ವಿಜಯಪುರದಲ್ಲಿ ಫೆ. 28, 29ರಂದು ಉದ್ಯೋಗ ಮೇಳ

ವಿಜಯಪುರ, ಫೆಬ್ರವರಿ 07 : ವಿಜಯಪುರದಲ್ಲಿ ಫೆಬ್ರವರಿ 28 ಮತ್ತು 29ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಯುವಕ/ಯುವತಿಯರು ಉದ್ಯೋಗ ಮೇಳದ ಉಪಯೋಗ ಪಡೆದುಕೊಳ್ಳುವಂತೆ ಕರೆ ನೀಡಲಾಗಿದೆ.

ಕರ್ನಾಟಕ ಸರ್ಕಾರದ ನಿರ್ದೇಶನದನ್ವಯ ಜಿಲ್ಲಾಡಳಿತ, ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಎರಡು ದಿನಗಳ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಮೇಳಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

"ಸೋಲಾಪೂರ ರಸ್ತೆಯ ಬಿಎಲ್‍ಡಿಇ ಕಾಲೇಜ್ ಹತ್ತಿರ ಇರುವ ಸರ್ಕಾರಿ ಐಟಿಐ ಕಾಲೇಜ್ ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಉದ್ಯೋಗ ಮೇಳವನ್ನು ಯಶಸ್ವಿಗೊಳಿಸಬೇಕು" ಎಂದು ಜಿಲ್ಲಾಧಿಕಾರಿಗಳು ಹೇಳಿದರು.

Job Fair In Vijayapura On February 28 And 29

ಉದ್ಯೋಗ ಮೇಳಕ್ಕೆ ಸುಮಾರು 5 ಸಾವಿರಕ್ಕಿಂತ ಹೆಚ್ಚು ಉದ್ಯೋಗಾಕಾಂಕ್ಷಿಗಳು ಆಗಮಿಸುವ ನಿರೀಕ್ಷೆ ಇದೆ. ಯುವಕ/ಯುವತಿಯರಿಗೆ ಉದ್ಯೋಗ ಮೇಳದ ಕುರಿತು ಅಗತ್ಯ ಮಾಹಿತಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಕಂಪನಿಗಳು, ಸಮಯ ಮುಂತಾದ ಮಾಹಿತಿಗಳನ್ನು ಶೀಘ್ರದಲ್ಲಿಯೇ ಜಿಲ್ಲಾಡಳಿತ ನೀಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+