Nagatana Constituency: ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ನಾಗಠಾಣ ಕಿರು ಪರಿಚಯ
ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿ ಗುರುತಿಸಿಕೊಂಡ ನಾಗಠಾಣ ವಿಧಾನಸಭಾ ಕ್ಷೇತ್ರವು, ವಿಜಯಪುರ ಜಿಲ್ಲೆಯ ಒಂದು ಪ್ರಮುಖ ವಿಧಾನಸಭಾ ಕ್ಷೇತ್ರ. ವಿಜಯಪುರ-ಇಂಡಿ ರಸ್ತೆಯಲ್ಲಿ ಈ ಊರು ನೆಲೆಸಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿರುವುದರಿಂದ ಈ ಊರಿನ ಮೇಲೆ ಮರಾಠಿ ಪ್ರಭಾವ ಸಾಕಷ್ಟಿದೆ.
ಐತಿಹಾಸಿಕವಾಗಿಯೂ ಈ ಸ್ಥಳ ಹಲವು ಮಹತ್ವಗಳನ್ನು ಹೊಂದಿದೆ. ಬೀರಸಿದ್ದೇಶ್ವರ, ಉದಯೇಶ್ವರ, ಮಲ್ಲಿಕಾರ್ಜುನ ಸ್ವಾಮಿ ಎಂಬ ಮೂರು ದೇವಾಲಯಗಳು ಇಲ್ಲಿ ಪ್ರಸಿದ್ಧಿ ಪಡೆದಿವೆ. ಬೀರಸಿದ್ದೇಶ್ವರ ಮತ್ತು ಪರಮಾನಂದ ಜಾತ್ರೆಗಳನ್ನು ಪ್ರತಿ ವರ್ಷ ದೀಪಾವಳಿಯ ಸಮಯದಲ್ಲಿ ಆಚರಿಸಲಾಗುತ್ತದೆ.
ರಾಜ್ಯದಲ್ಲೇ ಹೆಚ್ಚು ವಿಸ್ತಾರವುಳ್ಳ ಎರಡನೇ ವಿಧಾನಸಭಾ ಕ್ಷೇತ್ರ ಎಂಬ ಹೆಗ್ಗಳಿಕೆ ಹೊಂದಿರುವ ನಾಗಠಾಣ ವಿಧಾನಸಭಾ ಕ್ಷೇತ್ರದ್ದು. ಮಾಜಿ ಶಾಸಕ ಆರ್.ಕೆ.ರಾಠೋಡ ಪಂಚಾಯಿತಿ ರಾಜಕಾರಣವನ್ನು ಮೆಟ್ಟಿಲಾಗಿಸಿಕೊಂಡು ವಿಧಾನಸಭೆಗೆ ಆಯ್ಕೆಯಾಗಿದ್ದರು. ಹೊರ್ತಿ ಜಿಪಂ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿದ್ದಲ್ಲದೆ ಅಧ್ಯಕ್ಷ ಸ್ಥಾನವನ್ನೂ ಅಲಂಕರಿಸಿದ್ದರು. 2004ರಲ್ಲಿ ಜನತಾದಳದಿಂದ ಬಳ್ಳೊಳ್ಳಿ ಮೀಸಲು ಕ್ಷೇತ್ರದ (ಈಗಿನ ನಾಗಠಾಣ) ಶಾಸಕರಾಗಿ ಆಯ್ಕೆಯಾಗಿದ್ದರು.
