Job Fair 2025: ವಿಜಯಪುರದಲ್ಲಿ ಏಪ್ರಿಲ್‌ 7ಕ್ಕೆ ಬೃಹತ್‌ ಉದ್ಯೋಗ ಮೇಳ!

ವಿಜಯಪುರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿದ್ದು ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಗುಡ್‌ನ್ಯೂಸ್‌ ಇದೆ. ವಿಜಯಪುರದಲ್ಲಿ ಬೃಹತ್‌ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು. ಸಾವಿರಾರು ಜನರಿಗೆ ಉದ್ಯೋಗ ಸಿಗಲಿದೆ. ವಿಜಯಪುರದಲ್ಲಿ ಎಲ್ಲಿ ಉದ್ಯೋಗ ಮೇಳ ನಡೆಯಲಿದೆ. ಯಾವಾಗ ಹಾಗೂ ಯಾರೆಲ್ಲ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ವಿಜಯಪುರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಭರ್ಜರಿ ಗುಡ್‌ನ್ಯೂಸ್‌ ಇದೆ. ಇಲ್ಲಿ "ಕೌಶಲ್ಯ ರೋಜಗಾರ್ ಉದ್ಯೋಗ ಮೇಳ 2025" ಆಯೋಜಿಸಲಾಗಿದ್ದು. ಈ ಉದ್ಯೋಗ ಮೇಳವು ಏಪ್ರಿಲ್‌ 7ಕ್ಕೆ ನಡೆಯಲಿದೆ. ನೇರ ಸಂದರ್ಶನ; ಉಚಿತ ಪ್ರವೇಶ ಇದಾಗಿರಲಿದ್ದು. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಉದ್ಯೋಗ ಮೇಳ ನಡೆಯಲಿದೆ.

Huge Job Fair in Vijayapura on April 7th

ಸಹಯೋಗದಲ್ಲಿ ಉದ್ಯೋಗ ಮೇಳ: ಸರ್ಕಾರ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಈ ಬೃಹತ್‌ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಕೌಶಾಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆಎಸ್‌ಡಿಸಿ), ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವಿಜಯಪುರ ಹಾಗೂ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಈ ಬೃಹತ್‌ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಸರ್ಕಾರದ ಪ್ರಮುಖ ಸಂಸ್ಥೆಗಳು ಹಾಗೂ ಹಲವು ಪ್ರತಿಷ್ಠಿತ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿರುವುದರಿಂದ ಹೆಚ್ಚು ಉದ್ಯೋಗಾವಕಾಶಗಳು ಸಿಗಲಿವೆ. ಉದ್ಯೋಗ ಹುಡುಕುತ್ತಿರುವ ಯುವಕ ಹಾಗೂ ಯುವತಿಯರಿಗೆ ಇದು ಸುವರ್ಣಾವಕಾಶವಾಗಿದೆ.

ಎಲ್ಲಿ ನಡೆಯಲಿದೆ ಉದ್ಯೋಗ ಮೇಳ: ಇನ್ನು ಕೌಶಲ್ಯ ರೋಜಗಾರ್ ಉದ್ಯೋಗ ಮೇಳ 2025 ಹೆಸರಿನ ಈ ಬೃಹತ್‌ ಉದ್ಯೋಗ ಮೇಳವು ಏಪ್ರಿಲ್‌ 7ರ ಸೋಮವಾರ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಎಸ್‌.ಎಸ್‌ ಕಲಾ ಹಾಗೂ ವಾಣಿಜ್ಯ ಮಹಾವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. ಏಪ್ರಿಲ್‌ 7ರಂದು ಬೆಳಿಗ್ಗೆಯಿಂದ ಸಂಜೆಯ ವರೆಗೆ ಈ ಉದ್ಯೋಗ ಮೇಳ ಇರಲಿದೆ.

ಸಂದರ್ಶನಕ್ಕೆ ಬೇಕಾಗುವ ಪ್ರಮುಖ ದಾಖಲೆಗಳು

* ಅಂಕಪಟ್ಟಿ
* ಪಾಸ್‌ಪೋರ್ಟ್‌ ಸೈಜ್ ಫೋಟೋ
* ಆಧಾರ್‌ ಕಾರ್ಡ್‌ ಜೆರಾಕ್ಸ್‌ ಪ್ರತಿ
* ಕನಿಷ್ಠ 10 ಬಯೋಡೇಟಾ

ಇನ್ನು ಈ ಉದ್ಯೋಗ ಮೇಳದಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರ ವಿತರಣೆ ಮಾಡಲಾಗುವುದು ಎಂದು ಹೇಳಲಾಗಿದೆ.

ಹೆಚ್ಚಿನ ಮಾಹಿತಿಗಾಗಿ: ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ಬಾಗಲಕೋಟ ರಸ್ತೆ, ವಿಜಯಪುರ ದೂರವಾಣಿ: 08352-297019, ಮೊಬೈಲ್ ಸಂಖ್ಯೆ: 9916882159/9741753465 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

ಈಗಲೇ ರಿಜಿಸ್ಟ್ರೇಷನ್ ಮಾಡಿಕೊಳ್ಳಿ: ಇನ್ನು ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವುದಕ್ಕೆ ನೀವು ಕ್ಯೂಆರ್ ಕೋಡ್‌ ಸ್ಕ್ಯಾನ್‌ ಮಾಡಿ ರಿಜಿಸ್ಟ್ರೇಷನ್‌ ಮಾಡಿಕೊಳ್ಳಬಹುದಾಗಿದೆ. ಇನ್ನು ಉದ್ಯೋಗ ಮೇಳಕ್ಕೆ ಕೇವಲ 3 ದಿನಗಳು ಮಾತ್ರ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಇಂದೇ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ರಿಜಿಸ್ಟ್ರೇಷನ್ ಮಾಡಿಕೊಳ್ಳಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+