ ತೆರವಾದ ಇಪ್ಪತ್ತು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಾಗ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಒಳಸಂಚು ರೂಪಿಸಿದ್ದರು. ಆಗ ಕಾಂಗ್ರೆಸ್‌, ಜೆಡಿಎಸ್ ಪಕ್ಷಗಳಿಗೆ ಹಿನ್ನಡೆಯಾಗಿ ಎಲ್ಲಡೆ ಬಿಜೆಪಿಯೇ ಗೆದ್ದಿತ್ತು. ಆಗ ತಮ್ಮ ಆತ್ಮೀಯ ಸ್ನೇಹಿತರೊಬ್ಬರನ್ನು ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಅವರ ಬಳಿಗೆ ಕಳಿಸಿ ಸಿದ್ದರಾಮಯ್ಯ ಎಷ್ಟು ಕೋಟಿ ಹಣ ಪಡೆದುಕೊಂಡರು ಎಂಬುದು ಗೊತ್ತಿದೆ. ನನ್ನ ಬಗ್ಗೆ ಸೂಟ್‌ಕೇಸ್‌ ಆರೋಪ ಮಾಡಿಸುತ್ತಾರಲ್ಲಾ? ಇಪ್ಪತ್ತು ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಎಷ್ಟು ಕಡೆ ಆಗ ಗೆದ್ದಿತ್ತು? ಆಗ ಬಿಜೆಪಿ ಗೆಲುವಿನಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಬಹಳ ದೊಡ್ಡದು. ಯಡಿಯೂರಪ್ಪ ಅವರಿಂದ ಅವರು ಕೋಟ್ಯಂತರ ರೂಪಾಯಿ ಪಡೆದರು. ಯಾರು ಯಡಿಯೂರಪ್ಪ ಅವರ ಬಳಿ ಹೋಗಿ ಹಣ ತೆಗೆದುಕೊಂಡು ಬಂದರೋ ಅವರೇ ನನ್ನ ಬಳಿ ಈ ವಿಷಯವನ್ನು ಹತ್ತಾರು ಸಲ ಹೇಳಿದ್ದಾರೆ. ಎಷ್ಟು ಹಣ ತಂದಿದ್ದೇವೆ ಎಂಬುದನ್ನೂ ಹೇಳಿದ್ದಾರೆ. ನಾನು ಜಾತ್ಯತೀತ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅವರ ನಿಜವಾದ ಜಾತ್ಯತೀತ ಬಣ್ಣ ಇದು ಎಂದು ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

Recommended Video

    ಶಮಿ‌ ಪರ ನಿಂತ ಟೀಂ ಇಂಡಿಯಾ ಕ್ರಿಕೆಟಿಗರು:ಯಾಕೆ ಗೊತ್ತಾ? | Oneindia Kannada
    ಬಿಜೆಪಿ ಗೆಲವು, ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಕಾರಣ?

    ಬಿಜೆಪಿ ಗೆಲವು, ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಕಾರಣ?

    2013ರಲ್ಲಿ ಕೇವಲ 40 ಸೀಟು ಪಡೆದಿದ್ದ ಬಿಜೆಪಿ ಅದೇ 2018ರಲ್ಲಿ 105 ಸೀಟು ಪಡೆಯಲು ಸಾಧ್ಯವಾಗಿದ್ದು ಹೇಗೆ? ಅದಾದ ಮೇಲೆ ಅಧಿಕಾರಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್‌ ಸಮ್ಮಿಶ್ರ ಸರಕಾರವನ್ನು ಅಭದ್ರಗೊಳಿಸಿದ್ದು ಯಾರು? ಭೈರತಿ ಬಸವರಾಜು, ಮುನಿರತ್ನ, ಸೋಮಶೇಖರ್‌ ಅವರಂಥ ನಿಷ್ಠರು ಬಿಜೆಪಿಗೆ ಹೋಗಿದ್ದು ಯಾಕೆ? ಅಂದಿನ ಸಚಿವ ಜಾರ್ಜ್‌ ಮತ್ತು ಭೈರತಿ ಬಸವರಾಜ್‌ ನಡುವಿನ ಗಲಾಟೆಯನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿಯೂ ಸಿದ್ದರಾಮಯ್ಯ ಸರಿ ಮಾಡಲಿಲ್ಲ ಯಾಕೆ? ಬೆಳಗಾವಿಯಲ್ಲಿ ರಮೇಶ್‌ ಜಾರಕಿಹೊಳಿಗೆ ಉಂಟಾದ ಅಸಮಾಧಾನವನ್ನು ಶಮನ ಮಾಡಲಿಲ್ಲ, ಕಾರಣವೇನು? ಎಂದು ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಮೇಲೆ ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+