2004ರ ಮುಂಚೆ ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರವಾಗಿತ್ತು.1962ರಲ್ಲಿ ಬರಡೋಲ ವಿಧಾನಸಭಾ ಕ್ಷೇತ್ರವೆಂದು ನಾಮಕರಣಗೊಂಡಿತ್ತು. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಈ ಕ್ಷೇತ್ರವನ್ನು 2013 ರಲ್ಲಿ ಕಾಂಗ್ರೆಸ್ ನ ಪ್ರೊ.ರಾಜು ಆಲಗೂರು ಪ್ರತಿನಿಧಿಸಿದ್ದರು. 2018ರ ಕಳೆದ ಚುನಾವಣೆಯಲ್ಲಿ ಇಲ್ಲಿ ಜನತಾ ದಳ (ಜಾತ್ಯತೀತ) ಪಕ್ಷದ ಅಭ್ಯರ್ಥಿ ದೇವಾನಂದ ಚೌಹಾಣ್ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ 5601 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ನಾಗಠಾಣ ಕ್ಷೇತ್ರದ ಚುನಾವಣಾ ಇತಿಹಾಸ, ಈಗಿನ ಬೆಳವಣಿಗೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ನಾಗಠಾಣಾ ಗ್ರಾಮ ಬಿಜಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ನಾಗಠಾಣ ವಿಧಾನಸಭಾ ಕ್ಷೇತ್ರ ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ನಾಗಠಾಣ ಮತಕ್ಷೇತ್ರ(2018)ದಲ್ಲಿ 1,07,407 ಪುರುಷರು, 99,773 ಮಹಿಳೆಯರು ಸೇರಿ ಒಟ್ಟು 2,07,180 ಮತದಾರರಿದ್ದಾರೆ. ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ 70% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.

ನಾಗಠಾಣ ರಾಜಕೀಯ
ರಾಜ್ಯದಲ್ಲೇ ಹೆಚ್ಚು ವಿಸ್ತಾರವುಳ್ಳ ಎರಡನೇ ವಿಧಾನಸಭಾ ಕ್ಷೇತ್ರ ಎಂಬ ಹೆಗ್ಗಳಿಕೆ ಹೊಂದಿರುವ ನಾಗಠಾಣ ವಿಧಾನಸಭಾ ಕ್ಷೇತ್ರದ್ದು. ವಿಜಯಪುರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿ ಗುರುತಿಸಿಕೊಂಡಿದೆ. ರಾಜು ಆಲಗೂರುರವರು 2013ರಲ್ಲಿ ಸಿದ್ದರಾಮಯ್ಯನವರ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಮಂಡಳಿಯ ಅಧ್ಯಕ್ಷ ಹಾಗೂ ಸಂಸದೀಯ ಕಾರ್ಯದರ್ಶಿಗಳಾಗಿದ್ದರು.
ದೇವಾನಂದ ಚವ್ಹಾಣರವರು 2018ರಲ್ಲಿ ಹೆಚ್.ಡಿ.ಕುಮಾರಸ್ವಾಮಿಯವರ ಜೆಡಿಎಸ್-ಕಾಂಗ್ರೇಸ್ ಸಮ್ಮಿಸ್ರ ಸರ್ಕಾರದಲ್ಲಿ ಸಂಸದೀಯ ಕಾರ್ಯದರ್ಶಿಗಳಾಗಿದ್ದರು. ಜೆಟ್ಟೆಪ್ಪ ಕಬಾಡಿಯವರು ಇದೆ ಕ್ಷೇತ್ರದಿಂದ 4 ಬಾರಿ ಆಯ್ಕೆಯಾಗಿದ್ದಾರೆ. ರಾಜು ಆಲಗೂರು, ಸಿದ್ಧಾರ್ಥ ಅರಕೇರಿ 2 ಬಾರಿ ಹಾಗೂ ರಮೇಶ್ ಜಿಗಜಿಣಗಿ 3 ಬಾರಿ ಆಯ್ಕೆಯಾಗಿದ್ದಾರೆ.
ರಮೇಶ್ ಜಿಗಜಿಣಗಿಯವರು 1983ರಲ್ಲಿ ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಗೃಹ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅದರಂತೆ 1984 -85ರಲ್ಲಿ ಅಬಕಾರಿ ಖಾತೆ ರಾಜ್ಯ ಸಚಿವರಾಗಿ, 1996-98ರಲ್ಲಿ ಜೆ.ಎಚ್.ಪಟೇಲ್ ಸಂಪುಟದಲ್ಲಿ ಸಮಾಜ ಕಲ್ಯಾಣ ಮತ್ತು ಕಂದಾಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ದೇವಾನಂದ ಚವ್ಹಾಣ, ಆರ್.ಕೆ.ರಾಠೋಡ ಮತ್ತು ಮನೋಹರ ಐನಾಪುರರವರು ಲಂಬಾಣಿ ಸಮುದಾಯಕ್ಕೆ ಸೇರಿದ ನಾಯಕರಾಗಿದ್ದಾರೆ.

