ಧರ್ಮರಾಜ್ ಚಡಚಣ ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು

ವಿಜಯಪುರ, ಏಪ್ರಿಲ್ 25: ಗಂಗಾಧರ ಚಡಚಣ ಹತ್ಯೆ ಪ್ರಕರಣದಲ್ಲಿ ಈ ಹಿಂದೆ ಜಾಮೀನು ಪಡೆದುಕೊಂಡಿದ್ದ ಮೂವರು ಆರೋಪಿಗಳಿಗೆ ಧರ್ಮರಾಜ್ ಚಡಚಣ ಹತ್ಯೆ ಪ್ರಕರಣದಲ್ಲಿಯೂ ಗುರುವಾರ ಜಾಮೀನು ದೊರೆತಿದೆ.

ಲೋಕಸಭಾ ಚುನಾವಣೆ ವಿಶೇಷ ಪುಟ

ಗುರುವಾರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ಪೀಠ, ಸಹೋದರರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಮುಖ ಆರೋಪಿಗಳಿಗೆ ಧರ್ಮರಾಜ್ ಚಡಚಣ ಕೊಲೆ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿತು.

ಎರಡೂ ಕೊಲೆ ಪ್ರಕರಣಗಳಲ್ಲಿ ಎ ಒನ್ ಆರೋಪಿಯಾಗಿರುವ ಮಹಾದೇವ ಬೈರಗೊಂಡ, ಎ 4 ಆರೋಪಿ ಸಿದ್ದಗೊಂಡ ಮುಡುವೆ, ಎ 5 ಆರೋಪಿ ಶಿವಾನಂದ ಬಿರಾದಾರ್ ಅವರಿಗೆ ಹೈಕೋರ್ಟ್ ಪೀಠ ಜಾಮೀನು ನೀಡಿದೆ.

kalburgi high court granted bail three accused Dharmaraj Chadachana encounter murder case

2017ರ ಅಕ್ಟೋಬರ್ 30ರಂದು ವಿಜಯಪುರ ಜಿಲ್ಲೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹದ ಬಗ್ಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆಗ ಮನೆಯೊಂದರ ಮೇಲೆ ದಾಳಿ ನಡೆಸಿದಾಗ ಧರ್ಮರಾಜ್ ಚಡಚಣ ಅಡಗಿ ಕುಳಿತಿರುವ ಮಾಹಿತಿ ಸಿಕ್ಕಿತ್ತು. ಪೊಲೀಸರು ಬಂಧಿಸಲು ಮುಂದಾದಾಗ ಅವರ ಮೇಲೆ ಗುಂಡು ಹಾರಿಸಲಾಯಿತು. ಪೊಲೀಸರು ಆತ್ಮರಕ್ಷಣೆಗಾಗಿ ಪ್ರತಿಯಾಗಿ ಗುಂಡು ಹಾರಿಸಿದಾಗ ಧರ್ಮರಾಜ್ ಚಡಚಣ ಗುಂಡೇಟಿನಿಂದ ಗಾಯಗೊಂಡಿದ್ದ. ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಈ ಎನ್‌ಕೌಂಟರ್ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+