Basavana Bagewadi Constituency: ಶಿವಾನಂದ ಪಾಟೀಲ- ಅಪ್ಪುಗೌಡ ಪಾಟೀಲ ನಡುವೆ ತೀವ್ರ ಪೈಪೋಟಿ
ಈ ಬಾರಿ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನೇರ ಪೈಪೋಟಿ ಇದೆ. ಕಾಂಗ್ರೆಸ್ ಬಿಜೆಪಿ ಸೆಣಸಲಿವೆ. ಇದಕ್ಕೆ ಸಂಬಂಧಿಸಿದ ವರದಿ, ವಿಶ್ಲೇಷಣೆ ಓದಿ.
ಬಸವನ ಬಾಗೇವಾಡಿ ನಗರವು ವಿಜಯಪುರ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಬಸವನ ಬಾಗೇವಾಡಿ ನಗರವು ವಿಜಯಪುರ ಜಿಲ್ಲೆಯ ಪ್ರಸಿದ್ಧ ಹಾಗೂ ಪ್ರಾಚೀನ ಸ್ಥಳ. ವಿಜಯಪುರ ಜಿಲ್ಲಾ ಕೇಂದ್ರದಿಂದ 43 ಕಿಲೋ ಮೀಟರ್ ದೂರದಲ್ಲಿರುವ ಈ ನಾಡು ಪವಿತ್ರ ಪುಣ್ಯಕ್ಷೇತ್ರವಾಗಲು ಕಾರಣವೇ ಭಕ್ತಿ ಭಂಡಾರಿ ಬಸವಣ್ಣನವರು. ಬಸವೇಶ್ವರು ಹುಟ್ಟಿದ ಈ ಪುಣ್ಯಭೂಮಿ ಇತಿಹಾಸ ಪ್ರಸಿದ್ಧ ನಾಡಾಗಿ ವಿಶ್ವದ ಗಮನ ಸೆಳೆದಿದೆ.
ಮುಂಬರುವ ಚುನಾವಣಾ ಸಮರಕ್ಕೆ ಸಜ್ಜಾಗಿರುವ ಬಸವನ ಬಾಗೇವಾಡಿ ಕ್ಷೇತ್ರ ಕರ್ನಾಟಕ ರಾಜ್ಯದ 224 ಕ್ಷೇತ್ರಗಳ ಪೈಕಿ ಒಂದು. 2018ರ ಕಳೆದ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯ ಗಳಿಸಿದ್ದರು. ಇಲ್ಲಿ 2018ರಲ್ಲಿ ಕಾಂಗ್ರೆಸ್‌ನ ಶಿವಾನಂದ ಪಾಟೀಲ ಗೆಲುವು ಸಾಧಿಸಿದ್ದರು. ಜನತಾ ದಳ (ಜಾತ್ಯತೀತ)ಯ ಅಪ್ಪುಗೌಡ ಪಾಟೀಲ 3186 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಬಸವನ ಬಾಗೇವಾಡಿ ಕ್ಷೇತ್ರದ ಚುನಾವಣಾ ಇತಿಹಾಸ, ಈಗಿನ ಬೆಳವಣಿಗೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಕ್ಷೇತ್ರದ ಇತಿಹಾಸ
2 ನೇ ಶತಮಾನದಲ್ಲಿ ವಚನ ಸಾಹಿತ್ಯದ ಮೂಲಕ ಜಾತಿ ವ್ಯವಸ್ಥೆಯ ವಿರುದ್ಧ ಸಮರ ಸಾರಿದ, ಸಾಮಾಜಿಕ ಜಾಗೃತಿಗೆ ಮುನ್ನುಡಿ ಬರೆದ ಬಸವಣ್ಣನವರು ಲಿಂಗೈಕ್ಯರಾದ ಇದು ವಿಜಯಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಕೇಂದ್ರಗಳಲ್ಲೊಂದು. ಬಸವನ ಬಾಗೇವಾಡಿಯನ್ನು 2013 ರ ಫೆಬ್ರವರಿ ಬಜೆಟ್ ನಲ್ಲಿ ಕರ್ನಾಟಕ ಸರ್ಕಾರ ಹೊಸ ತಾಲೂಕನ್ನಾಗಿ ಘೋಷಿಸಿತ್ತು. ಇಲ್ಲಿನ ಕೃಷ್ಣಾ ನದಿಗೆ ಕಟ್ಟಲಾದ ಆಲಮಟ್ಟಿ ಜಲಾಶಯ ಏಷ್ಯಾ ಖಂಡದಲ್ಲೇ ಅತೀ ದೊಡ್ಡದು ಎಂಬ ಖ್ಯಾತಿ ಗಳಿಸಿದೆ. ಆಲಮಟ್ಟಿ ಜಲಾಶಯದಿಂದಾಗಿ ಜಮೀನು, ಮನೆ ಕಳೆದುಕೊಂಡವರು ನೂರಾರು ಜನ. ಇಲ್ಲಿನ ಇಳಕಲ್ಲು ಸೀರೆ ಮತ್ತು ಖಾದಿ ಬಟ್ಟೆ ದೇಶದಲ್ಲೇ ಪ್ರಸಿದ್ಧಿ ಪಡೆದಿದೆ. ಇಲ್ಲಿ ಹೆಚ್ಚು ಲಂಬಾಣಿ ಜನರನ್ನೂ ಕಾಣಬಹುದು.