ದಲಿತ ಸಿಎಂ ವಿಚಾರ
ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿಯಾಗಬೇಕು ಎಂಬುದು ಹಿಂದಿನಿಂದಲ್ಲೂ ಸ್ಥಳೀಯರ ಬೇಡಿಕೆಯಾಗಿದೆ. ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದಿವೆ. ಒಟ್ಟು ಜನಸಂಖ್ಯೆಯಲ್ಲಿ ಕೇವಲ ಶೇ. 1ರಷ್ಟಿರುವ ಸಮುದಾಯದವರು ಮುಖ್ಯಮಂತ್ರಿಯಾಗಿ ಹೋಗಿದ್ದಾರೆ. ಶೇ. 2 ರಷ್ಟಿರುವ ಜನರೂ ಸಿಎಂ ಆಗಿ ಹೋಗಿದ್ದಾರೆ. ಆದರೆ, ಶೇ. 24 ರಷ್ಟು ಜನಸಂಖ್ಯೆ ಹೊಂದಿರುವ ದಲಿತರು ಯಾಕೆ ಮುಖ್ಯಮಂತ್ರಿಯಾಗಬಾರದು? ಎಂದು ಇಲ್ಲಿನ ಸ್ಥಳೀಯರ ಪ್ರಶ್ನಯಾಗಿದೆ.
ದಲಿತರನ್ನು ಸಿಎಂ ಮಾಡುವುದು ಆಯಾ ಪಕ್ಷಗಳಿಗೆ ಬಿಟ್ಟಿದ್ದು. ನಮ್ಮ ಪಕ್ಷದಲ್ಲಿ ದಲಿತರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ನಾನು ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತೇನೆ. ನನ್ನ ಜೀವನದಲ್ಲಿ ನಾನೆಂದೂ ಸಿಎಂ ಆಗುವ ಕನಸು ಕಂಡವನಲ್ಲ. ಅಧಿಕಾರ ಮತ್ತು ಹಣವನ್ನು ಬಿಟ್ಟು ನಾನು ದೂರ ಇರುತ್ತೇನೆ ಎಂದು ಸಂಸದ ಹಾಗೂ ಕೇಂದ್ರ ಮಾಜಿ ಸಚಿವರೂ ಆಗಿರುವ ರಮೇಶ ಜಿಗಜಿಣಗಿ ಈ ಹಿಂದೆ ಹೇಳಿದ್ದರು.

ಸಾರ್ವತ್ರಿಕ ಚುನಾವಣೆ ಬಿಜೆಪಿ ಸ್ಪರ್ಧಿ ಯಾರು?
ಮೇ ತಿಂಗಳಲ್ಲಿ ರಾಜ್ಯ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ನಾಗಠಾಣ ಕ್ಷೇತ್ರದಲ್ಲಿ ಸಚಿವ ಗೋವಿಂದ ಕಾರಜೋಳ ಬಹಳಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರ ಪುತ್ರ ಗೋಪಾಲ ಕಾರಜೋಳ ಈ ಬಾರಿ ನೂರಕ್ಕೆ ನೂರು ಗೆಲ್ಲಲ್ಲಿದ್ದಾರೆ ಎಂದು ಹೇಳುವ ಮೂಲಕ ನಾಗಠಾಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಗೊಂದಲ ಮತ್ತು ಕುತೂಹಲಕ್ಕೆ ಗೋವಿಂದ ಕಾರಜೋಳ ತೆರೆ ಎಳೆದಿದ್ದಾರೆ.
ಡಬಲ್ ಇಂಜಿನ್ ಸರ್ಕಾರವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರಲು ಕಮಲ ಪಕ್ಷ ಪ್ರಯತ್ನ ಮಾಡುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದ 224 ಕ್ಷೇತ್ರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಂಚರಿಸಿದೆ. ನಾಗಠಾಣದಲ್ಲಿ ಕಳೆದ ಬಾರಿ ಚುನಾವಣೆಯಲ್ಲಿ ಮೈ ಮರೆತಿದ್ದರಿಂದ ಕೆಲವೇ ಮತಗಳ ಅಂತರದಿಂದ ಬಿಜೆಪಿಗೆ ಸೋಲಾಗಿದೆ. ಅದಕ್ಕೆ ಈ ಬಾರಿ ಬಿಜೆಪಿ ಗೆಲ್ಲಿಸಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲು ಬೆಂಬಲಿಸಿ, ಪ್ರಧಾನಿ ಮೋದಿ ಅವರ ಕೈ ಬಲಪಡಿಸಿ ಎಂದು ಮನವಿ ಮಾಡಲಾಗುತ್ತಿದೆ.
ಬಿಜೆಪಿ ಅಭ್ಯರ್ಥಿಯಾಗಿ ಗೋಪಾಲ ಕಾರಜೋಳ ಅವರು ಈ ಬಾರಿ ಸ್ಪರ್ಧಿಸಲಿದ್ದಾರೆ ಎಂದು ಪಕ್ಷ ನಿರ್ಧರಿಸಿದೆ. ಇನ್ನೂ ನಾಗಠಾಣದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳೆಂದರೆ ಸಂಸದ ರಮೇಶ ಜಿಗಜಿಣಗಿ, ಮಹೇಂದ್ರ ಕುಮಾರ ನಾಯಕ್ ಆಗಿದ್ದಾರೆ.

ಸಾರ್ವತ್ರಿಕ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಯಾರು?
ಇನ್ನೂ ಕಾಂಗ್ರೆಸ್ ಸೇರಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ವಿಠ್ಠಲ ಕಟಕದೊಂಡಗೆ ಈ ಹಿಂದೆ ನಾಗಠಾಣ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ನೀಡಲಾಗಿತ್ತು. ನಾಗಠಾಣ ಮೀಸಲು ಕ್ಷೇತ್ರದ ಹಾಲಿ ಶಾಸಕ ಪ್ರೊ.ರಾಜು ಅಲಗೂರು ಸ್ಪರ್ಧೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರಬಲ ಅಭ್ಯರ್ಥಿ ಇಲ್ಲದೆ ಪರದಾಡುತ್ತಿದ್ದ ಕಾಂಗ್ರೆಸ್‌ಗೆ ಬಿಜೆಪಿಯಿಂದ ಜಿಗಿದ ವಿಠ್ಠಲ ಕಟಕದೊಂಡ ಆಸರೆಯಾಗಿದ್ದರು. ಹಿಂದೆ ಬಿಜೆಪಿಯಲ್ಲಿ ನಡೆದ ವಿದ್ಯಮಾನಗಳಿಂದ ಟಿಕೆಟ್ ತಪ್ಪಿಸಿಕೊಂಡಿದ್ದ ಇದೇ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಮಲ ಪಕ್ಷದ ಜಿಲ್ಲಾಧ್ಯಕ್ಷ ವಿಠ್ಠಲ ಕಟಕದೊಂಡ ಅವರನ್ನೇ ಕಾಂಗ್ರೆಸ್ ಕೈ ವಶ ಮಾಡಿಕೊಂಡಿತು.
2008ರಲ್ಲಿ ಬಿಜೆಪಿಯಿಂದ ಶಾಸಕರಾಗಿದ್ದ ವಿಠ್ಠಲ ಕಟಕದೊಂಡ ಅವರು, 2013ರ ಚುನಾವಣೆಯಲ್ಲಿ ಯಡಿಯೂರಪ್ಪ ಅವರನ್ನು ಬೆಂಬಲಿಸಿ ಕೆಜೆಪಿಯಿಂದ ಸ್ಪರ್ಧಿಸಿದ್ದರು. ಕಾಂಗ್ರೆಸ್ ರಾಜು ಅಲಗೂರ, ಜೆಡಿಎಸ್‌ನ ದೇವಾನಂದ ಚೌಹಾಣ್, ಬಿಜೆಪಿಯ ನಾಗೇಂದ್ರ ಮಾಯವಂಶಿ ವಿರುದ್ಧ ಪೈಪೋಟಿ ನಡೆಸಿದ್ದರು. 2018ರ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಟಕದೊಂಡ 5601 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು.
ಕೆಜೆಪಿಯಿಂದ ಬಿಜೆಪಿಗೆ ಬಂದಿದ್ದ ಕಟಕದೊಂಡ ಈ ಬಾರಿ ಇದೇ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗೆ ಕೈ ಹಾಕುವ ಸಾಧ್ಯತೆ ಇದೆ. ಒಂದು ವೇಳೆ ಕಾಂಗ್ರೆಸ್ ನಿಂದ ಕಟಕದೊಂಡ ಅವರೇ ಅಂತಿಮವಾದರೆ, ದಲಿತರಲ್ಲಿ ಎಡಗೈ (ಡೋಹರ) ಬಣದ ಕಟಕದೊಂಡ, ಈ ಬಾರಿ ಬಿಜೆಪಿಯಿಂದ ಕಣಕ್ಕೆ ಇಳಿದಿರುವ ದಲಿತ ಸಮುದಾಯದ ಎಡಗೈ ಬಣದ ಮಾಜಿ ಸಚಿವ ಗೋಂವಿಂದ ಕಾರಜೋಳ ಅವರ ಪುತ್ರ ಡಾ.ಗೋಪಾಲ ಹಾಗೂ ಬಂಜಾರಾ ಸಮಾಜದ ಜೆಡಿಎಸ್ ಅಭ್ಯರ್ಥಿ ಹಾಗೂ ಕಳೆದ ಬಾರಿ ಕಡಿಮೆ ಅಂತರದಿಂದ ಗೆದ್ದಿದ್ದ ದೇವಾನಂದ ಚೌಹಾಣ್ ವಿರುದ್ಧ ಸೆಣಸಬೇಕಿದೆ.

ನಾಗಠಾಣ ಜೆಡಿಎಸ್ ಅಭ್ಯರ್ಥಿ ಯಾರು?
2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಆಲಗೂರು 45570 ಮತ ಪಡೆದು ಜಯಗಳಿಸಿದರೆ, ಜೆಡಿಎಸ್‌ನ ಚೌಹಾಣ್ 44903 ಮತಗಳನ್ನು ಪಡೆದು ಪ್ರತಿಸ್ಪರ್ಧಿಯಾಗಿ ಸೋಲು ಅನುಭವಿಸಿದ್ದರು. ಕೆಜೆಪಿಯಿಂದ ಸ್ಪರ್ಧಿಸಿದ್ದ ವಿಠ್ಠಲ ಕಟಕದೊಂಡ 24104 ಮತ ಪಡೆದು 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದರು. ಆ ವೇಳೆ ಇಲ್ಲಿ ಬಿಜೆಪಿ 4ನೇ ಸ್ಥಾನಕ್ಕೆ ಹೋಗಿತ್ತು.
2018ರ ಕಳೆದ ಚುನಾವಣೆಯಲ್ಲಿ ಇಲ್ಲಿ ಜನತಾ ದಳ (ಜಾತ್ಯತೀತ) ಪಕ್ಷದ ಅಭ್ಯರ್ಥಿ ದೇವಾನಂದ ಚೌಹಾಣ್ ಗೆಲುವು ಸಾಧಿಸಿದ್ದರು. ದೇವಾನಂದ ಚೌಹಾಣ್ 59,709 ಮತಗಳನ್ನು ಪಡೆಯುವ ಮೂಲಕ 5,601 ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಟಕದೊಂಡ ಅವನ್ನು ಸೋಲಿಸಿದ್ದರು.
ಹೀಗಾಗಿ ಈ ಬಾರಿಯೋ ಜೆಡಿಎಸ್ ದೇವಾನಂದ ಚೌಹಾಣ್ ಅವರಿಗೇ ಮಣೆ ಹಾಕಿದೆ. ದೇವಾನಂದ ಚೌಹಾಣ್ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎನ್ನುವ ವದಂತಿಗಳು ಹರಡಿದಾಗಲೇ ಜೆಡಿಎಸ್ ಈ ನಿರ್ಧಾರವನ್ನು ತೆಗೆದುಕೊಂಡಿದ್ದು ಅಧಿಕೃತವಾಗಿ ಘೋಷಣೆ ಮಾಡಬೇಡಬೇಕಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications