ವಿಜಯಪುರದಲ್ಲಿ ಕಂಟ್ರಾಕ್ಟರ್ ಮನೆ ಮೇಲೆ ಐಟಿ ದಾಳಿ
ವಿಜಯಪುರ, ನವೆಂಬರ್ 22: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ವಿಜಯಪುರದ ಗುತ್ತಿಗೆದಾರನ ಮನೆ ಮೇಲೆ ಬುಧವಾರ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಿಜಯಪುರ ನಗರದ ಕೆಕೆ ಕಾಲೋನಿಯಲ್ಲಿರುವ ಗುತ್ತಿಗೆದಾರ ಆಲೂರು ನಿವಾಸದ ಮೇಲೆ 8 ಜನ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ದಾಖಲಾತಿಗಳ ಪರಿಶೀಲನೆ ಮಾಡುತ್ತಿದ್ದಾರೆ.

ಜತೆಗೆ ನಗರದ ಬೇರೆ ಬೇರೆ ಭಾಗಗಳಲ್ಲಿ ದಾಳಿ ನಡೆದಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಆದರೆ, ಈ ಬಗ್ಗೆ ಐಟಿ ಅಧಿಕಾರಿಗಳು ಮಾಹಿತಿ ನೀಡಲು ನಿರಾಕರಿಸಿದ್ದು, ದಾಳಿ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.












Click it and Unblock the Notifications