ಕರ್ನಾಟಕದ ಉತ್ತರದ ಗಡಿಯಲ್ಲಿರುವ ಬಸವನ ಬಾಗೇವಾಡಿ ತಾಲ್ಲೂಕವು ಉತ್ತರಕ್ಕೆ ವಿಜಯಪುರ ತಾಲ್ಲೂಕು, ಪಶ್ಚಿಮಕ್ಕೆ ವಿಜಯಪುರ ತಾಲ್ಲೂಕು ದಕ್ಷಿಣಕ್ಕೆ ಬೀಳಗಿತಾಲ್ಲೂಕು ಮತ್ತು ಪೂರ್ವಕ್ಕೆ ಮುದ್ದೇಬಿಹಾಳ ತಾಲ್ಲೂಕು ಇದೆ. ಈ ತಾಲ್ಲೂಕದ ವಿಸ್ತೀರ್ಣ 2225 ಚ.ಕಿಮೀ ಮತ್ತು ವಾರ್ಷಿಕ ಮಳೆ 59.5ಸೆ.ಮೀ. ಇದೆ. ಬಸವನ ಬಾಗೇವಾಡಿ ತಾಲ್ಲೂಕವು 143 ಹಳ್ಳಿಗಳು, 32 ಗ್ರಾಮ ಪಂಚಾಯತಗಳು ಹಾಗೂ 4 ಹೊಬಳ್ಳಿಗಳನ್ನೊಳಗೊಂಡಿದೆ.
ಕರ್ನಾಟಕ ಸರ್ಕಾರವು ಫೆಬ್ರುವರಿ 8,2013 ರಂದು ವಾರ್ಷಿಕ ಮುಂಗಡ ಪತ್ರದ ಪ್ರಕಾರ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ ನಿಡಗುಂದಿ ಮತ್ತು ಕೊಲ್ಹಾರ ನಗರಗಳನ್ನು ಹೊಸ ತಾಲ್ಲೂಕನ್ನಾಗಿ ರಚಿಸಿದೆ.
ಪ್ರಮುಖ ಬೆಳೆ: ಇಲ್ಲಿ ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮಿಶ್ರಿತ ವಿಶಿಷ್ಠವಾದ ಕನ್ನಡ ವಿಜಯಪುರ ಕನ್ನಡವೆಂದೇ ಗುರುತಿಸಲ್ಪಡುತ್ತದೆ. ಒಕ್ಕಲುತನ ಮುಖ್ಯ ಉದ್ಯೋಗ. ಜೊತೆಗೆ ಕೆಲವೊಂದು ಗ್ರಾಮಗಳಲ್ಲಿ (ಚಡಚಣ, ತಾಂಬಾ, ವಂದಾಲ ಮುಂ.)ನೇಕಾರಿಕೆ ಇದೆ. ಪ್ರಮುಖ ಬೆಳೆಗಳು: ಜೋಳ, ಸಜ್ಜೆ, ಶೇಂಗಾ, ಚಿಕ್ಕು, ಸೂರ್ಯಕಾಂತಿ, ಉಳ್ಳಾಗಡ್ಡಿ (ಈರುಳ್ಳಿ). ದ್ರಾಕ್ಷಿ, ದಾಳಿಂಬೆ, ನಿಂಬೆ ಹಣ್ಣುಗಳು ಪರರಾಜ್ಯ ಹಾಗೂ ಪರದೇಶಗಳಿಗೆ ರಫ್ತು ಆಗುತ್ತವೆ.

ಬಸವನ ಬಾಗೇವಾಡಿ ಸ್ಥಳೀಯ ಸಮಸ್ಯೆಗಳು
ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರ ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ಬಸವನ ಬಾಗೇವಾಡಿ ಪುರಸಭೆ ವ್ಯಾಪ್ತಿಯಲ್ಲಿ 23 ವಾರ್ಡ್ ಗಳಿದ್ದು 23 ಚುನಾಯಿತ ಸದಸ್ಯರು ಹಾಗೂ 5 ನಾಮನಿರ್ದೇಶಿತ ಸದಸ್ಯರಿರುತ್ತಾರೆ. ಬಸವನ ಬಾಗೇವಾಡಿ ಮತಕ್ಷೇತ್ರ(2018)ದಲ್ಲಿ 1,01,345 ಪುರುಷರು, 95,044 ಮಹಿಳೆಯರು ಸೇರಿ ಒಟ್ಟು 1,96,389 ಮತದಾರರಿದ್ದಾರೆ.
ಸಮಾನತೆಯ ಹರಿಹಾರ, ಜಗತ್ತಿನ ಮೂಢನಂಬಿಕೆ ತೊಡೆಯಲು ವೈಚಾರಿಕ ಪ್ರಜ್ಞೆಯ ಬೆಳಕು ನೀಡಿದ ಬಸವೇಶ್ವರ ಜನ್ಮಭೂಮಿ ಬಸವನಬಾಗೇವಾಡಿ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳಂತೆ ಅಭಿವೃದ್ಧಿ ಹೀನ ತಾಲೂಕುಗಳಲ್ಲಿ ಒಂದು. ಕೃಷ್ಣೆಯನ್ನೇ ಒಡಲಲ್ಲಿ ಇರಿಸಿಕೊಂಡರೂ ಕ್ಷೇತ್ರದಲ್ಲಿ ಕುಡಿಯುವ ನೀರಿನ ದಾಹ ಇದ್ದೇ ಇದೆ. ಕಾಂಗ್ರೆಸ್ ಭದ್ರಕೋಟೆ ಎನಿಸಿರುವ ಈ ನೆಲವನ್ನು ಮತ್ತೆ ಸ್ವಾಧೀನಕ್ಕೆ ಪಡೆಯಲು ಬಿಜೆಪಿ ಹವಣಿಸುತ್ತಿದ್ದರೆ, ಒಂದು ಬಾರಿಯಾದರೂ ಖಾತೆ ತೆರೆಯಲು ಜೆಡಿಸ್ ಪೈಪೋಟಿ ನಡೆಸಿದೆ.
ನೀರಾವರಿ ಈ ಕ್ಷೇತ್ರದ ಬಹು ದೊಡ್ಡ ಬಲವಾದರೆ, ನೀರಾವರಿ ಹಾಗೂ ವಿದ್ಯುತ್ ಯೋಜನೆಗಳಿಗೆ ಭೂಮಿ ಕಳೆದುಕೊಂಡು ಸಂತ್ರಸ್ತರ ಸಮಸ್ಯೆಯೇ ಇಲ್ಲಿನ ಬಲಹೀನತೆ. ಕೃಷ್ಣಾ ನದಿಗೆ ನಿರ್ಮಿಸಿರುವ ಲಾಲಬಹದ್ದೂರ ಶಾಸ್ತ್ರಿ ಜಲಾಶಯ ಇರುವುದು ಇದೇ ಕ್ಷೇತ್ರದ ಆಲಮಟ್ಟಿಯಲ್ಲಿ. ಸಂತ್ರಸ್ತರ ಪುನರ್ವಸತಿ ಕೇಂದ್ರಗಳು ಅಭಿವೃದ್ಧಿಗೆ ಕಾಯುತ್ತಿವೆ. ಈಚೆಗಷ್ಟೇ ತಲೆ ಎತ್ತಿರುವ ದೇಶಕ್ಕೆ ಬೆಳಕು ನೀಡುವ ಮಹತ್ವಾಕಾಂಕ್ಷೆಯ ಎನ್‌ಟಿಪಿಸಿ ಕೂಡಗಿ ಯೋಜನೆ ಕೂಡ ಈ ಕ್ಷೇತ್ರದಲ್ಲೇ ಇದೆ. ಪರಿಸರಕ್ಕೆ ಹಾನಿ ಎಂಬ ಕಾರಣಕ್ಕೆ ಈ ಯೋಜನೆ ವಿರೋಧಿಸಿ ರೈತರು ಗುಂಡೇಟು ತಿಂದಿದ್ದು, ನೂರಾರು ರೈತರು ಜೈಲು ಪಾಲಾಗಿ ಕೋರ್ಟ್ ಅಲೆಯುತ್ತಿದ್ದರು. ಈಚೆಗಷ್ಟೇ ಈ ರೈತರ ಮೇಲಿನ ಮೊಕದ್ದಮೆ ಹಿಂಪಡೆಯುವ ಮೂಲಕ ಸರ್ಕಾರ ರೈತರಿಗೆ ಸಂಕಷ್ಟದಿಂದ ಮುಕ್ತಿ ನೀಡಿದೆ.

ಕಾಂಗ್ರೆಸ್ ಭದ್ರಕೋಟೆ ಬಸವನ ಬಾಗೇವಾಡಿ
ಇಂಥ ನೆಲಕ್ಕೆ ಒಂದೂವರೆ ದಶಕದ ಹಿಂದೆ ಕಾಲಿಟ್ಟವರು ತಿಕೋಟಾ ಕ್ಷೇತ್ರದಲ್ಲಿ ಜನತಾದಳ ಹಾಗೂ ಬಿಜೆಪಿಯಿಂದ ಎರಡು ಬಾರಿ ಶಾಸಕರಾಗಿದ್ದ ಶಿವಾನಂದ ಪಾಟೀಲ. ಈ ಕ್ಷೇತ್ರದಿಂದಲೂ ಮೂರು ಬಾರಿ ಶಾಸಕರಾಗಿರುವ ಶಿವಾನಂದ ಪಾಟೀಲ ಅವರು ಐದು ಬಾರಿ ಶಾಸಕರಾಗಿ ಸಚಿವರಾಗಿದ್ದಾರೆ.ಇದೇ ಕ್ಷೇತ್ರದಿಂದ ಸೋಮನಗೌಡ(ಅಪ್ಪು) ಪಾಟೀಲ ಅವರ ತಂದೆ ಬಿ.ಎಸ್.ಪಾಟೀಲ(ಮನಗೂಳಿ) ಅವರನ್ನು 6 ಬಾರಿ ಆಯ್ಕೆ ಮಾಡಿದ್ದ ಕ್ಷೇತ್ರದ ಮತದಾರರು, ಅವರು ಸಚಿವರಾಗಲು ನೆರವಾಗಿದ್ದರು.
ಮಾಜಿ ಸಿಎಂ ಬಂಗಾರಪ್ಪ ಅವರ ಕೆಸಿಪಿ ಪಕ್ಷದಿಂದ ಸ್ಪರ್ಧಿಸಿ ಸೋತಿದ್ದ ಸಂಗಪ್ಪ ಕಲ್ಲಪ್ಪ ಬೆಳ್ಳುಬ್ಬಿ ಬಿಜೆಪಿ ಸೇರುವ ಮೂಲಕ ಬಸವನಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್ ಭದ್ರಕೋಟೆ ಛಿದ್ರಗೊಳಿಸಿ ಎರಡು ಬಾರಿ ಗೆದ್ದವರು. ತಮ್ಮ ಮೂಲಕ ಬಿಜೆಪಿ ಖಾತೆ ತೆರೆದ ಎಸ್.ಕೆ. ಬೆಳ್ಳುಬ್ಬಿ ಅಪ್ಪಟ ಹಳ್ಳಿ ಸೊಗಡಿನ ರಾಜಕೀಯ ನಾಯಕ. ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಪಂಚಾಯಿತಿ ಮಟ್ಟದಿಂದಲೇ ವಿಧಾನಸಭೆ ತನಕ ರಾಜಕಾರಣದಲ್ಲಿ ಯಶಸ್ಸು ಕಂಡವರು.
1978ರಲ್ಲಿ ಗ್ರಾಪಂ ಸದಸ್ಯರಾಗಿ ಆಯ್ಕೆಯಾದ ಬೆಳ್ಳುಬ್ಬಿ, 1983ರಲ್ಲಿ ಕೊಲ್ಹಾರ ಗ್ರಾಪಂ ಅಧ್ಯಕ್ಷರಾಗಿದ್ದರು. 1987ರಲ್ಲಿ ಮಂಡಲ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿ ಮಂಡಲ ಪ್ರಧಾನ ಹುದ್ದೆಯನ್ನೂ ಗಿಟ್ಟಿಸಿಕೊಂಡರು. 1994ರಲ್ಲಿ ಕೆಸಿಪಿ ಪಕ್ಷದಿಂದ ಬಸವನಬಾಗೇವಾಡಿ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸುವ ಮೊದಲ ಪ್ರಯತ್ನ ಫಲಿಸಲಿಲ್ಲ. ಮತ್ತೆ 1999ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಬೆಳ್ಳುಬ್ಬಿ ಶಾಸಕರಾಗಿ ಆಯ್ಕೆಯಾದರು. 2008ರಲ್ಲಿ 2ನೇ ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಕೆಲ ತಿಂಗಳು ಮಂತ್ರಿಸ್ಥಾನವನ್ನೂ ಅಲಂಕರಿಸಿದ್ದರು. 2004 ಹಾಗೂ 2013ರ ಚುನಾವಣೆಯಲ್ಲಿ ಸೋಲಿನ ಕಹಿ ಅನುಭವಿಸಿದ್ದಾರೆ.
13 ಚುನಾವಣೆ ಕಂಡಿರುವ ಬಸವ ಜನ್ಮಭೂಮಿ ಬಸವನಬಾಗೇವಾಡಿ ಕ್ಷೇತ್ರದಲ್ಲಿ 8 ಬಾರಿ ಗೆದ್ದಿರುವ ಕಾಂಗ್ರೆಸ್, ಒಂದು ಬಾರಿ ಅಂಗ ಪಕ್ಷ ಕಾಂಗ್ರೆಸ್-ಐ ಅಭ್ಯರ್ಥಿಯನ್ನೂ ಆಯ್ಕೆ ಮಾಡಿ ಕಾಂಗ್ರೆಸ್ ಭದ್ರಕೋಟೆ ಎನಿಸಿದೆ. ಕ್ಷೇತ್ರಕ್ಕೆ ನಡೆದ ಮೊದಲ ಎರಡು ಚುನಾವಣೆಯಲ್ಲಿ ಸುಶೀಲಾಬಾಯಿ ಶಹಾ ಎಂಬ ಮಹಿಳೆ ಗೆದ್ದಿರುವುದು ವಿಶೇಷ. ಮಹಿಳಾ ಸಮಾನತೆ ಹರಿಕಾರ ಬಸವ ಜನ್ಮಭೂಮಿ ಜನರು ಮಹಿಳೆಯನ್ನು ಆಯ್ಕೆ ಮಾಡಿದ್ದೇ ಬಸವ ತತ್ವಕ್ಕೆ ಆದ್ಯತೆ ನೀಡಿದ್ದಕ್ಕೆ ಸಾಕ್ಷಿ. ವ್ಯಕ್ತಿ ಪೂಜೆಗೆ ಆದ್ಯತೆ ನೀಡಿರುವ ಈ ಕ್ಷೇತ್ರ ಮನಗೂಳಿಯ ಬಿ.ಎಸ್. ಪಾಟೀಲ ಅವರನ್ನು 6 ಬಾರಿ ವಿಧಾನಸೌಧಕ್ಕೆ ಕಳಿಸಿದ್ದು, ಎಸ್.ಕೆ.ಬೆಳ್ಳುಬ್ಬಿ ಅವರ ಮೂಲಕ ಬಿಜೆಪಿ ಎರಡು ಬಾರಿ ಇಲ್ಲಿ ನೆಲೆ ಕಂಡುಕೊಂಡಿದೆ. ಕುಮಾರಗೌಡ ಪಾಟೀಲ ಸೇರಿ ಇಬ್ಬರು ಈ ಕ್ಷೇತ್ರದಲ್ಲಿ ಜನತಾಪಕ್ಷದಿಂದ ಗೆದ್ದಿದ್ದಾರೆ.

ಕ್ಷೇತ್ರದ ವಿಶೇಷತೆ
ಕಾಂಗ್ರೇಸಿನ ಬಿ.ಎಸ್.ಪಾಟೀಲ(ಮನಗೂಳಿ)ರು 6 ಸಲ ಆಯ್ಕೆಯಾಗಿ ವೀರಪ್ಪ ಮೊಯ್ಲಿ ಸಂಪುಟದಲ್ಲಿ ನೀರಾವರಿ ಸಚಿವರಾಗಿದ್ದರು.
ಕ್ಷೇತ್ರದಿಂದ 1957 ಮತ್ತು 1962ರಲ್ಲಿ ಕಾಂಗ್ರೇಸಿನಿಂದ ಸುಶಿಲಾಬಾಯಿ ಶಹಾ ಅವರನ್ನು ಆಯ್ಕೆ ಮಾಡಿ ವಿಜಯಪುರ ಜಿಲ್ಲೆಯ ಪ್ರಪ್ರಥಮ ಮಹಿಳಾ ಶಾಸಕಿಯಾಗಿದ್ದರು.
ಬಿಜೆಪಿಯಿಂದ ಎಸ್.ಕೆ.ಬೆಳ್ಳುಬ್ಬಿಯವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿ 2008ರಲ್ಲಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ತೋಟಗಾರಿಕಾ ಸಚಿವರಾಗಿದ್ದರು.
ಕ್ಷೇತ್ರದಿಂದ ಕಾಂಗ್ರೇಸಿನ ಶಿವಾನಂದ ಪಾಟೀಲ ಮೂರು ಬಾರಿ ಆಯ್ಕೆಯಾಗಿ ಹೆಚ್.ಡಿ.ಕುಮಾರಸ್ವಾಮಿಯವರ ಸಮ್ಮಿಶ್ರ ಸರಕಾರದ ಸಂಪುಟದಲ್ಲಿ ಆರೋಗ್ಯ ಸಚಿವರಾಗಿದ್ದರು.

ಜೆಡಿಎಸ್ ತೊರೆದು ಬಿಜೆಪಿ ಸೇರಿದ ಅಪ್ಪುಗೌಡ ಪಾಟೀಲ
ಮನಗೂಳಿಯ ಅಪ್ಪುಗೌಡ ಪಾಟೀಲ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್‌ನ ಹಾಲಿ ಶಾಸಕ ಶಿವಾನಂದ ಪಾಟೀಲರಿಗೆ ಅಪ್ಪು ಗೌಡರು ಬಿಜೆಪಿಯಿಂದ ಸ್ಪರ್ಧಿಸಿದರೆ ಢವ ಢವ ಶುರು ಎಂದೂ ನಾನಾ ಜನರಿಂದ ಮಾತು ಜೋರಾಗಿ ಕೇಳಿ ಬರುತ್ತಿವೆ. ಬರುವ ಚುನಾವಣೆಯಲ್ಲಿ ಈ ಕ್ಷೇತ್ರ ರಣ ಕಣವಾಗುವುದು ಪಕ್ಕಾ ಎಂಬುದನ್ನು ಈಗಲೇ ಈಗಿನ ರಾಜಕೀಯದ ಆಟಗಳು ಜನರಿಗೆ ಎತ್ತಿ ತೋರಿಸಿವೆ.
ಶಿವಾನಂದ ಪಾಟೀಲರು ಪ್ರಸ್ತುತ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕರು. ಇವರು ಮಾಜಿ ನಗರ ಸಭೆ ಅಧ್ಯಕ್ಷರು, ಡಿ. ಸಿ. ಸಿ ಬ್ಯಾಂಕಿನ ಅಧ್ಯಕ್ಷರು, ಉದ್ಯಮಿಗಳು ಹಾಗೂ ರಾಜಕೀಯ ಧುರೀಣರು ಆಗಿದ್ದಾರೆ. 2018ರಲ್ಲಿ ಕಾಂಗ್ರೆಸ್‌ನ ಶಿವಾನಂದ ಪಾಟೀಲ ಗೆಲುವು ಸಾಧಿಸಿದ್ದರು. ಜನತಾ ದಳ (ಜಾತ್ಯತೀತ)ಯ ಅಪ್ಪುಗೌಡ ಪಾಟೀಲ 3186 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications